Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳು ಹೀಗಿವೆ

editor tv by editor tv
February 13, 2025
in ರಾಜ್ಯ
0
ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳು ಹೀಗಿವೆ
1.9k
VIEWS
Share on FacebookShare on TwitterShare on Whatsapp

ಹಲವು ಅಡೆತಡೆಗಳ ಬಳಿಕ ಕೊನೆಗೂ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅನುಮೋದನೆ ಸಿಕ್ಕಿದೆ. ಆ ಮೂಲಕ ಸಾಲ ಪಡೆದವರ ಆತಂಕಕ್ಕೆ ಇತಿಶ್ರೀ ಹಾಡಲು ಸುಗ್ರೀವಾಜ್ಞೆ ಲಗಾಮು ಬಳಸಲು ಸರ್ಕಾರಕ್ಕೆ ಅವಕಾಶ ದೊರೆತಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆದೇಶದ ಪ್ರಮುಖ ಮುಖ್ಯಾಂಶಗಳು ಇಲ್ಲಿದೆ.

ಬೆಂಗಳೂರು, ಫೆಬ್ರವರಿ 13: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್  ಹಾವಳಿಗೆ ಅನೇಕ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದೆಷ್ಟೋ ಜನರು ಮನೆ, ಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಆದರೆ ಇದೀಗ  ಮಹತ್ವದ ಬೆಳವಣಿಗೆಯಲ್ಲಿ ಮೈಕ್ರೋ ಫೈನಾನ್ಸ್‌ ಕಂಪನಿಗಳಿಗೆ ಕಡಿವಾಣ ಹಾಕುವ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರು ನಿನ್ನೆ ಅಂಕಿತ ಹಾಕಿದ್ದಾರೆ. ಹಾಗಾದರೆ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಸರ್ಕಾರದ ಮುಖ್ಯಾಂಶಗಳು ಹೀಗಿವೆ.

ಮುಖ್ಯಾಂಶಗಳು:-

  1. ಸದರಿ ಆಧ್ಯಾದೇಶವು ದಿನಾಂಕ: 12.02.2025 ರಂದು ಜಾರಿಗೆ ಬಂದಿದೆ.
  2. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಮತ್ತು ಇತರೆ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಲೇವಾದೇವಿಗಾರರು ನೀಡುವ ಹೆಚ್ಚಿನ ಬಡ್ಡಿ ದರಗಳಿಂದ ಸಾಲಗಾರರಿಗೆ ಆಗುವ ಹೊರೆ ಮತ್ತು ಬಲವಂತದ ವಸೂಲಾತಿ ಕ್ರಮಗಳಿಂದ ಆಗುವ ಕಿರುಕುಳಗಳನ್ನು ನಿಯಂತ್ರಿಸಲು ಉದ್ದೇಶಿಸಿದೆ.
  1. ವಿಶೇಷವಾಗಿ ದುರ್ಬಲರು, ಮಹಿಳೆಯರು ಮತ್ತು ರೈತರು, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಮರುಪಾವತಿ ವಿಷಯದಲ್ಲಿ ಕಿರುಕುಳಗಳನ್ನು ತಪ್ಪಿಸಲು ಸಹಾಯಕವಾಗಿದೆ.
  2. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯುವಂತಿಲ್ಲ ಎಂದು ಆದೇಶಿಸಲಾಗಿದೆ.
  3. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಗ್ರಾಹಕರಿಗೆ ವಿಧಿಸುವ ಬಡ್ಡಿ ದರದ ಬಗ್ಗೆ ಪಾರದರ್ಶಕವಾಗಿ ಸಾಲಗಾರರಿಗೆ ಲಿಖಿತ ರೂಪದಲ್ಲಿ ತಿಳಿಸುವುದು.
  4. ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಗೆ ಮಾತ್ರ ಈ ಆದೇಶ ಅನ್ವಯಿಸುತ್ತದೆ. ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಅಂದಾಜು ರೂ. 60,000 ಕೋಟಿ ರೂ. ಸಾಲವನ್ನು ಸುಮಾರು 1.09 ಕೋಟಿ ರೂ. ಸಾಲಗಾರರು ಪಡೆದಿದ್ದು, ನೋಂದಣಿಯಾಗದ ಸಂಸ್ಥೆಗಳಿಂದ ಸಾಲ ಪಡೆದವರ ಮಾಹಿತಿ ವಿವರವಾಗಿ ಅಂದಾಜು ರೂ. 40,000 ಕೋಟಿ ರೂ. ಸಾಲ ಪಡೆದಿದ್ದಾರೆ ಎಂದು ಅಂದಾಜಿಸಲಾಗಿದೆ.
  5. ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಜಿಲ್ಲಾಧಿಕಾರಿಗಳಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯ. ಸದರಿ ಸಂಸ್ಥೆಗಳು ತಾವು ವಿಧಿಸುವ ಬಡ್ಡಿ ದರ, ಸಾಲಗಾರರ ಮಾಹಿತಿ, ಸುಸ್ಥಿ ಸಾಲಗಳ ವಿವರ ಮುಂತಾದವುಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕು.
  6. ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಜಿಲ್ಲಾಧಿಕಾರಿಗಳಿಗೆ ತ್ರೈಮಾಸಿಕ ಮತ್ತು ವಾರ್ಷಿಕ ವ್ಯವಹಾರದ ವಿವರಗಳನ್ನು ಸಲ್ಲಿಸಬೇಕು. ಸದರಿ ಮಾಹಿತಿಯನ್ನು ಸಲ್ಲಿಸದಿದ್ದಲ್ಲಿ, 6 ತಿಂಗಳ ಕಾರಾಗೃಹ ವಾಸ ಅಥವಾ ರೂ.10,000 ದಂಡ ವಿಧಿಸಲಾಗುವುದು.
  1. ವಿವಾದಗಳನ್ನು ಇತ್ಯರ್ಥ್ಯ ಪಡಿಸುವುದಕ್ಕಾಗಿ ಒಂಬುಡ್ಸ್ ಪರ್ಸನ್‌ಗಳನ್ನು ಸರ್ಕಾರವು ಅಧಿಸೂಚನೆಯ ಮೂಲಕ ನೇಮಕ ಮಾಡಬಹುದು.
  2. ಬಲವಂತದ ವಸೂಲಿ ಕ್ರಮಗಳನ್ನು ವಿವರವಾಗಿ ತಿಳಿಸಲಾಗಿದೆ.
  3. ಬಲವಂತದ ವಸೂಲಿ ಕ್ರಮಗಳನ್ನು ಕೈಗೊಂಡಲ್ಲಿ, ಯಾವುದೇ ವ್ಯಕ್ತಿಯೂ ವಿಚಾರಣೆಗೆ ಒಳಪಡುತ್ತಾನೆ ಮತ್ತು 10 ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಯ ಕಾರಾವಾಸದ ಶಿಕ್ಷೆ ಹಾಗೂ ರೂ. 5 ಲಕ್ಷ ಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯೊಂದಿಗೆ ದಂಡ ವಿಧಿಸಲಾಗುತ್ತದೆ. ಈ ಅಪರಾಧಗಳು ಸಂಜ್ಞೇಯ ಅಪರಾಧ, ಜಾಮೀನು ರಹಿತ (Cognizable / Non Bailable) ಆಗಿರುತ್ತವೆ. ಯಾವುದೇ ಪೋಲೀಸ್‌ ಅಧಿಕಾರಿ ಇಂತಹ ಪ್ರಕರಣಗಳನ್ನು ನೋಂದಣಿ ಮಾಡಿಕೊಳ್ಳುವುದು ನಿರಾಕರಿಸಲಾಗುವುದಿಲ್ಲ.
  4. ಪೋಲೀಸ್‌ ಉಪ ಅಧೀಕ್ಷಕರ (Dy SP) ದರ್ಜೆಗೆ ಕಡಿಮೆಯಿಲ್ಲದ ಅಧಿಕಾರಿಯು ಸ್ವತಃ ಪ್ರಕರಣವನ್ನು ದಾಖಲಿಸಬಹುದು.
  5. ಸರ್ಕಾರವು ಕಾಲಕಾಲಕ್ಕೆ ಈ ಆದೇಶದ ಅನುಷ್ಠಾನಕ್ಕಾಗಿ ನಿರ್ದೇಶನಗಳನ್ನು ನೀಡುವ ಅಧಿಕಾರ ಹೊಂದಿರುತ್ತದೆ.
  6. ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಲ್ಲಿ ಆರ್ಥಿಕ ಶಿಸ್ತು ಹೆಚ್ಚುತ್ತದೆ ಮತ್ತು ಸಾಲಗಾರರಿಗೆ ಕಿರುಕುಳ, ಬಲವಂತದ ವಸೂಲಿ ಕ್ರಮಗಳಿಂದ ಮುಕ್ತಿ ದೊರೆಯುತ್ತದೆ.

Previous Post

RRB Recruitment 2025: ರೈಲ್ವೆಯಲ್ಲಿ ಸಾವಿರಾರು ಹುದ್ದೆಗಳಿಗೆ ನೇಮಕಾತಿ, 10th ಪಾಸಾಗಿದ್ರೆ ಸಾಕು

Next Post

ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ

Next Post
ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ

ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.