ಜನರಿಗೆ ಬಸ್, ಮೆಟ್ರೋ ಟಿಕೆಟ್ ದರ ಏರಿಕೆಯ ಬರೆ!
ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಮಹತ್ವದ ಚರ್ಚೆ
ಶಾಸಕರ ವೇತನ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದ ಜನನಾಯಕರು
ರಾಜ್ಯದಲ್ಲಿ ಬಸ್, ಮೆಟ್ರೋ ಟಿಕೆಟ್ ದರ ಏರಿಕೆಗೆ ಸಿಲುಕಿ ಜನಸಾಮಾನ್ಯರು ಪರದಾಡುತ್ತಿದ್ದಾರೆ. ಗೃಹಿಣಿಯರು ಗೃಹಲಕ್ಷ್ಮಿ ಯೋಜನೆಯ ದುಡ್ಡು ಇನ್ನೂ ಅಕೌಂಟ್‌ಗೆ ಬಂದಿಲ್ಲ ಅಂತ ಆಕ್ರೋಶ ಹೊರ ಹಾಕುತ್ತಿದ್ದಾರೆ. ಈ ದುಬಾರಿ ದುನಿಯಾದಲ್ಲಿ ಜನ ಸಾಮಾನ್ಯರಿಗೆ ಮಾತ್ರ ಬೆಲೆ ಏರಿಕೆಯ ಬರೆ.

ಬೆಲೆ ಏರಿಕೆ ಬಗ್ಗೆ ಜನರು ಬೇಸರಗೊಂಡಿರುವ ಮಧ್ಯೆ ಶಾಸಕರ ಸಂಬಳ ಹೆಚ್ಚಿಸಲು ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಇಂದು ನಡೆದ ವಿಧಾನಸಭಾ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ಬಗ್ಗೆ ಮಹತ್ವದ ಚರ್ಚೆ ನಡೆಸಲಾಗಿದೆ.

ಕಳೆದ ಬಾರಿ ನಡೆದ ಅಧಿವೇಶನ ವೇಳೆ ಶಾಸಕರ ಸಂಬಳ ಹೆಚ್ಚಿಸುವ ಬಗ್ಗೆ ಶಾಸಕ ಅರವಿಂದ್ ಬೆಲ್ಲದ್ ಅವರು ಗಮನ ಸೆಳೆದಿದ್ದರು. ಶಾಸಕರ ವೇತನ ಹೆಚ್ಚಳಕ್ಕೆ ಆಯೋಗ ಮಾಡಿ ಎಂದೂ ಬೆಲ್ಲದ್ ಅವರು ಒತ್ತಾಯಿಸಿದ್ದರು.

ಇಂದು ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಶೇಕಡಾ 50ರಷ್ಟು ಸಂಬಳ ಹೆಚ್ಚಳ ಮಾಡಲು ಚರ್ಚಿಸಲಾಗಿದೆ. ಇದರ ಜೊತೆಗೆ ಬಿಎಸಿ ಸಭೆಯಲ್ಲಿ ಶಾಸಕರ ಕ್ಲಬ್‌ಗೆ 20 ಕೋಟಿ ರೂಪಾಯಿ ಅನುದಾನ ನೀಡುವ ಕುರಿತು ಚರ್ಚೆ ನಡೆಸಲಾಗಿದೆ.