ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಜಗಬುಡಿ ನದಿಗೆ ಕಾರು ಉರುಳಿ ಬಿದ್ದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಮುಂಬೈ-ಗೋವಾ ಹೆದ್ದಾರಿಯಲ್ಲಿ ಮುಂಬೈನಿಂದ ದೇವ್ರುಖ್‌ಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ(Accident) ಸಂಭವಿಸಿದೆ. ಕಾರಿನ ಚಾಲಕನಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರತ್ನಗಿರಿ, ಮೇ 19: ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಜಗಬುಡಿ ನದಿಗೆ ಕಾರು ಉರುಳಿ ಬಿದ್ದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಮುಂಬೈ-ಗೋವಾ ಹೆದ್ದಾರಿಯಲ್ಲಿ ಮುಂಬೈನಿಂದ ದೇವ್ರುಖ್‌ಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ(Accident) ಸಂಭವಿಸಿದೆ. ಕಾರಿನ ಚಾಲಕನಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವರದಿಗಳ ಪ್ರಕಾರ, ಬೆಳಗ್ಗೆ 5 ಗಂಟೆ ಸುಮಾರಿಗೆ ಜಗ್ಬುಡಿ ನದಿ ಸೇತುವೆಯಿಂದ ನೇರವಾಗಿ 100 ಅಡಿ ಕೆಳಗೆ ಕಾರು ಬಿದ್ದಾಗ ಅಪಘಾತ ಸಂಭವಿಸಿದೆ. ಕ್ರೇನ್ ಸಹಾಯದಿಂದ ಕಾರನ್ನು ಮೇಲಕ್ಕೆತ್ತಿ, ನಂತರ ಶವಗಳನ್ನು ವಾಹನದಿಂದ ಹೊರತೆಗೆಯಲಾಯಿತು.
ಸೋಮವಾರ ರಾತ್ರಿ ಮುಂಬೈನ ನಲಸೋಪರಾ ಪೂರ್ವದಲ್ಲಿರುವ ತುಲಿಂಜ್ ಪೊಲೀಸ್ ಠಾಣೆಯ ಮುಂದೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಆಂಬ್ಯುಲೆನ್ಸ್ ಈ ಟ್ರಾಫಿಕ್ನಲ್ಲಿ ಸಿಲುಕಿಕೊಂಡಿತ್ತು, ಸೈರನ್ ಹಾಕಿದ್ದರೂ ದಾರಿಯಲ್ಲಿ ಹೋಗಲು ಸಾಧ್ಯವಾಗಲಿಲ್ಲ. ಪರಿಣಾಮವಾಗಿ, ಆಂಬ್ಯುಲೆನ್ಸ್ ಸ್ವಲ್ಪ ಸಮಯದವರೆಗೆ ರಸ್ತೆಯಲ್ಲಿಯೇ ಅಲ್ಲಿಯೇ ಇರಬೇಕಾಯಿತು.
ಆಂಧ್ರ ಪ್ರದೇಶದಲ್ಲಿ ಬಾವಿಗೆ ಬಿದ್ದ ಕಾರು: ಕರ್ನಾಟಕದ ಮೂವರು ದುರ್ಮರಣ ಆಂಧ್ರ ಪ್ರದೇಶದಲ್ಲಿ ಕಾರು ಬಾವಿಗೆ ಉರುಳಿಬಿದ್ದಿದ್ದು, ಈ ಘಟನೆಯಲ್ಲಿ ಕರ್ನಾಟಕದ ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆ ಆಂಧ್ರದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿ ನಡೆದಿದೆ. ಚಿಂತಾಮಣಿ ತಾಲೂಕಿನ ಮುತ್ತಕದಲ್ಲಿ ಗ್ರಾಮದ ನಿವಾಸಿಗಳಾದ ಲೊಕೇಶ(34), ಚಂದನಹಳ್ಳಿ ಗ್ರಾಮದ ಶಿವಾನಂದ, ಕೋಲಾರ ಜಿಲ್ಲೆಯ ಸುಗಟೂರು ಗ್ರಾಮದ ಚಲಪತಿ ಮೃತರು. ಇನ್ನು ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾದಿಂದ ಪಾರಾಗಿದ್ದಾರೆ.
ಅಡುಗೆ ಕೆಲಸಕ್ಕೆಂದು ಕಾರಿನಲ್ಲಿ ಹೋಗುತ್ತಿದ್ದರು. ಆ ವೇಳೆ ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿಯ ಬಾವಿಗೆ ಕಾರು ಬಿದ್ದಿದೆ. ಪಿಲೇರು ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ಸಂಭವಿಸಿದೆ. ಅಡುಗೆ ಕೆಲಸಕ್ಕಾಗಿ ಕಾರಿನಲ್ಲಿ ಒಟ್ಟು ಐವರು ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಚಿಂತಾಮಣಿ ಮೂಲಕ ಐವರು ಮೃತಪಟ್ಟಿದ್ದಾರೆ. ಇನ್ನುಳಿದ ಇಬ್ಬರು ಬಚಾವ್ ಆಗಿದ್ದಾರೆ.