Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಆರ್‌ಎಸ್‌ಎಸ್‌, ಜೆಡಿಎಸ್ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

editor tv by editor tv
April 27, 2025
in ರಾಜ್ಯ
0
ಆರ್‌ಎಸ್‌ಎಸ್‌, ಜೆಡಿಎಸ್ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
1.9k
VIEWS
Share on FacebookShare on TwitterShare on Whatsapp

ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳಿವಳಿಕೆ ಕಾರ್ಯಕರ್ತರಿಗೆ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಮೈಸೂರು (ಏ.27): ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳಿವಳಿಕೆ ಕಾರ್ಯಕರ್ತರಿಗೆ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಶನಿವಾರ ಯುವ ಕಾಂಗ್ರೆಸ್ ಆಯೋಜಿಸಿದ್ದ ಯುವಕ್ರಾಂತಿ ಕಾರ್ಯಕರ್ತರ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು. ಸ್ವಾತಂತ್ರ್ಯ ಹೋರಾಟ ಮತ್ತು‌ ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ಮಹತ್ವದ ಪಾತ್ರ ನಿರ್ವಹಿಸಿದೆ. 

ದೇಶಕ್ಕೆ ನಾಗರಿಕ ಹಕ್ಕು ಮತ್ತು ಸಾಮಾಜಿಕ ನ್ಯಾಯ ಒದಗಿಸಲು ಹುಟ್ಟಿದ ಪಕ್ಷ ಕಾಂಗ್ರೆಸ್. ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ ಎಂದು ವ್ಯಂಗ್ಯವಾಡಿದರು. ಗಾಂಧಿ ಅವರು ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದಂತೆ, ಭಾರತದಲ್ಲಿ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಭದ್ರ ಬುನಾದಿ ಹಾಕಿದವರು ನೆಹರು. ಬಹುತ್ವದ ಭಾರತದ ನೆಲದಲ್ಲಿ ಏಕತೆ ತಂದು, ಸಹಿಷ್ಣುತೆಯನ್ನು ಆಚರಣೆಗೆ ತರಲು ನೆಹರೂ ನೀಡಿದ ಕೊಡುಗೆ ಅಪಾರ. ಮನುಸ್ಮೃತಿ ಪ್ರೇರಿತ ಜಾತಿ ವ್ಯವಸ್ಥೆ ಭಾರತೀಯ ಸಮಾಜವನ್ನು ಜಾತಿ ಆಧಾರದಲ್ಲಿ ಬಿರುಕು ಮೂಡಿಸಿತು. ಈ ಇತಿಹಾಸ ನಿಮಗೆ ಗೊತ್ತಿರಬೇಕು ಎಂದರು.

ರಾಜೀವ್ ಗಾಂಧಿ ಅವರು ಕೊಟ್ಟ ಮೀಸಲಾತಿಯನ್ನು ವಿರೋಧಿಸಿ, ನ್ಯಾಯಾಲಯದ ಮೆಟ್ಟಿಲೇರಿದ್ದು ಬಿಜೆಪಿಯ ರಾಮಾ ಜೋಯಿಸ್. ಆದರೆ, ನ್ಯಾಯಾಲಯ ರಾಜೀವ್ ಗಾಂಧಿ ಅವರು ತಂದ ತಿದ್ದುಪಡಿಯನ್ನು ಎತ್ತಿ ಹಿಡಿದು ಇದು ಸಂವಿಧಾನ ಬದ್ಧ ಎಂದು ಹೇಳಿತು. ಮೀಸಲಾತಿ ವಿರೋಧಿಸಿದ್ದ ಬಿಜೆಪಿ ಮಂಡಲ್ ವರದಿಯನ್ನೂ ವಿರೋಧಿಸಿತು. ಹೀಗಾಗಿ, ಇತಿಹಾಸ ಮತ್ತು ಸಿದ್ಧಾಂತದ ಬಗ್ಗೆ ನಿಮಗೆ ಸ್ಪಷ್ಟತೆ ಇದ್ದರೆ ಮುಂದೆ ಉತ್ತಮ‌ ನಾಯಕರಾಗಿ ಬೆಳೆಯುತ್ತೀರಿ ಎಂದು ಕರೆ ನೀಡಿದರು. ಅಧಿಕಾರ ಬಲಾಢ್ಯರ ಕೈಯಲ್ಲಿ ಇರಬಾರದು. ಜನಸಾಮಾನ್ಯರ ಕೈಯಲ್ಲಿ ಇರಬೇಕು ಎಂದು ಅಂಬೇಡ್ಕರ್ ಹೇಳಿದ್ದರು. ಕಾಂಗ್ರೆಸ್ ಜನರ ಕೈಗೆ ಅಧಿಕಾರ ಮತ್ತು ಅವಕಾಶ ನೀಡುತ್ತಿದೆ. 

ವಿರೋಧಿಸುತ್ತದೆ ಎಂದರು. ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ ಅಸಮಾನತೆಯನ್ನು ಕಡಿಮೆ ಮಾಡುವ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇನೆ. ಸ್ವಾತಂತ್ರ್ಯ ಸಾರ್ಥಕತೆ ಆಗಬೇಕಾದರೆ ಪ್ರತಿಯೊಬ್ಬರೂ ಆರ್ಥಿಕ ಮತ್ತು ಸಾಮಾಜಿಕ ಸಬಲತೆ ಪಡೆದುಕೊಳ್ಳಬೇಕು. ಕಟ್ಟ ಕಡೆಯ ಮನುಷ್ಯನಿಗೆ ಶಕ್ತಿ ಕೊಡುವುದೇ ಸರ್ವೋದಯದ ಆಶಯ ಎಂದು ಅವರು ಹೇಳಿದರು. ಇದೇ ವೇಳೆ, ಜೆಡಿಎಸ್ ವಿರುದ್ಧವೂ ಹರಿಹಾಯ್ದ ಸಿಎಂ, ಜೆಡಿಎಸ್‌, ಒಂದು ರಾಜಕೀಯ ಪಕ್ಷವೇ ಅಲ್ಲ, ಅವರದ್ದು ಅವಕಾಶವಾದಿ ರಾಜಕಾರಣ. ಜೆಡಿಎಸ್‌ ಗೆ ಒಂದು ಸಿದ್ಧಾಂತವೇ ಇಲ್ಲ. ಅದೊಂದು ರಾಜಕೀಯ ಪಕ್ಷವೇ ಅಲ್ಲ ಎಂದರು.

ಮೌಢ್ಯ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಕೃತಕವಾಗಿ ಸೃಷ್ಟಿಸಿ ನೀರು ಗೊಬ್ಬರ ಹಾಕಿ ಗಟ್ಟಿ ಮಾಡಿಟ್ಟಿದ್ದಾರೆ. ದೇವರು ಒಬ್ಬರಿಗೊಂದು ಮತ್ತೊಬ್ಬರಿಗೊಂದು ಮಾಡುವುದಿಲ್ಲ. ದೇವರ ಹೆಸರಲ್ಲಿ ಮೌಢ್ಯಗಳನ್ನು ಬಿತ್ತುವವರ ಬಗ್ಗೆ ಎಚ್ಚರವಿರಲಿ. ಶರಣ ಬಸವಣ್ಣ ಹೇಳಿದ ರೀತಿಯಲ್ಲಿ ದೇವರು ಇದ್ದಾನೆ. ಬಸವಣ್ಣರ ರೀತಿಯಲ್ಲಿ ದೇವರನ್ನು ಕಾಣಬೇಕು. ಮಾಡಬಾರದ ಪಾಪಗಳನ್ನೆಲ್ಲಾ ಮಾಡಿ ದೇವರಿಗೆ ಕೈ ಮುಗಿದರೆ ಪಾಪ ಹೋಗುವುದಿಲ್ಲ. ಬಿಜೆಪಿ ದೇವರು, ಧರ್ಮದ ಹೆಸರಲ್ಲಿ ಬರೀ ಸುಳ್ಳು ಹರಡುತ್ತದೆ. ಈ ಬಗ್ಗೆ ದೇಶದ ಜನರ ತಿಳಿವಳಿಕೆ ಹೆಚ್ಚಿಸುವ ಕೆಲಸ ಆಗಬೇಕಿದೆ ಎಂದರು.

Previous Post

ಜಮ್ಮು ಕಾಶ್ಮೀರ | ಉಗ್ರರ ಗುಂಡೇಟಿಗೆ ಸಾಮಾಜಿಕ ಕಾರ್ಯಕರ್ತ ರಸೂಲ್ ಮಗ್ರೆ ಬಲಿ

Next Post

ಪಹಲ್ಗಾಮ್​ ದಾಳಿ: ಪಾಕ್​ ಮಾಧ್ಯಮಗಳಲ್ಲಿ ಸುದ್ದಿಯಾದ ಸಿದ್ದರಾಮಯ್ಯ, ಅಷ್ಟಕ್ಕೂ ಸುದ್ದಿಯಲ್ಲೇನಿದೆ?

Next Post
ಪಹಲ್ಗಾಮ್​ ದಾಳಿ: ಪಾಕ್​ ಮಾಧ್ಯಮಗಳಲ್ಲಿ ಸುದ್ದಿಯಾದ ಸಿದ್ದರಾಮಯ್ಯ, ಅಷ್ಟಕ್ಕೂ ಸುದ್ದಿಯಲ್ಲೇನಿದೆ?

ಪಹಲ್ಗಾಮ್​ ದಾಳಿ: ಪಾಕ್​ ಮಾಧ್ಯಮಗಳಲ್ಲಿ ಸುದ್ದಿಯಾದ ಸಿದ್ದರಾಮಯ್ಯ, ಅಷ್ಟಕ್ಕೂ ಸುದ್ದಿಯಲ್ಲೇನಿದೆ?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.