ಶಾಂತವಾಗಿದ್ದ ಮದ್ದೂರು ಉದ್ವಿಗ್ನಗೊಂಡಿದೆ. ಮೊನ್ನೆ ರಾತ್ರಿ ಗಣೇಶ ಮೆರವಣಿಗೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದು, ಗಲಾಟೆಗೆ ಕಾರಣವಾಗಿದೆ. ಪರಿಸ್ಥಿತಿ ಉದ್ವಿಗ್ನಗೊಂಡು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಇದನ್ನ ಖಂಡಿಸಿ ಇವತ್ತು ಮದ್ದೂರು ಪಟ್ಟಣ ಬಂದ್‌ಗೆ ಕರೆ ನೀಡಲಾಗಿದೆ.
09 Sep 2025 06:39
/newsfirstlive-kannada/media/media_files/2025/09/09/madduru-2025-09-09-06-31-23.jpg)
ಶಾಂತವಾಗಿದ್ದ ಮದ್ದೂರು ಉದ್ವಿಗ್ನಗೊಂಡಿದೆ. ಮೊನ್ನೆ ರಾತ್ರಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಿದ್ದು, ಗಲಾಟೆಗೆ ಕಾರಣವಾಗಿದೆ. ಪರಿಸ್ಥಿತಿ ಉದ್ವಿಗ್ನಗೊಂಡು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಇದನ್ನ ಖಂಡಿಸಿ ಇವತ್ತು ಮದ್ದೂರು ಪಟ್ಟಣ ಬಂದ್‌ಗೆ ಕರೆ ನೀಡಲಾಗಿದೆ.
ಕಲ್ಲು ತೂರಾಟ ಬಳಿಕ ಮದ್ದೂರು ಧರ್ಮ ದಂಗಲ್ಗೆ ತಿರುಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ನಿಷೇಧಾಜ್ಞೆ ಜಾರಿ ಆಗಿದೆ.. ಆದ್ರೆ, ನಿನ್ನೆ ಬೆಳಗು ಹರಿಯುತ್ತಿದ್ದಂತೆ ಹರಿದು ಬಂದ ಜನಸಾಗರ, ಬೃಹತ್ ಪ್ರತಿಭಟನೆ ಮಾಡಿದ್ದು, ಗಲಾಟೆ ಮತ್ತಷ್ಟು ಉಲ್ಭಣಗೊಂಡಿದೆ. ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ್ದನ್ನ ಖಂಡಿಸಿ ಇವತ್ತು ಮದ್ದೂರು ಬಂದ್‌ಗೆ ಕರೆ ನೀಡಲಾಗಿದೆ. ಹಿಂದೂಪರ ಸಂಘಟನೆಗಳು ಮದ್ದೂರು ಪಟ್ಟಣವನ್ನ ಬಂದ್ ಮಾಡಿ ಹೋರಾಟ ನಡೆಸಲು ಸಜ್ಜಾಗಿದ್ದಾರೆ.
ಬೆಳಗ್ಗೆ 6 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೇ ಮದ್ದೂರಿನಲ್ಲಿ ಪೊಲೀಸರು ಮತ್ತಷ್ಟು ಅಲರ್ಟ್ ಆಗಿದ್ದಾರೆ. ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪೊಲೀಸರು ಪಥಸಂಚಲನ ಮಾಡಿದ್ದಾರೆ.
14 ದಿನ ನ್ಯಾಯಾಂಗ ಬಂಧನ
ಎಲ್ಲಾ 22 ಆರೋಪಿಗಳನ್ನ ಪೊಲೀಸರು ಮದ್ದೂರು ತಾಲೂಕು ಎರಡನೇ ಅಪರ ಸಿವಿಲ್ ಕೋರ್ಟ್‌ಗೆ ಹಾಜರು ಪಡಿಸಿದ್ರು. ನ್ಯಾಯಾಧೀಶರಾದ ಗೋಪಾಲಕೃಷ್ಣ ಎಲ್ಲಾ ಆರೋಪಿಗಳನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ. ಇನ್ನೂ ಮಂದಿ ಆರೋಪಿಗಳನ್ನ ಮಂಡ್ಯ ಜೈಲಿಗೆ ಶಿಫ್ಟ್ ಮಾಡಲಾಗಿದೆ