ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧಿಸಿದಂತೆ ಕೊನೆಗೂ ದೂರುದಾರ ಗುರುತಿಸಿದ್ದ 6ನೇ ಪಾಯಿಂಟ್‌ನಲ್ಲಿ ಎರಡು ಅಸ್ಥಿಪಂಜರಗಳು ಪತ್ತೆಯಾಗಿದೆ ಎಂದು `ಎಸ್‌ಐಟಿ ಮೂಲಗಳು ತಿಳಿಸಿವೆ.
ದೂರುದಾರ ಗುರುತಿಸಿದ ಸ್ಥಳಗಳ ಪೈಕಿ ಇದೀಗ 6ನೇ ಪಾಯಿಂಟ್‌ನಲ್ಲಿ 15 ಕಾರ್ಮಿಕರಿಂದ ಉತ್ಖನನ ನಡೆಯುತ್ತಿದ್ದು, ಎರಡು ಅಸ್ಥಿಪಂಜರ ಪತ್ತೆಯಾಗಿದೆ. ದೇಹದ ಪೂರ್ತಿ ಭಾಗಗಳು ಸಿಕ್ಕಿಲ್ಲ, ಕೆಲವು ಭಾಗಗಳು ಮಾತ್ರ ಸಿಕ್ಕಿದ್ದು, ಇನ್ನೂ ಆಳಕ್ಕೆ ತೆಗೆದು ಹುಡುಕಾಟ ನಡೆಸಲಾಗುತ್ತಿದೆ. ಇನ್ನೂ ಇದರ ಬಳಿಕ 7 ಹಾಗೂ 8ನೇ ಪಾಯಿಂಟ್‌ನಲ್ಲಿ ಉತ್ಖನನ ಕಾರ್ಯ ನಡೆಸುವ ಸಾಧ್ಯತೆಗಳಿವೆ
ಶೋಧದ ವೇಳೆ ಪತ್ತೆಯಾದ ಮೂಳೆಗಳನ್ನು ಎಸ್‌ಐಟಿ ಸಂಗ್ರಹ ಮಾಡಿದೆ. 6 ನೇ ಪಾಯಿಂಟ್‌ನಲ್ಲಿ ಸಿಕ್ಕ ಅಸ್ಥಿಪಂಜರದ ಮೂಳೆಗಳನ್ನು ನಿಯಮ ಪ್ರಕಾರವಾಗಿ ಅಧಿಕಾರಿಗಳು ಸಂಗ್ರಹಿಸುತ್ತಿದ್ದು ಎಫ್‌ಎಸ್‌ಎಲ್ ಪರೀಕ್ಷೆಗೆ ಕಳಿಸಲಾಗುತ್ತದೆ.

ಮೂರನೇ ದಿನಕ್ಕೆ ಶೋಧ ಕಾರ್ಯ ನಡೆಯುತ್ತಿದ್ದು, ಹಿಟಾಚಿಯಲ್ಲಿ ಇಂದು ಕಾರ್ಯಾಚರಣೆ ನಡೆಸಲಾಗಿತ್ತು. ಈ ಹಿಂದೆ ಮಾನವ ಶ್ರಮವನ್ನು ಬಳಸಿಕೊಳ್ಳಲಾಗಿತ್ತು. ಮಿಕ್ಕಂತೆ ಇನ್ನೂ ಅನಾಮಿಕ ಗುರುತಿಸಿರುವ 7 ಪಾಯಿಂಟ್‌ಗಳನ್ನು ಅಗೆಯಲು ಬಾಕಿ ಇದೆ. 9 ಪಾಯಿಂಟ್ ನಂತರ ಖಂಡಿತ ಮೂಳೆಗಳು ಸಿಗಲಿದೆ ಎಂದು ಅನಾಮಿಕ ಹೇಳಿರುವುದು ವರದಿಯಾಗಿತ್ತು.