ಮಂಗಳೂರು : ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸದ ಸರಕಾರದ ನಡೆಯನ್ನು ವಿರೋಧಿಸಿ ‘ನ್ಯಾಯ ಮರೀಚಿಕೆ,ಹುಸಿಯಾದ ಭರವಸೆ’ ಎಂಬ ಘೋಷಾ ವಾಕ್ಯದಡಿಯಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಜುಲೈ 08 ಮಂಗಳವಾರ ಸಂಜೆ 3.30 ಕ್ಕೆ ಬಿಸಿರೋಡ್ ನ ಕೈಕಂಬದಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಸಂವಿಧಾನ ಪ್ರೇಮಿಗಳು ಈ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಕೆ.ಎ ಪುತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.