Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಅಂಗಲಾಚಿದರೂ ಕೇಳದ ಕೋರ್ಟ್: ಜನಾರ್ದನ ರೆಡ್ಡಿಗೆ ಮತ್ತೆ ಜೈಲು ಫಿಕ್ಸ್, ಶಾಸಕ ಸ್ಥಾನಕ್ಕೂ ಕುತ್ತು!

editor tv by editor tv
May 6, 2025
in ರಾಜ್ಯ
0
ಅಂಗಲಾಚಿದರೂ ಕೇಳದ ಕೋರ್ಟ್: ಜನಾರ್ದನ ರೆಡ್ಡಿಗೆ ಮತ್ತೆ ಜೈಲು ಫಿಕ್ಸ್, ಶಾಸಕ ಸ್ಥಾನಕ್ಕೂ ಕುತ್ತು!
1.9k
VIEWS
Share on FacebookShare on TwitterShare on Whatsapp

Janardhan Reddy Obulapuram mining case:: ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯ ಜನಾರ್ದನ ರೆಡ್ಡಿ ದೋಷಿ ಎಂದು ತೀರ್ಪು ನೀಡಿದೆ. ಜೊತೆಗೆ ಅಕ್ರಮ ಗಣಿಗಾರಿಕೆಯ ಅಪರಾಧಿಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಹಾಗಾದ್ರೆ, ರೆಡ್ಡಿ ಮತ್ತೆ ಜೈಲಿಗೆ ಹೋಗುತ್ತಾರಾ? ಅವರ ಶಾಸಕ ಸ್ಥಾನದ ಗತಿ ಏನು? ಹಾಗೇ ಅವರ ಮುಂದಿರುವ ಆಯ್ಕೆಗಳೇನು ಎನ್ನುವ ಮಾಹಿತಿ ಇಲ್ಲಿದೆ.

ಬೆಂಗಳೂರು, (ಮೇ 06): ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ (Obulapuram mining case) ಬರೋಬ್ಬರಿ 884 ಕೋಟಿ ರೂಪಾಯಿ ಅಕ್ರಮ ಎಸಗಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ಕೋರ್ಟ್‌ , ಮಾಜಿ ಸಚಿವ, ಹಾಲಿ ಶಾಸಕ ಜನಾರ್ಧನ ರೆಡ್ಡಿಯನ್ನು (Gali Janardhan Reddy )ದೋಷಿ ಎಂದು ಸಿಬಿಐ ವಿಶೇಷ ನ್ಯಾಯಾಲಯ (CBI Special Court)​ ತೀರ್ಪು ನೀಡಿದೆ. ಜೊತೆಹೆ 7 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿದೆ. ಐಪಿಸಿ ಸೆಕ್ಷನ್ 120B ಜೊತೆಗೆ 420, 409, 468, 471 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ ಸೆ.13(2) ಜೊತೆಗೆ 13(1)(d) ಅಡಿ ಸಾಬೀತಾಗಿದ್ದು,ಈಗಾಗಲೇ ಜನಾರ್ದನ ರೆಡ್ಡಿ ಈಗಾಗಲೇ 3 ವರ್ಷ ಜೈಲಿನಲ್ಲಿ ಕಳೆದಿದ್ದು, ವಯಸ್ಸು ಮತ್ತು ಸೇವೆಯನ್ನು ಪರಿಗಣಿಸಿ ಶಿಕ್ಷೆ ಕಡಿಮೆ ಮಾಡಲು ಮನವಿ ಮಾಡಿದ್ದಾರೆ. ಆದ್ರೆ, ಸಿಬಿಐ ವಿಶೇಷ ಕೋರ್ಟ್ , ರೆಡ್ಡಿ ಮನವಿಯನ್ನು ತಿರಸ್ಕರಿಸಿದೆ. ಇದರಿಂದ ಜನಾರ್ದನ ರೆಡ್ಡಿಗೆ ಮತ್ತೆ ಜೈಲು ಫಿಕ್ಸ್ ಆದಂತಾಗಿದೆ.

ನೀವು ಜೀವಾವಧಿ ಶಿಕ್ಷೆಗೆ ಅರ್ಹರು ಎಂದ ಕೋರ್ಟ್​

ನ್ಯಾಯಾಲಯದ ವಿಚಾರಣೆ ಹಿನ್ನೆಲೆಯಲ್ಲಿ ಜನಾರ್ಧನ ರೆಡ್ಡಿ ಇಂದು (ಮೇ 06) ಬೆಳಗ್ಗೆ ಹೈದರಾಬಾದ್ ಗೆ ತೆರಳಿದ್ದರು. ಇನ್ನು ಏಳು ವರ್ಷ ನೀಡಿರುವ ಶಿಕ್ಷೆಯಲ್ಲಿ ಕಡಿಮೆ ಮಾಡಿ ಎಂದು ಜನಾರ್ದನ ರೆಡ್ಡಿ ಅವರು ಕೋರ್ಟ್​ಗೆ ಮನವಿ ಮಾಡಿದ್ದಾರೆ. ನಾನು ಈಗಾಗಲೇ ನಾಲ್ಕು ವರ್ಷಗಳಿಗೂ ಹೆಚ್ಚು ಕಾಲ ಬಂಧನದಲ್ಲಿ ಕಳೆದಿದ್ದೇನೆ. ನನ್ನ ವಯಸ್ಸು ಮತ್ತು ನಾನು ಮಾಡಿದ ಸಾರ್ವಜನಿಕ ಸೇವೆಯನ್ನು ಪರಿಗಣಿಸಿ. ಬಳ್ಳಾರಿ ಮತ್ತು ಗಂಗಾವತಿಯ ಜನರು ನನ್ನನ್ನು ಭಾರಿ ಬಹುಮತದಿಂದ ಆಯ್ಕೆ ಮಾಡಿದ್ದಾರೆ. ನಾನು ಸಾರ್ವಜನಿಕ ಸೇವೆಗೆ ಸಮರ್ಪಿತನಾಗಿದ್ದೇನೆ . ಸಾರ್ವಜನಿಕರಿಂದ ನನಗೆ ಸಿಗುವ ಬೆಂಬಲವು ಆ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ದಯವಿಟ್ಟು ಶಿಕ್ಷೆ ಪ್ರಮಾಣವನ್ನು ಕಡಿಮೆ ಮಾಡಿ ಎಂದು ರೆಡ್ಡಿ ಕೋರ್ಟ್​ಗೆ ಅಂಗಲಾಚಿದ್ದಾರೆ. ಆದ್ರೆ, ಕೋರ್ಟ್ ನಿರಾಕರಿಸಿದೆ. ನಿಮಗೆ 10 ವರ್ಷಗಳ ಶಿಕ್ಷೆಯನ್ನು ಏಕೆ ನೀಡಬಾರದು? ನೀವು ಜೀವಾವಧಿ ಶಿಕ್ಷೆಗೆ ಅರ್ಹರು ಎಂದು ತಪರಾಕಿ ಹಾಕಿ ರೆಡ್ಡಿ ಮನವಿಯನ್ನು ತಿರಸ್ಕರಿಸಿದೆ.

ಜನಾರ್ದನ ರೆಡ್ಡಿಗೆ ಮುಂದಿರುವ ಆಯ್ಕೆಗಳೇನು?

3 ವರ್ಷಕ್ಕಿಂತ ಹೆಚ್ಚು ಶಿಕ್ಷೆ ಆಗಿರುವುದರಿಂದ ಶಾಸಕ ಜನಾರ್ದನ ರೆಡ್ಡಿ ಜೈಲು ಖಚಿತವಾಗಿದೆ. ಇನ್ನು ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಹಾಗೇ ಒಂದು ತಿಂಗಳೊಳಗೆ ರೆಡ್ಡಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಹೀಗಾಗಿ ಹೈಕೋರ್ಟ್​​ನಿಂದ ತಡೆ ಸಿಕ್ಕರಷ್ಟೇ ರೆಡ್ಡಿ ಬಚಾವ್​ ಆಗಲಿದ್ದಾರೆ.

ಹೀಗಾಗಿ ರೆಡ್ಡಿ ಜಾಮೀನಿಗಾಗಿ ಹೈದರಾಬಾದ್​ನ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಬೇಕು. ಆದರೆ, ಹೈಕೋರ್ಟ್ ಜಾಮೀನು ನೀಡುವವರೆಗೆ ಜೈಲಿನಲ್ಲಿರಬೇಕು. ಇನ್ನು ಶಿಕ್ಷೆಗೆ ತಡೆಯಾಜ್ಞೆ ಸಿಗದಿದ್ದರೆ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಭೀತಿಯೂ ಇದೆ.

ಏನಿದು ಪ್ರಕರಣ?

ಆಂಧ್ರ ಪ್ರದೇಶದಲ್ಲಿ ವೈ.ಎಸ್‌ ರಾಜಶೇಖರರೆಡ್ಡಿ ಹಾಗೂ ಕರ್ನಾಟಕದಲ್ಲಿ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಓಬಳಾಪುರಂ ಅಕ್ರಮ ಗಣಿಕಾರಿಕೆ ಪ್ರಕರಣ ಬೆಳಕಿಗೆ ಬಂದಿತ್ತು. ಆಂಧ್ರ-ಕರ್ನಾಟಕದ ಗಡಿಗೆ ಹೊಂದಿಕೊಂಡ ಓಬಳಾಪುರಂ ಬೆಟ್ಟದಲ್ಲಿ ಅದಿರಿನ ಅಕ್ರಮ ಗಣಿಗಾರಿಕೆ ನಡೆದಿದೆ ಎಂದು ಆರೋಪಿಸಲಾಗಿತ್ತು. ಗಣಿ‌ಗಾರಿಕೆ ಮಂಜೂರಾತಿ ವೇಳೆ ಇಲಾಖೆಗಳಿಂದ ಅಕ್ರಮವಾಗಿದೆ. ಅರಣ್ಯ ಇಲಾಖೆ, ಗಣಿ‌ ಇಲಾಖೆಯಿಂದ ಅಕ್ರಮ‌ ಆಗಿದೆ ಎಂದು ಆರೋಪಿಸಲಾಗಿತ್ತು. ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ 884 ಕೋಟಿ ಅಕ್ರಮ ಎಸಗಿರೋದು ಸಾಬೀತಾಗಿದೆ. ಒಟ್ಟು 29 ಲಕ್ಷ ಟನ್ ಅದಿರು ಲೂಟಿ ಮಾಡಿರುವ ಆರೋಪ ಇವರ ಮೇಲಿದೆ. ಈಗಾಗಲೇ ಇದೇ ಪ್ರಕರಣದಲ್ಲಿ ಮೂರುವರೇ ವರ್ಷ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಆಚೆ ಬಂದಿದ್ದಾರೆ.

Previous Post

ಸುಹಾಸ್‌ ಶೆಟ್ಟಿ ಮೇಲೆ ರೌಡಿಶೀಟರ್ ಓಪನ್ ಮಾಡಿದ್ದೇ ಬಿಜೆಪಿ: ದಿನೇಶ್ ಗುಂಡೂರಾವ್ ತಿರುಗೇಟು

Next Post

ಸುಹಾಸ್​ ಕೊಲೆ: ಹಿಂದೂ ಕಾರ್ಯಕರ್ತರ ವಿರುದ್ಧ ಹೆಡ್​ ಕಾನ್ಸ್ಟೇಬಲ್ ರಶೀದ್ ದೂರು

Next Post
ಸುಹಾಸ್​ ಕೊಲೆ: ಹಿಂದೂ ಕಾರ್ಯಕರ್ತರ ವಿರುದ್ಧ ಹೆಡ್​ ಕಾನ್ಸ್ಟೇಬಲ್ ರಶೀದ್ ದೂರು

ಸುಹಾಸ್​ ಕೊಲೆ: ಹಿಂದೂ ಕಾರ್ಯಕರ್ತರ ವಿರುದ್ಧ ಹೆಡ್​ ಕಾನ್ಸ್ಟೇಬಲ್ ರಶೀದ್ ದೂರು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.