
ಉತ್ತರಾಖಂಡ್: ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ದುರಂತವೊಂದು ಸಂಭವಿಸಿದೆ. ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ ಉಂಟಾಗಿ ಆರು ಭಕ್ತರು ಜೀವ ಬಿಟ್ಟಿದ್ದಾರೆ.

ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ. ಹಾಗೂ ಮೂರ್ನಾಲ್ಕು ಆಂಬುಲೆನ್ಸ್ ಆಗಮಿಸಿ ಗಂಭೀರವಾಗಿ ಗಾಯಗೊಂಡವನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿವೆ.

ಪ್ರಾಥಮಿಕ ಪ್ರಕಾರ, ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ವಿದ್ಯುತ್ ಆಘಾತದಿಂದ ಕಾಲ್ತುಳಿತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಇದರಿಂದಾಗಿ ಭಕ್ತರಲ್ಲಿ ಏಕಾಏಕಿ ಗೊಂದಲ ಉಂಟಾಗಿ ಓಡಲು ಶುರು ಮಾಡಿದ್ದರಿಂದ ಈ ಕಾಲ್ತುಳಿತ ಸಂಭವಿಸಿದೆ ಎನ್ನಲಾಗಿದೆ. ಸದ್ಯ ಈ ಘಟನೆಯಲ್ಲಿ ಏನೆಲ್ಲಾ ಆಯ್ತು ಎಂದು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
हरिद्वार स्थित मनसा देवी मंदिर मार्ग में भगदड़ मचने का अत्यंत दुःखद समाचार प्राप्त हुआ है। @uksdrf, स्थानीय पुलिस तथा अन्य बचाव दल मौके पर पहुंचकर राहत एवं बचाव कार्यों में जुटे हुए हैं।
इस संबंध में निरंतर स्थानीय प्रशासन के संपर्क में हूं और स्थिति पर लगातार निगरानी रखी जा रही…
— Pushkar Singh Dhami (@pushkardhami) July 27, 2025
ಇನ್ನೂ ಈ ಬಗ್ಗೆ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಎಕ್ಸ್ ಖಾತೆಯಲ್ಲಿ, ಹರಿದ್ವಾರದ ಮಾನಸಾ ದೇವಿ ದೇವಾಲಯದಲ್ಲಿ ಕಾಲ್ತುಳಿತದ ಸುದ್ದಿ ತೀವ್ರ ದುಃಖಕರವಾಗಿದೆ. ಎಸ್‌ಡಿಆರ್‌ಎಫ್, ಸ್ಥಳೀಯ ಪೊಲೀಸರು ಮತ್ತು ಇತರ ರಕ್ಷಣಾ ತಂಡಗಳು ಸ್ಥಳದಲ್ಲಿದ್ದು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಪೋಸ್ಟ್ ಮಾಡಿದ್ದಾರೆ.