Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ

ಸಂಜಯ್ ದತ್​​​​​ ಮೇಲಿನ ಅಭಿಮಾನ.. ಸಾವಿಗೂ ಮುನ್ನ ನೆಚ್ಚಿನ ನಟನಿಗೆ 72 ಕೋಟಿ ಆಸ್ತಿ ದಾನ; ಮುಂದೇನಾಯ್ತು..?

editor tv by editor tv
July 28, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp
https://newsfirstlive.com/wp-content/uploads/2025/07/sanjay-dut1.jpg

ಈಗಿನ ಕಾಲದಲ್ಲಿ ಯಾರೂ ಕೂಡ ಮತ್ತೊಬ್ಬರಿಗೆ 5, 10 ಸಾವಿರ ರೂಪಾಯಿ ಹಣವನ್ನು ಫ್ರೀಯಾಗಿ ಕೊಡಲ್ಲ. ಸಾಲ ಕೊಟ್ಟರೂ, ವಾಪಸ್ ಕೇಳೇ ಕೇಳುತ್ತಾರೆ. ಅಂಥದ್ದರಲ್ಲಿ ನಿಮ್ಮ ಹೆಸರಿಗೆ ಬರೋಬ್ಬರಿ 72 ಕೋಟಿ ರೂಪಾಯಿ ಆಸ್ತಿ ಅನಾಮತ್ತಾಗಿ ಬಂದರೇ ನೀವು ಏನು ಮಾಡಬಹುದು. ಈ ಹಣದಲ್ಲಿ ಬೇರೆ ಯಾರೇ ಆಗಿದ್ದರೂ, ಜೀವನ ಪೂರ್ತಿ ಮಜಾ ಮಾಡುತ್ತಾರೆ. ದಿಢೀರ್​ ಶ್ರೀಮಂತಿಕೆ ಬಂದರೇ, ಮಧ್ಯೆ ರಾತ್ರಿಯಲ್ಲೂ ಕೊಡೆ ಹಿಡಿಯುವ ಜನರು ಸಮಾಜದಲ್ಲಿ ಇದ್ದಾರೆ. ಆದರೆ, ನಟ ಸಂಜಯ್ ದತ್ ಕೆಟಗರಿಗಳಿಗೆ ಸೇರಿದವರಲ್ಲ. ತಮ್ಮ ಹೆಸರಿಗೆ ಬಂದ ಬರೋಬ್ಬರಿ 72 ಕೋಟಿ ರೂಪಾಯಿ ಆಸ್ತಿಪಾಸ್ತಿ, ಹಣವನ್ನು ನೀಡಿದವರ ಕುಟುಂಬಕ್ಕೆ ವಾಪಸ್ ಕೊಟ್ಟಿದ್ದಾರೆ. ಈ ಮೂಲಕ ಬಾಲಿವುಡ್ ನಟ ಸಂಜಯ್ ದತ್ ದೊಡ್ಡತನ ಮೆರೆದಿದ್ದಾರೆ. ಈ ವಿಷಯವನ್ನು ಈಗ ನಟ ಸಂಜಯ್ ದತ್ ಅವರೇ ಬಹಿರಂಗಪಡಿಸಿದ್ದಾರೆ. ತಮ್ಮ ಜೀವನದಲ್ಲಿ ನಡೆದ ನಂಬಲಅಸಾಧ್ಯ ಘಟನೆಯನ್ನು ಸಂಜಯ್ ದತ್ ಬಹಿರಂಗಪಡಿಸಿದ್ದಾರೆ.

ಕರ್ಲಿ ಟೇಲ್ಸ್ ಯೂಟ್ಯೂಬ್ ಚಾನಲ್ ಸಂದರ್ಶನದಲ್ಲಿ ಮಾತನಾಡಿರುವ ನಟ ಸಂಜಯ್ ದತ್, ನಿಮ್ಮ ಅಭಿಮಾನಿಯೊಬ್ಬರು ನಿಮಗೆ 72 ಕೋಟಿ ರೂಪಾಯಿ ಆಸ್ತಿಪಾಸ್ತಿ, ಹಣ ನೀಡಿದ್ದು ನಿಜವೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಂಜಯ್ ದತ್, ಆ ಘಟನೆ ನಡೆದಿದ್ದು ನಿಜ ಎಂದು ಖಚಿತಪಡಿಸಿದ್ದಾರೆ. ಜೊತೆಗೆ ನಾನು ಅದನ್ನು ಅವರ ಕುಟುಂಬಕ್ಕೆ ವಾಪಸ್ ನೀಡಿದೆ ಎಂದು ಕೂಡ ಹೇಳಿದ್ದಾರೆ. 2018ರಲ್ಲಿ ಸಂಜಯ್ ದತ್ ಅಭಿಮಾನಿ ನಿಶಾ ಪಾಟೀಲ್ ಅವರು ತಮ್ಮ ಎಲ್ಲ ಸಂಪತ್ತು ಅನ್ನು ನಟ ಸಂಜಯ್ ದತ್ ಅವರಿಗೆ ನೀಡಿದ್ದರು. ಈ ಅನಿರೀಕ್ಷಿತ ಘಟನೆ ಸಂಜಯ್ ದತ್ ಅವರನ್ನು ಅಶ್ಚರ್ಯಚಕಿತರನ್ನಾಗಿಸಿತು. ನಿಶಾ ಪಾಟೀಲ್ ಅವರು ಬರೋಬ್ಬರಿ 72 ಕೋಟಿ ಸಂಪತ್ತಿನ ಮಾಲಕಿಯಾಗಿದ್ದರು. ಎಲ್ಲ 72 ಕೋಟಿ ರೂಪಾಯಿ ಸಂಪತ್ತು ಅನ್ನು ಸಂಜಯ್ ದತ್ ಅವರಿಗೆ ಅವರ ಮೇಲಿನ ಅಭಿಮಾನದ ಕಾರಣಕ್ಕೆ ನೀಡಿದ್ದರು. 62 ವರ್ಷ ವಯಸ್ಸಿನ ನಿಶಾ ಪಾಟೀಲ್ ಮುಂಬೈನಲ್ಲಿ ಗೃಹಿಣಿಯಾಗಿದ್ದರು. ನಿಶಾ ಪಾಟೀಲ್, ವಾಸಿಯಾಗದ ಕಾಯಿಲೆಯಿಂದ ಬಳಲುತ್ತಿದ್ದರು.

ತಮ್ಮ ಸಾವಿನ ಬಳಿಕ ತಮ್ಮೆಲ್ಲಾ ಆಸ್ತಿಯನ್ನು ಬಾಲಿವುಡ್ ನಟ ಸಂಜಯ್ ದತ್ ಅವರ ಹೆಸರಿಗೆ ವರ್ಗಾಯಿಸಬೇಕು ಎಂದು ತಮ್ಮ ಬ್ಯಾಂಕ್ ಹಾಗೂ ವಕೀಲರಿಗೆ ನಿಶಾ ಪಾಟೀಲ್ ಹೇಳಿದ್ದರು. ಹೀಗಾಗಿ ನಿಶಾ ಪಾಟೀಲ್ ಅವರ 72 ಕೋಟಿ ರೂಪಾಯಿ ಆಸ್ತಿ ಸಂಜಯ್ ದತ್ ಹೆಸರಿಗೆ ಬಂದಿತ್ತು. ಆದರೆ, ಬಳಿಕ ಸಂಜಯ್ ದತ್ ಆ ಎಲ್ಲ 72 ಕೋಟಿ ರೂಪಾಯಿ ಆಸ್ತಿಪಾಸ್ತಿ, ಹಣವನ್ನು ತಾವೇ ಇಟ್ಟುಕೊಂಡು ಅನುಭವಿಸಲಿಲ್ಲ. ತಮ್ಮ ಮಕ್ಕಳಿಗೂ ಕೊಡಲಿಲ್ಲ. ಬದಲಿಗೆ ನಿಶಾ ಪಾಟೀಲ್ ಕುಟುಂಬಸ್ಥರಿಗೆ ವಾಪಸ್ ಕೊಟ್ಟು ಬಿಟ್ಟಿದ್ದಾರೆ. ನಾನು ಅದನ್ನು ಅವರ ಕುಟುಂಬಸ್ಥರಿಗೆ ವಾಪಸ್ ನೀಡಿದೆ ಎಂದು ನಟ ಸಂಜಯ್ ದತ್ ಈಗ ಹೇಳಿದ್ದಾರೆ.

1981ರಲ್ಲಿ ರಾಕಿ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ ಈ ನಟ, ಹಿಂದಿ ಚಿತ್ರರಂಗದಲ್ಲಿ ವಿವಾದಾತ್ಮಕವಾಗಿದ್ದರೂ ಸಹ ಯಶಸ್ವಿ ವೃತ್ತಿಜೀವನವನ್ನು ಅನುಭವಿಸಿದ್ದಾರೆ. ವಿಧಾತ, ನಾಮ್, ಸಾಜನ್, ಖಲ್ ನಾಯಕ್ ಮತ್ತು ವಾಸ್ತವ್ ಸೇರಿದಂತೆ ಹಲವಾರು ಜನಪ್ರಿಯ ಚಿತ್ರಗಳಲ್ಲಿ ನಟಿಸಿ, ಬಾಲಿವುಡ್‌ನ ಅತ್ಯಂತ ವರ್ಚಸ್ವಿ ನಟರಲ್ಲಿ ಒಬ್ಬರಾಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಆದಾಗ್ಯೂ ನಟ ಸಂಜಯ ದತ್ ಅನೇಕ ವಿವಾದಗಳಲ್ಲಿ ಸಿಲುಕಿಕೊಂಡಿದ್ದರು. 1993 ರ ಮುಂಬೈ ಸ್ಫೋಟಗಳಿಗೆ ಸಂಬಂಧಿಸಿದ ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿದ್ದಕ್ಕಾಗಿ ಸಂಜಯ್ ದತ್ ಅವರನ್ನು ಟಾಡಾ ಕಾಯಿದೆ ಅಡಿಯಲ್ಲಿ ಬಂಧಿಸಲಾಯಿತು. ಅಂತಿಮವಾಗಿ ಟಾಡಾ ಅಡಿಯಲ್ಲಿ ಖುಲಾಸೆಗೊಂಡರೂ, ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಅವರನ್ನು ಅಪರಾಧಿ ಎಂದು ಘೋಷಿಸಲಾಯಿತು. ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಹಲವಾರು ಪೆರೋಲ್‌ಗಳ ನಂತರ ಸಂಜಯ್ ದತ್ ಅವರು 2016ರಲ್ಲಿ ತಮ್ಮ ಶಿಕ್ಷೆಯನ್ನು ಪೂರ್ಣಗೊಳಿಸಿದರು.

Previous Post

ಧರ್ಮಸ್ಥಳ ದೂರು’: ಮೃತದೇಹ ಹೂತಿಟ್ಟ ಸ್ಥಳದ ಮಹಜರು ಪ್ರಕ್ರಿಯೆ ಆರಂಭ

Next Post

ಧರ್ಮಸ್ಥಳದಲ್ಲಿ ಶವ ಹೂಳಿರುವ ಜಾಗ ತೋರಿಸಿದ ಅನಾಮಿಕ; ನೇತ್ರಾವದಿ ನದಿ ಸ್ನಾನಘಟ್ಟ ಕಾಡಿನ ಬಳಿ ಶೋಧ!

Next Post
ಧರ್ಮಸ್ಥಳದಲ್ಲಿ ಶವ ಹೂಳಿರುವ ಜಾಗ ತೋರಿಸಿದ ಅನಾಮಿಕ; ನೇತ್ರಾವದಿ ನದಿ ಸ್ನಾನಘಟ್ಟ ಕಾಡಿನ ಬಳಿ ಶೋಧ!

ಧರ್ಮಸ್ಥಳದಲ್ಲಿ ಶವ ಹೂಳಿರುವ ಜಾಗ ತೋರಿಸಿದ ಅನಾಮಿಕ; ನೇತ್ರಾವದಿ ನದಿ ಸ್ನಾನಘಟ್ಟ ಕಾಡಿನ ಬಳಿ ಶೋಧ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.