
ಗುಜರಾತ್ನ ಅಹಮದಾಬಾದ್ನಲ್ಲಿ ಏಕಾಏಕಿ ವಿಮಾನ ಪತನಗೊಂಡಿದೆ. ಅಹಮದಾಬಾದ್ ಏರ್ಪೋರ್ಟ್ ಬಳಿ ವಿಮಾನ ಪತನಗೊಂಡ ಪರಿಣಾಮ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ.

ವಿಮಾನದಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿ 242 ಪ್ರಯಾಣಿಕರಿದ್ದರು. ಅವರಲ್ಲಿ 230 ಪ್ರಯಾಣಿಕರು, 12 ಮಂದಿ ಸಿಬ್ಬಂದಿ ಇದ್ದರು. ವಿಮಾನ ದುರಂತದ ವಿಡಿಯೋ ಮೊಬೈಲ್ನಲ್ಲಿ ಸೆರೆಯಾಗಿದೆ. ಪತನಗೊಳ್ಳುತ್ತಿದ್ದಂತೆಯೇ ದಟ್ಟ ಹೊಗೆ ಆವರಿಸಿದೆ.
ಅಹಮದಾಬಾದ್: ಪತನಗೊಂಡ ಏರ್ ಇಂಡಿಯಾ (Air India) ವಿಮಾನದಲ್ಲಿ ಗುಜರಾತಿನ ಮಾಜಿ ಸಿಎಂ ವಿಜಯ್ ರೂಪಾನಿ (Vijay Rupani) ಪ್ರಯಾಣಿಸುತ್ತಿದ್ದರು.
ಪತನಗೊಂಡ ವಿಮಾನದಲ್ಲಿ ಸಿಬ್ಬಂದಿ ಸೇರಿ ಒಟ್ಟು 242 ಮಂದಿ ಪ್ರಯಾಣಿಸುತ್ತಿದ್ದರು. ಈಗಾಗಲೇ ಸ್ಥಳಕ್ಕೆ ಅಂಬುಲೆನ್ಸ್ ಮತ್ತು ಅಗ್ನಿಶಾಮಕ ದಳ ಧಾವಿಸಿವೆ
ಟೇಕಾಫ್ ಆದ ಕೆಲವೇ ನಿಮಿಷದಲ್ಲಿ ಲಂಡನ್ಗೆ ತೆರಳುತ್ತಿದ್ದ ಏರ್ಇಂಡಿಯಾ ವಿಮಾನ ಪತನಗೊಂಡಿದೆ. ವಿಮಾನ ಮಧ್ಯಾಹ್ನಅಹಮದಾಬಾದ್ನಿಂದ ಟೇಕಾಫ್ ಆಗಿತ್ತು. ಟೇಕಾಫ್ ಆದ 10 ನಿಮಿಷದಲ್ಲಿ ತಾಂತ್ರಿಕ ದೋಷದಿಂದ ವಿಮಾನ ಪತನಗೊಂಡು ಜನವಸತಿ ಕಟ್ಟಡದ ಮೇಲೆ ಬಿದ್ದಿದೆ.
ಮೊಬೈಲ್ನಲ್ಲಿ ಸೆರೆಯಾದ ದೃಶ್ಯದಲ್ಲಿ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆ ಪತನವಾಗಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.