ಮಂಗಳೂರು ನಗರದ ಹೊರವಲಯದ ಕುಡುಪು ಎಂಬಲ್ಲಿ ಎಪ್ರಿಲ್ 27 ರ ಸಂಜೆ ಕ್ರಿಕೆಟ್ ಆಡುತ್ತಿದ್ದ ಗುಂಪೊಂದು ಅಲ್ಲಿದ್ದ ವಲಸೆ ಕಾರ್ಮಿಕನೋರ್ವನನ್ನು ಥಳಿಸಿ ಹತ್ಯೆಗೈದಿರುವ ಕುರಿತು ಆತಂಕಕಾರಿ ಮಾಹಿತಿಗಳು ಹೊರಬೀಳುತ್ತಿದೆ. ಘಟನೆ ನಡೆದು ಎರಡು ದಿನದ ಕಳೆದಿದ್ದರೂ ಪೊಲೀಸ್ ಇಲಾಖೆ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ನೀಡುತ್ತಿಲ್ಲ.

ಗುಂಪು ಹಲ್ಲೆ, ಹತ್ಯೆಯಲ್ಲಿ ಭಾಗಿಯಾಗಿರುವ ರಾಜಕಿಯ ಹಿನ್ನಲೆಯ ಕೆಲವು ಪ್ರಭಾವಿಗಳನ್ನು ರಕ್ಷಿಸುವ, ಪ್ರಕರಣದ ತೀವ್ರತೆಯನ್ನು ತಗ್ಗಿಸುವ, ಪ್ರಕರಣವನ್ನು ದುರ್ಬಲಗೊಳಿಸುವ ಯತ್ನ ನಡೆಯುತ್ತಿರುವ ಕುರಿತು ಅನುಮಾನಗಳು ಸಾರ್ವಜನಿಕ ವಲಯದಿಂದ ವ್ಯಕ್ತವಾಗುತ್ತಿದೆ. ಗುಂಪು ಹತ್ಯೆ ಯ ಮೂಲಕ ಮುಸ್ಲಿಂ ಸಮುದಾಯದ ಮೇಲೆ ದಬ್ಬಾಳಿಕೆ ನಿರಂತರ ನಡೆಯುತ್ತಿದೆ

ಕುಡುಪು ಮೈದಾನದ ಸಮೀಪ ಬಂದ ವಲಸೆ ಕಾರ್ಮಿಕನನ್ನು ಆತನ ಧರ್ಮದ ಗುರುತಿನ ಕಾರಣಕ್ಕೆ ಕಲ್ಲು, ದೊಣ್ಣೆ, ಬ್ಯಾಟುಗಳಿಂದ ಅಲ್ಲಿದ್ದ ಗುಂಪು ಹಲ್ಲೆ ನಡೆಸಿ ಕೊಂದು ಹಾಕಿದೆ
ಎಂಬ ಬಲವಾದ ಅನುಮಾನ ವ್ಯಕ್ತವಾಗಿದೆ

ರಾಜಕೀಯ ಒತ್ತಡ ಗಳಿಗೆ ಮನಿಯದೆ
ಕೂಡಲೇ ಪೊಲೀಸ್ ಇಲಾಖೆ ಎಲ್ಲಾ ಪ್ರಮುಖ ಆರೋಪಿಗಳನ್ನು ಬಂಧಿಸಬೇಕು ಎಂದು SKSSF ಜಿಲ್ಲಾ ಸಮಿತಿ ಅಗ್ರಹಪಡಿಸಿದೆ
