ನವದೆಹಲಿಯಲ್ಲಿ ಇಂದು ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆದಿದ್ದು, ದೆಹಲಿಯ ಮುಖ್ಯಮಂತ್ರಿಯಾಗಿರುವ ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ಗೆಲುವು ಸಾಧಿಸುವ ಮೂಲಕ ಕಲ್ಕಾಜಿ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ದೆಹಲಿ ಸಿಎಂ ಗೆಲುವು ಕಂಡಿದ್ದರೂ ಈ ಬಾರಿಯ ಸಿಎಂ ಅಭ್ಯರ್ಥಿಯಾಗಿದ್ದ ಅರವಿಂದ್ ಕೇಜ್ರಿವಾಲ್ ಹೀನಾಯವಾಗಿ ಸೋಲನ್ನಪ್ಪಿದ್ದಾರೆ. ಈ ಬಾರಿ ಹ್ಯಾಟ್ರಿಕ್ ನಿರೀಕ್ಷೆಯಲ್ಲಿದ್ದ ಆಮ್ ಆದ್ಮಿ ಪಕ್ಷವನ್ನು ದೆಹಲಿ ಮತದಾರರು ತಿರಸ್ಕರಿಸಿದ್ದಾರೆ. ಬಿಜೆಪಿಯ ರಮೇಶ್ ಬಿಧುರಿ ಎದುರು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅತಿಶಿ ಗೆಲುವು ಕಂಡಿದ್ದಾರೆ. ಆದರೆ, ದೆಹಲಿಯಾದ್ಯಂತ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, 27 ವರ್ಷಗಳ ಬಳಿಕ ಇದೀಗ ರಾಷ್ಟ್ರ ರಾಜಧಾನಿಯಲ್ಲಿ ಕೇಸರಿ ಪಕ್ಷ ಅಧಿಕಾರುವುದು ಖಚಿತವಾಗಿದೆ. ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸುತ್ತಿದ್ದಂತೆ ಬೆಳಗ್ಗೆಯಿಂದಲೇ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಹೆಚ್ಚಾಗಿತ್ತು

ನವದೆಹಲಿ: ನವದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಅಂತಿಮ ಹಂತ ತಲುಪಿದೆ. ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಭಾರೀ ಮುನ್ನಡೆ ಅನುಭವಿಸಿದ್ದು, ಗೆಲುವಿನ ನಿರೀಕ್ಷೆಯಲ್ಲಿದೆ. ಆದರೆ, ದೆಹಲಿಯ ಮುಖ್ಯಮಂತ್ರಿಯಾಗಿರುವ ಅತಿಶಿ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಅವರನ್ನು ಸೋಲಿಸಿ ಗೆಲುವು ಕಂಡಿದ್ದಾರೆ. ಅತಿಶಿ ಸ್ಪರ್ಧಿಸಿದ್ದ ಕಲ್ಕಾಜಿ ವಿಧಾನಸಭಾ ಕ್ಷೇತ್ರದಲ್ಲಿ ಬರೋಬ್ಬರಿ 32 ವರ್ಷಗಳಿಂದ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಈ ಕ್ಷೇತ್ರದ ಕಡೆಗೆ ಬಿಜೆಪಿ ಹೈಕಮಾಂಡ್ ಹೆಚ್ಚು ಗಮನ ಹರಿಸಿತ್ತು. ಕಲ್ಕಾಜಿ 2025ರ ವಿಧಾನಸಭಾ ಚುನಾವಣೆಯಲ್ಲಿ ಅತ್ಯಂತ ಪೈಪೋಟಿಯಿಂದ ಕೂಡಿದ್ದ ಮತ್ತು ಕುತೂಹಲ ಕೆರಳಿಸಿದ್ದ ಸ್ಥಾನಗಳಲ್ಲಿ ಒಂದಾಗಿತ್ತು. 1993ರ ಬಳಿಕ ಕಲ್ಕಾಜಿ ಕ್ಷೇತ್ರದಲ್ಲಿ ಒಮ್ಮೆಯೂ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಗಿರಲಿಲ್ಲ.

Arvind Kejriwal: ದೆಹಲಿ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ಗೆ ಸೋಲು, ಎಎಪಿ ವರಿಷ್ಠಗೆ ಭಾರೀ ಮುಖಭಂಗ
Delhi Election Result 2025: ವಿಧಾನಸಭಾ ಚುನಾವಣೆ ಫಲಿತಾಂಶದಲ್ಲಿ ಎಎಪಿ ಪರಿಷ್ಠ ಅರವಿಂದ ಕೇಜ್ರಿವಾಲ್ ಅವರಿಗೆ ಭಾರಿ ಮುಖಭಂಗವಾಗಿದೆ. ನವದೆಹಲಿ ಕ್ಷೇತ್ರದಿಂದ ಬಿಜೆಪಿಯ ಪರ್ವೇಶ್ ವರ್ಮಾ ವಿರುದ್ಧ ಅವರಿಗೆ ಸೋಲಾಗಿದೆ. ಇದು ಎಎಪಿಗೆ ಅರಗಿಸಿಕೊಳ್ಳಲಾರದ ತುತ್ತಾಗಿ ಪರಿಣಮಿಸಿದೆ. ಅಬಕಾರಿ ಹಗರಣ ಹಾಗೂ ಭ್ರಷ್ಟಾಚಾರ ಆರೋಪಗಳು ಕೇಜ್ರಿವಾಲ್ ಸೋಲಿಗೆ ಪ್ರಮುಖ ಕಾರಣಗಳು ಎನ್ನಲಾಗುತ್ತಿದೆ.

ನವದೆಹಲಿ, ಫೆಬ್ರವರಿ 08: ಆಮ್ ಆದ್ಮಿ ಪಕ್ಷದ ವರಿಷ್ಠ, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ಗೆ ವಿಧಾನಸಭೆ ಚುನಾವಣೆಯಲ್ಲಿ ಸೋಲಾಗಿದೆ. ಇದರೊಂದಿಗೆ ಆಡಳಿತಾರೂಢ ಎಎಪಿಗೆ ಹಾಗೂ ಕೇಜ್ರಿವಾಲ್ಗೆ ಭಾರೀ ಮುಖಭಂಗವಾದಂತಾಗಿದೆ. ಸತತ ಎರಡು ಬಾರಿ ದೆಹಲಿಯ ಗದ್ದುಗೆ ಏರಿದ್ದ ಎಎಪಿ ಮತ್ತು ಕೇಜ್ರಿವಾಲ್ಗೆ ಈ ಬಾರಿ ಅಬಕಾರಿ ನೀತಿ ಹಗರಣದಿಂದ ಭಾರಿ ಹಿನ್ನಡೆಯಾಗಿತ್ತು. ಅದು ಮತದಾನದ ಮೇಲೂ ಪರಿಣಾಮ ಬೀರಿದಂತಿದೆ.

ಅರವಿಂದ ಕೇಜ್ರಿವಾಲ್ ಅವರಿಗೆ ನವದೆಹಲಿ ಕ್ಷೇತ್ರದಲ್ಲಿ ಬಿಜೆಪಿಯ ಪರ್ವೇಶ್ ವರ್ಮಾ ವಿರುದ್ಧ ಸೋಲಾಗಿದೆ.
ಬಿಜೆಪಿಯಿಂದ ನವದೆಹಲಿ ವಿಧಾನಸಭಾ ಕ್ಷೇತ್ರಕ್ಕೆ ಪರ್ವೇಶ್ ವರ್ಮಾ ಕಣಕ್ಕಿಳಿದಿದ್ದರು. ವರ್ಮಾ ವಿರುದ್ಧ ಕೇಜ್ರಿವಾಲ್ 3182 ಮತಗಳಿಂದ ಸೋತಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಭಾರೀ ಹಿನ್ನಡೆ ಅನುಭವಿಸಿದೆ. 70 ಕ್ಷೇತ್ರಗಳ ಪೈಕಿ ಕೇವಲ 23 ಕ್ಷೇತ್ರಗಳಲ್ಲಿ ಆಮ್ ಆದ್ಮಿ ಮುನ್ನಡೆ ಸಾಧಿಸಿದೆ. ಇನ್ನು ಪ್ರತಿಸ್ಪರ್ಧಿ ಬಿಜೆಪಿ 47 ಕ್ಷೇತ್ರಗಳಲ್ಲಿ ಗೆಲುವಿನತ್ತ ಮುನ್ನುಗ್ಗುತ್ತಿದೆ.