Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

editor tv by editor tv
September 18, 2025
in ರಾಷ್ಟ್ರೀಯ
0
ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ
1.9k
VIEWS
Share on FacebookShare on TwitterShare on Whatsapp

ಮಧ್ಯಪ್ರದೇಶದಲ್ಲಿ ಹಾನಿಗೊಳಗಾದ ವಿಷ್ಣುವಿನ ವಿಗ್ರಹವನ್ನು ಪುನಃಸ್ಥಾಪಿಸಲು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸಿಜೆಐ ಬಿ.ಆರ್. ಗವಾಯಿ ನೇತೃತ್ವದ ಪೀಠವು ವಜಾಗೊಳಿಸಿತ್ತು. ಈ ಆದೇಶವನ್ನು ನೀಡುವಾಗ, ಸಿಜೆಐ ಅರ್ಜಿಯಲ್ಲಿ “ನಿಮ್ಮ ದೇವರನ್ನೇ ಏನಾದರೂ ಮಾಡಲು ಕೇಳಿ” ಎಂದು ಹೇಳಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಒಳಗಾಗಿತ್ತು. ಈ ಹಿನ್ನೆಲೆಯಲ್ಲಿ ಸಿಜೆಐ ಸ್ಪಷ್ಟನೆ ನೀಡಿದ್ದಾರೆ.

ನವದೆಹಲಿ, ಸೆಪ್ಟೆಂಬರ್ 18: ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರಿಸಲಾದ ಮಧ್ಯಪ್ರದೇಶದ ಜವರಿ ದೇವಾಲಯದಲ್ಲಿನ ವಿಷ್ಣುವಿನ ವಿಗ್ರಹ ಮರುಸ್ಥಾಪಿಸುವ ಕುರಿತಾದ ಪ್ರಕರಣದ ವಿಚಾರಣೆ ವೇಳೆ ಹೇಳಿದ್ದ ಮಾತು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಸ್ಪಷ್ಟನೆ ನೀಡಿರುವ ಸಿಜೆಐ ಗವಾಯಿ, ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಮಧ್ಯಪ್ರದೇಶದ ಯುನೆಸ್ಕೋ ವಿಶ್ವ ಪರಂಪರೆಯ ಖಜುರಾಹೊ ದೇವಾಲಯ ಸಂಕೀರ್ಣದ ಭಾಗವಾಗಿರುವ ಜವಾರಿ ದೇವಾಲಯದಲ್ಲಿರುವ 7 ಅಡಿ ಎತ್ತರದ ವಿಷ್ಣುವಿನ ವಿಗ್ರಹದ ಕುರಿತು ತಮ್ಮ ಹೇಳಿಕೆಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ತಪ್ಪಾಗಿ ನಿರೂಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಸೆಪ್ಟೆಂಬರ್ 16ರಂದು ಸುಪ್ರೀಂ ಕೋರ್ಟ್ ನೀಡಿದ ಆದೇಶದಿಂದ ಈ ವಿವಾದ ಉದ್ಭವಿಸಿತ್ತು. ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರಿಸಲಾದ ಮಧ್ಯಪ್ರದೇಶದ ಜವರಿ ದೇವಾಲಯದಲ್ಲಿ 7 ಅಡಿ ಎತ್ತರದ ವಿಷ್ಣುವಿನ ವಿಗ್ರಹವನ್ನು ಮರುಸ್ಥಾಪಿಸಲು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸಿಜೆಐ ಗವಾಯಿ ವಜಾಗೊಳಿಸಿದ್ದರು. ಈ ಅರ್ಜಿಯನ್ನು ತಿರಸ್ಕರಿಸಿದ ಅವರು ಇದನ್ನು “ಪ್ರಚಾರ ಹಿತಾಸಕ್ತಿಯ ಮೊಕದ್ದಮೆ” ಎಂದು ಕರೆದಿದ್ದರು.

ಇದು ಸಂಪೂರ್ಣವಾಗಿ ಪ್ರಚಾರ ಹಿತಾಸಕ್ತಿ ಮೊಕದ್ದಮೆ. ಹೋಗಿ ದೇವರನ್ನೇ ಏನಾದರೂ ಮಾಡಲು ಕೇಳಿ. ನೀವು ವಿಷ್ಣುವಿನ ದೊಡ್ಡ ಭಕ್ತ ಎಂದು ಹೇಳುತ್ತಿದ್ದೀರಿ. ಹಾಗಿದ್ದರೆ ನೀವೇ ಪ್ರಾರ್ಥಿಸಿ ಮತ್ತು ಸ್ವಲ್ಪ ಧ್ಯಾನ ಮಾಡಿ” ಎಂದು ಸಿಜೆಐ ಗವಾಯಿ ಹೇಳಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು. ಈ ವಿಷಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ASI) ವ್ಯಾಪ್ತಿಗೆ ಬರುತ್ತದೆ. ವಿಗ್ರಹದ ಮರುಸ್ಥಾಪನೆಗೆ ಪುರಾತತ್ವ ಇಲಾಖೆ ಸಮ್ಮತಿ ನೀಡುತ್ತದೆಯೇ ಇಲ್ಲವೇ ಎಂಬಿತ್ಯಾದಿ ಹಲವು ಸಮಸ್ಯೆಗಳು ಇದರಲ್ಲಿವೆ ಎಂದು ಗವಾಯಿ ಅವರ ನ್ಯಾಯಪೀಠ ಹೇಳಿತ್ತು.

ಹಾಗೇ, “ವಿಷ್ಣು ಭಕ್ತರಾದ ನೀವು ಶೈವ ಧರ್ಮವನ್ನು ವಿರೋಧಿಸದಿದ್ದರೆ ನೀವು ಅಲ್ಲಿಗೆ ಹೋಗಿ ಪೂಜಿಸಬಹುದು. ಖಜುರಾಹೊದಲ್ಲಿ ಅತ್ಯಂತ ದೊಡ್ಡ ಶಿವಲಿಂಗವಿದೆ” ಎಂದು ಸಿಜೆಐ ಗವಾಯಿ ಹೇಳಿದ್ದರು. ಈ ಕುರಿತು ತೀವ್ರ ಚರ್ಚೆಗಳು ನಡೆದಿತ್ತು.

ಈ ಹಿನ್ನೆಲೆಯಲ್ಲಿ ಇಂದು ಸುಪ್ರೀಂ ಕೋರ್ಟ್​​ನಲ್ಲೇ ಸ್ಪಷ್ಟನೆ ನೀಡಿರುವ ಸಿಜೆಐ ಗವಾಯಿ, “ನಾನು ಹೇಳಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ತಪ್ಪಾಗಿ ಚಿತ್ರಿಸಲಾಗಿದೆ ಎಂದು ಯಾರೋ ನನಗೆ ಹೇಳಿದರು. ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ. ನನ್ನ ಮಾತುಗಳನ್ನು ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ನಿರೂಪಿಸಲಾಗಿದೆ” ಎಂದಿದ್ದಾರೆ.

Previous Post

ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.