ಬಂಟ್ವಾಳ: ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿ, ಕೋಮು ಸೌಹಾರ್ದತೆಗೆ ದಕ್ಕೆ ತಂದ ಆರೋಪದ ಮೇಲೆ ನರಸಿಂಹ ಶೆಟ್ಟಿ ಮಾಣಿ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.
ಗುರುವಾರ ರಾತ್ರಿ ಸಮಯ, ಬಂಟ್ವಾಳ ಪೆರ್ನೆ ಗ್ರಾಮದ ಕಡಂಬು ಎಂಬಲ್ಲಿನ ಮನೆ ಬಳಿಯಿರುವ ಹಟ್ಟಿಯಿಂದ ಕಿಡಿಗೇಡಿಗಳು ದನವೊಂದನ್ನು ಕಳವು ಮಾಡಿ ಹತ್ಯೆ ಮಾಡಿರುವ ಘಟನೆಯ ಬಗ್ಗೆ ನರಸಿಂಹ ಶೆಟ್ಟಿ ಮಾಣಿ ಎಂಬಾತನು ಮಾತನಾಡುವ ವೇಳೆ, ಸುಳ್ಳು ಸುದ್ದಿಯನ್ನು ನೀಡಿರುವುದಲ್ಲದೇ, ಧರ್ಮಧರ್ಮಗಳ ನಡುವೆ ಕೋಮುದ್ವೇಶ ಹಾಗೂ ವೈರತ್ವ ಉಂಟಾಗುವಂತೆ ಪ್ರಚೋದನಕಾರಿಯಾಗಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದರಿಂದಾಗಿ ಸಮಾಜದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆಯಾಗುವ ಹಾಗೂ ಸಾರ್ವಜನಿಕ ವಲಯದಲ್ಲಿ ಭಯಭೀತಿ ಉಂಟಾಗುವ ಸಾಧ್ಯತೆಗಳಿರುವುದರಿಂದ ಸದ್ರಿ ನರಸಿಂಹ ಶೆಟ್ಟಿ ಮಾಣಿ ಎಂಬಾತನ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ: 132/2025 ರಂತೆ ಪ್ರಕರಣ ದಾಖಲಿಸಿಕೊಂಡು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.