ಯುವ ಕಾಂಗ್ರೆಸ್ ಮುಖಂಡನಿಂದ ದೂರು
ಮೈಸೂರು: ಉದಯಗಿರಿ ಪೊಲೀಸ್ ಠಾಣೆಯಲ್ಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮರ (Muslims) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ( Pratap Simha) ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮೈಸೂರು ಯುವ ಕಾಂಗ್ರೆಸ್ ಮುಖಂಡ ಸೈಯದ್ ಅಬ್ರರ್ ನೀಡಿದ ದೂರಿನ ಅನ್ವಯ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮೈಸೂರು ಉದಯಗಿರಿ ಪೊಲೀಸ್ ಠಾಣೆ (Udayagiri Police Station) ಫೆ.10ರಂದು ಪ್ರತಿಭಟನೆ ನಡೆದ ಪ್ರಕರಣದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡುವಾಗ ಪ್ರತಾಪ್ ಸಿಂಹ ಮುಸ್ಲಿಮರ ಬಗ್ಗೆ ಅವಹೇಳಕಾರಿ ಹೇಳಿಕೆ ನಿಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ.