ಹವಾಮಾನ ಇಲಾಖೆ ಮುನ್ಸೂಚನೆಯ ಹಿನ್ನಲೆಯಲ್ಲಿ ದ.ಕ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯ ಹಿನ್ನಲೆಯಲ್ಲಿ ಮೇ 30 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಪ್ರಭಾರ ಜಿಲ್ಲಾಧಿಕಾರಿ ಡಾ. ಆನಂದ ಕೆ ಆದೇಶ ಹೊರಡಿಸಿದ್ದಾರೆ.

ಗುರುವಾರ ರಾತ್ರಿಯಿಂದ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಸರಕಾರಿ ಹಾಗೂ ಖಾಸಗಿ ಅನುದಾನಿತ ಸಂಸ್ಥೆಗಳಿಗೂ ರಜೆ ಘೋಷಣೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.