Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಕೋಮು ವೈಷಮ್ಯ ಪ್ರಕರಣ ತಡೆಯಲು ಮಂಗಳೂರಿನಲ್ಲಿ ಎಸ್​​ಎಎಫ್ ಆರಂಭ: ಇದು ದೇಶದಲ್ಲೇ ಮೊದಲು – SPECIAL ACTION FORCE

editor tv by editor tv
June 13, 2025
in ರಾಜ್ಯ
0
ಕೋಮು ವೈಷಮ್ಯ ಪ್ರಕರಣ ತಡೆಯಲು ಮಂಗಳೂರಿನಲ್ಲಿ ಎಸ್​​ಎಎಫ್ ಆರಂಭ: ಇದು ದೇಶದಲ್ಲೇ ಮೊದಲು – SPECIAL ACTION FORCE
1.9k
VIEWS
Share on FacebookShare on TwitterShare on Whatsapp

ಕೋಮು ವೈಷಮ್ಯ ಪ್ರಕರಣ ತಡೆಯಲು ಸ್ಥಾಪಿಸಲಾದ ಸ್ಪೆಷಲ್ ಆ್ಯಕ್ಷನ್ ಫೋರ್ಸ್​ಗೆ ಗೃಹ ಸಚಿವ ಪರಮೇಶ್ವರ್​ ಚಾಲನೆ ನೀಡಿದರು.

ಮಂಗಳೂರು(ದಕ್ಷಿಣ ಕನ್ನಡ): ಕೋಮು ವೈಷಮ್ಯ ಪ್ರಕರಣ ತಡೆಯಲು ಮಂಗಳೂರನ್ನು ಕೇಂದ್ರೀಕರಿಸಿ ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಲು ಸ್ಪೆಷಲ್ ಆ್ಯಕ್ಷನ್ ಫೋರ್ಸ್ (ಎಸ್​​ಎಎಫ್ ) ಸ್ಥಾಪಿಸಲಾಗಿದ್ದು, ಇಂದಿನಿಂದ ಕಾರ್ಯಾರಂಭ ಮಾಡುತ್ತದೆ. ಈ ಎಸ್​​ಎಎಫ್ ತಂಡಕ್ಕೆ ಗೃಹ ಸಚಿವ ಜಿ.ಪರಮೇಶ್ವರ್ ಅವರು ಇಂದು ಮಂಗಳೂರಿನಲ್ಲಿ ಚಾಲನೆ ನೀಡಿದ್ದು, ಇದು ಕೋಮು ವೈಷಮ್ಯ ತಡೆಯಲು ದೇಶದಲ್ಲೇ ಮೊದಲ ಬಾರಿಗೆ ಸ್ಥಾಪಿಸಲಾದ ಸಂಸ್ಥೆಯಾಗಿದೆ.

ದಕ್ಷಿಣ ಕನ್ನಡ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಕೋಮು ದ್ವೇಷದ ಪ್ರಕರಣಗಳು ನಡೆಯುತ್ತಲೇ ಇರುತ್ತದೆ. ಅದರಲ್ಲಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ವೈಷಮ್ಯದಿಂದ ಸರಣಿ ಹತ್ಯೆಗಳು ನಡೆಯುತ್ತಿವೆ. ಕೋಮು ವೈಷಮ್ಯದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರು ಭಯದಿಂದ ಬದುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಹಿನ್ನೆಲೆಯಲ್ಲಿ ಎಸ್​​ಎಎಫ್ ಸ್ಥಾಪಿಸಿ ಕಾರ್ಯಾಚರಣೆಗೆ ಸಜ್ಜುಗೊಳಿಸಲಾಗಿದೆ.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಕೋಮು ವೈಷಮ್ಯ ತಡೆಯಲು ಪೋರ್ಸ್ ಸ್ಥಾಪನೆ ಮಾಡುತ್ತಿರುವುದು ದೇಶದಲ್ಲೇ ಪ್ರಥಮ. ಕೋಮು ವೈಷಮ್ಯ ಪ್ರಕರಣಗಳು ನಡೆದಾಗ ವಿವಿಧ ರೀತಿಯಲ್ಲಿ ಇದನ್ನು ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳುತ್ತಿದ್ದೆವು. ಆದರೆ ಅದರಿಂದ ಕೋಮು ವೈಷಮ್ಯ ಪ್ರಕರಣಗಳು ತಡೆಯುತ್ತಿಲ್ಲ ಎಂಬುದನ್ನು ಅರಿತು ಎಸ್​​ಎಎಫ್ ಸ್ಥಾಪಿಸಿ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದರು.

ಎಎನ್ಎಫ್ ನಿಂದ ಎಸ್​​ಎಎಫ್​ಗೆ ಸಿಬ್ಬಂದಿಗಳು: ಕಾರ್ಕಳದಲ್ಲಿ ಕೇಂದ್ರ ಸ್ಥಾನದಲ್ಲಿರುವ ನಕ್ಸಲ್ ನಿಗ್ರಹ ದಳ ( ಎಎನ್​ಎಫ್ ) ದ 656 ಸಿಬ್ಬಂದಿಗಳಲ್ಲಿ 248 ಸಿಬ್ಬಂದಿಗಳನ್ನು ಎಸ್​ಎಎಫ್​ಗೆ ನಿಯೋಜಿಸಲಾಗಿದೆ. ಇದರಲ್ಲಿ ಡಿಐಜಿಪಿ 1, ಡಿವೈಎಸ್​​ಪಿ ಸಿವಿಲ್ 1, ಸಹಾಯಕ ಕಮಾಂಡೆಂಟ್ 1, ಪಿಐ/ ಆರ್​​ಪಿಐ 4, ಪಿಎಸ್ಐ/ ಆರ್​​ಎಸ್​​ಐ/ ಎಸ್​ಐ 16, ಸಿಹೆಚ್​ಸಿ 60 , ಸಿಪಿಸಿ/ಎಪಿಸಿ 150, ಅನುಯಾಯಿ 15 ಮಂದಿ ಇರಲಿದ್ದಾರೆ. ಇದರಲ್ಲಿ ಮಂಗಳೂರು ಕೇಂದ್ರ ಸ್ಥಾನದಲ್ಲಿ ಡಿಐಜಿಪಿ 1, ಎಸ್​ಪಿ 1, ಡಿವೈಎಸ್​ಪಿ 1, ಸಹಾಯಕ ಕಮಾಂಡೆಂಟ್ 1, ಪಿಐ/ಆರ್​ಪಿಐ 1, ಪಿಎಸ್ಐ, ಆರ್​ಎಸ್​​ಐ, ಎಸ್​​ಐ 1, ಸಿಹೆಚ್​​ಸಿ 3 , ಪಿಸಿಪಿ, ಎಪಿಸಿ 6 ಇದ್ದು, ಒಟ್ಟು 15 ಮಂದಿ ಇರಲಿದ್ದಾರೆ. ಇನ್ನು ಉಡುಪಿ, ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗೆ ತಲಾ ಒಂದು ಪಿಐ/ ಆರ್​​ಪಿಐ, 5 ಪಿಎಸ್​​ಐ / ಆರ್​​ಎಸ್​​ಐ / ಎಸ್​ಐ, 19 ಸಿಹೆಚ್​ಸಿ , 48 ಸಿಪಿಸಿ/ಎಪಿಸಿ ಮತ್ತು 5 ಅನುಯಾಯಿ ಇರಲಿದ್ದಾರೆ. ಮೂರು ಜಿಲ್ಲೆಗೂ ತಲಾ 78 ಸಿಬ್ಬಂದಿಗಳು ಇರಲಿದ್ದಾರೆ.

ಮಂಗಳೂರಿನಲ್ಲಿ ಕೇಂದ್ರ ಕಚೇರಿ: ಮಂಗಳೂರಿನ ನಗರ ಪೊಲೀಸ್ ಕಮಿಷನರೇಟ್​ ಕಚೇರಿಯ ಹಿಂಭಾಗದಲ್ಲಿರುವ ಮೈದಾನದ ಬಳಿ ಎಸ್​​ಎಎಫ್​ಗೆ ಕಚೇರಿ ತೆರೆಯಲಾಗಿದೆ. ಈ ಕಚೇರಿಯನ್ನು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಗೃಹ ಸಚಿವ ಜಿ ಪರಮೇಶ್ವರ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.

ಸುಧೀರ್ ಕುಮಾರ್ ರೆಡ್ಡಿ ನೇತೃತ್ವ: ಮಂಗಳೂರಿನಲ್ಲಿ ಸರಣಿ ಹತ್ಯೆ ಬಳಿಕ ನೂತನ ನಗರ ಪೊಲೀಸ್ ಕಮೀಷನರ್​ ಆಗಿ ನೇಮಕಗೊಂಡಿರುವ ಸುಧೀರ್ ಕುಮಾರ್ ರೆಡ್ಡಿ ಅವರು ಎಸ್​​ಎಎಫ್ ಫೋರ್ಸ್​ನ ಮುಖ್ಯಸ್ಥರಾಗಿದ್ದಾರೆ. ಇವರು ವಿಶೇಷ ಕಾರ್ಯಪಡೆಯ ಡಿಐಜಿಪಿ ಹುದ್ದೆಯಲ್ಲಿ ಇವರು ಕಾರ್ಯನಿರ್ವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಅವರು ಶಾಂತಿ ಕಾಪಾಡಬೇಕು ಎಂಬ ಉದ್ದೇಶದಲ್ಲಿ ವಿಶೇಷ ಕಾರ್ಯಪಡೆ ಆರಂಭಿಸಲಾಗಿದೆ. ಶಾಂತಿ ಕಾಪಾಡಲು ಸೌಹಾರ್ದತಯುತವಾಗಿ ಪ್ರಯತ್ನ ಮಾಡಿದರೂ ಆಗಲಿಲ್ಲ. ಅದಕ್ಕೆ ಇದನ್ನು ಮಾಡಲಾಗಿದೆ. ಇದರ ಉಪಯೋಗ ಬರಲಾರದು ಎಂಬ ವಿಶ್ವಾಸ ಇದೆ. ಜನ ಅರ್ಥ ಮಾಡಿಕೊಂಡರೆ , ಇದರ ಅಗತ್ಯತೆ ಕಡಿಮೆ ಆಗುತ್ತದೆ. ಶಾಂತಿ ಕಾಪಾಡಲು ಏನೆಲ್ಲ ಕ್ರಮ ಕೈಗೊಳ್ಳಬೇಕು ಎಂಬುದನ್ನು ತಿಳಿಸಿದ್ದೇವೆ. ಎಎನ್​​ಎಫ್ ಸಂಖ್ಯೆಯನ್ನು ಕಡಿಮೆ ಮಾಡುತ್ತೇವೆ. ಉತ್ತರ ಭಾರತದಿಂದ ನಕ್ಸಲರು ಇಲ್ಲಿಗೆ ಬಂದರೆ ಕಾರ್ಯಾಚರನೆ ಮಾಡಲು ಒಂದಷ್ಟು ಸಿಬ್ಬಂದಿಗಳನ್ನು ಇಟ್ಟುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

Previous Post

ಮಂಗಳೂರು: 15 ವರ್ಷದ ಬಾಲಕಿ ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಿಂದ ಬಿದ್ದು ಮೃತ್ಯು

Next Post

Flight Crash; ವಿಮಾನದಲ್ಲಿ ತಂದೆ, ತಾಯಿ ಜೊತೆ 4 ವರ್ಷದ ಕಂದಮ್ಮನ ಬದುಕು ಕೂಡ ಕೊನೆ!

Next Post

Flight Crash; ವಿಮಾನದಲ್ಲಿ ತಂದೆ, ತಾಯಿ ಜೊತೆ 4 ವರ್ಷದ ಕಂದಮ್ಮನ ಬದುಕು ಕೂಡ ಕೊನೆ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.