ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಹಮ್ಮಿಕೊಂಡಿರುವ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಜಿಲ್ಲಾದ್ಯಂತ ಸಹಿ ಸಂಗ್ರಹ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಲಾಗಿದೆ.

ಅವೈಜ್ಞಾನಿಕ ಅಸಮರ್ಪಕ ಅಕ್ರಮ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸಲು ಹಮ್ಮಿಕೊಂಡಿರುವ ಸಹಿ ಸಂಗ್ರಹ ಅಭಿಯಾನವು ಬಂಟ್ವಾಳ,ಪುತ್ತೂರು, ಬೆಳ್ತಂಗಡಿ,ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಸ್ಥಳಗಳಲ್ಲಿ ಅಧಿಕೃತವಾಗಿ ಚಾಲನೆಗೊಂಡಿತು. ಈ ಸಹಿ ಸಂಗ್ರಹ ಅಭಿಯಾನದಲ್ಲಿ ವಿದ್ಯಾರ್ಥಿಗಳು,ಮಹಿಳೆಯರು,ಪ್ರಗತಿಪರ ಹೋರಾಟಗಾರರು,ಲಾರಿ ಚಾಲಕರು, ರಿಕ್ಷಾ ಚಾಲಕರು ಮತ್ತು ಸಾರ್ವಜನಿಕರು ಅತ್ಯುತ್ಸಾಹದಿಂದ ಪಾಲ್ಗೊಂಡು ಎಸ್ ಡಿ ಪಿ ಐ ನಡೆಸುವ ಹೋರಾಟಕ್ಕೆ ಬೆಂಬಲವನ್ನು ಸೂಚಿಸಿದರು.
