ಶ್ರೀನಗರ: ಭಾರತ ಮತ್ತು ಪಾಕಿಸ್ತಾನ (India Pakistan Conflict) ಔಪಚಾರಿಕವಾಗಿ ಕದನ ವಿರಾಮಕ್ಕೆ ಒಪ್ಪಿಕೊಂಡ ಕೆಲವೇ ಗಂಟೆಗಳ ನಂತರ ಶನಿವಾರ ಸಂಜೆ ಶ್ರೀನಗರವು ದೊಡ್ಡ ಸ್ಫೋಟಗಳಿಂದ ನಡುಗಿದೆ. ಹಠಾತ್ ಸ್ಫೋಟಗಳನ್ನು ಗಮನಿಸಿದ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ (Omar Abdullah) ಕದನ ವಿರಾಮವನ್ನು ಪ್ರಶ್ನಿಸಿದ್ದಾರೆ.
ಇದು ಕದನ ವಿರಾಮವಲ್ಲ. ಶ್ರೀನಗರದ ಮಧ್ಯಭಾಗದಲ್ಲಿರುವ ವಾಯು ರಕ್ಷಣಾ ಘಟಕಗಳು ಇದೀಗಷ್ಟೇ ತೆರೆದುಕೊಂಡಿವೆ ಎಂದು ಸಿಎಂ ಒಮರ್ ಅಬ್ದುಲ್ಲಾ ಎಕ್ಸ್‌ನಲ್ಲಿ ಪೋಸ್ಟ್ ಹಾಕಿ ಆತಂಕ ವ್ಯಕ್ತಪಡಿಸಿದ್ದಾರೆ
ಕದನ ವಿರಾಮಕ್ಕೆ ಈಗಷ್ಟೇ ಏನಾಯಿತು? ಶ್ರೀನಗರದಾದ್ಯಂತ ಸ್ಫೋಟಗಳ ಸದ್ದು ಕೇಳಿಬಂದಿದೆ!!! ಎಂದು ಸಿಎಂ ಕಳವಳ ವ್ಯಕ್ತಪಡಿಸಿದ್ದಾರೆ.
ಕದನ ವಿರಾಮ ಮತ್ತೆ ಉಲ್ಲಂಘಿಸಿ ಪಾಕಿಸ್ತಾನ ಬಾಲ ಬಿಚ್ಚಿದೆ. ಜಮ್ಮುವಿನ ಅಖ್ನೂರ್, ಕನಾಚಕ್, ಪರ್ಗ್ವಾಲ್, ರಾಮನಗರ ವಲಯಗಳಲ್ಲಿ ಜೋರಾಗಿ ಸ್ಫೋಟಗಳು ಕೇಳಿಬಂದಿವೆ.
ಜಮ್ಮುವಿನ ಅಖ್ನೂರ್‌ನಲ್ಲಿ ಸಂಜೆ 7:45 ಕ್ಕೆ ಕದನ ವಿರಾಮ ಉಲ್ಲಂಘನೆಯಾದ ವರದಿಯಾಗಿದೆ. ಹಲವಾರು ಬಾರಿ ಜೋರಾಗಿ ಸ್ಫೋಟಗಳು ಕೇಳಿಬಂದವು. ಅಖ್ನೂರ್, ಕನಾಚಕ್, ಪರ್ಗ್ವಾಲ್ ಮತ್ತು ರಾಮನಗರ ವಲಯಗಳಲ್ಲಿ ಫಿರಂಗಿ ಶೆಲ್ ದಾಳಿ ವರದಿಯಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದದ ಸುಮಾರು 2 ಗಂಟೆ 45 ನಿಮಿಷಗಳ ನಂತರ ಈ ಘಟನೆ ಸಂಭವಿಸಿದೆ. ಪಾಕ್‌ನ ಡ್ರೋನ್‌ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.