ಭಾರತ, ಪಾಕ್ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈ ಬಾರಿಯ IPL ಟೂರ್ನಿಯ ಮುಂದೂಡಿಕೆ ಮಾಡಲಾಗಿದೆ. ಉಳಿದ ಐಪಿಎಲ್ ಪಂದ್ಯಗಳನ್ನ ರದ್ದು ಮಾಡುವ ನಿರ್ಧಾರವನ್ನು BCCI ಕೈಗೊಂಡಿದೆ.
ನಿನ್ನೆ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಪಂದ್ಯವನ್ನು ಅರ್ಧದಲ್ಲೇ ಮೊಟಕುಗೊಳಿಸಲಾಗಿತ್ತು. ಇದೀಗ ಮೇ25ರವರೆಗೆ ನಡೆಯಬೇಕಿದ್ದ IPL ಟೂರ್ನಿಯನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿದೆ.
ವಿದೇಶಿ ಆಟಗಾರರ ಭದ್ರತೆಯ ದೃಷ್ಟಿಯಿಂದ BCCI ಯಾವುದೇ ಸವಾಲುಗಳನ್ನು ತೆಗೆದುಕೊಳ್ಳುವ ಸ್ಥಿತಿಯಲ್ಲಿಲ್ಲ. ಹೀಗಾಗಿ ದೇಶದಲ್ಲಿ ನಡೆಯಬೇಕಿದ್ದ ಈ ಬಾರಿಯ IPL ಟೂರ್ನಿಯನ್ನು ಸಂಪೂರ್ಣವಾಗಿ ಮುಂದೂಡಿಕೆ ಮಾಡಲಾಗಿದೆ.

