ಮಂಗಳೂರು :ರೆಡ್ ಅಲರ್ಟ್ ಹಿನ್ನಲೆಯಲ್ಲಿ ನಾಳೆ (ಜೂನ್ 16) ದ.ಕ. ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡುಬಿದಿರೆ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ರಜೆ ಘೋಷಣೆ ಮಾಡಿದ್ದಾರೆ. ಕರಾವಳಿಯಲ್ಲಿ ನಾಳೆ ಭಾರೀ ಮಳೆಯಾಗುವುದು ದಟ್ಟವಾಗಿದೆ. ಇದರಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಬಹುದು ಎಂದು ಮೊದಲೇ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ. ದಕ್ಷಿಣ ಕನ್ನಡದ 5 ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಂಗಳೂರು, ಉಳ್ಳಾಲ, ಬಂಟ್ವಾಳ, ಮುಲ್ಕಿ ಹಾಗೂ ಮೂಡಬಿದಿರೆ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಆಗಿದೆ.
ಉಡುಪಿಯಲ್ಲೂ ಧಾರಾಕಾರ ಮಳೆ ಸುರಿಯುತ್ತಿದ್ದು ಜನರು ಬೇಸರ ವ್ಯಕ್ತಪಡಿಸಿದ್ದಾರೆ. ನಾಳೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಇರುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎಲ್ಲಾ ಶಾಲೆಗಳಿಗೆ ನಾಳೆ ರಜೆ ಘೋಷಿಸಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಇರುತ್ತದೆ. ಭಾರೀ ಗಾಳಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಅವರು ಆದೇಶ ನೀಡಿದ್ದಾರೆ.