ತರಕಾರಿ ಗಾಡಿಯಲ್ಲೂ ತಂದು ಹೂಳಿದ್ದೇನೆ. 1 ರಿಂದ 17 ಪಾಯಿಂಟ್‌ವರೆಗೆ ಶವಗಳು ಇರುವ ಬಗ್ಗೆ ಚಿನ್ನಯ್ಯ ಹೇಳುತ್ತಿರುವುದು ವಿಡಿಯೋದಲ್ಲಿದೆ. ನಾನು ಹೂಳಿದ ಶವಗಳಿಗೆ ಲೆಕ್ಕವಿಲ್ಲ ಎಂದು ಚಿನ್ನಯ್ಯ ಮಾತನಾಡಿರುವುದು ಸಂಭಾಷಣೆಯಲ್ಲಿ ಕಂಡುಬರುತ್ತದೆ.
ಮಂಗಳೂರು/ ಬೆಳ್ತಂಗಡಿ (ಸೆ.21): ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಪ್ರಸಕ್ತ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯ ಮತ್ತು ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಡುವಿನ ಭೇಟಿಯ ಹಳೆಯ ಒಂದು ವಿಡಿಯೋ ಶುಕ್ರವಾರ ವೈರಲ್ ಆದ ಬಳಿಕ ಈಗ 2 ಮತ್ತು 3ನೇ ವಿಡಿಯೋ ಶನಿವಾರ ಹೊರಗೆ ಬಂದಿದ್ದು, ವೈರಲ್ ಆಗಿವೆ. ಈ ಎರಡೂ ವಿಡಿಯೋಗಳಲ್ಲಿ ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಶವಗಳನ್ನು ಹೂತಿದ್ದೇನೆ, .
ತರಕಾರಿ ಗಾಡಿಯಲ್ಲೂ ತಂದು ಹೂಳಿದ್ದೇನೆ. 1 ರಿಂದ 17 ಪಾಯಿಂಟ್‌ವರೆಗೆ ಶವಗಳು ಇರುವ ಬಗ್ಗೆ ಚಿನ್ನಯ್ಯ ಹೇಳುತ್ತಿರುವುದು ವಿಡಿಯೋದಲ್ಲಿದೆ. ನಾನು ಹೂಳಿದ ಶವಗಳಿಗೆ ಲೆಕ್ಕವಿಲ್ಲ ಎಂದು ಚಿನ್ನಯ್ಯ ಮಾತನಾಡಿರುವುದು ಸಂಭಾಷಣೆಯಲ್ಲಿ ಕಂಡುಬರುತ್ತದೆ.
ಚಿನ್ನಯ್ಯ ಹೇಳಿದ್ದೇನು?: ನಾನು ಧರ್ಮಸ್ಥಳ ಗ್ರಾಮದಲ್ಲಿ ರಾಶಿ ರಾಶಿ ಶವಗಳನ್ನು ತರಕಾರಿ ತಳ್ಳುವ ಗಾಡಿಯಲ್ಲಿ ಸಾಗಿಸಿ ಹೂತಿದ್ದೇನೆ. ಸ್ನಾನ ಘಟ್ಟದ ಬಳಿ ಶವಗಳನ್ನು ಹೂತಿದ್ದಕ್ಕೆ ಲೆಕ್ಕವೇ ಇಲ್ಲ ಅಷ್ಟು ಹೂತಿದ್ದೇನೆ. ಶಾಲೆಯ ಹಿಂದೆ ಮನೆಯ ಬಳಿ ಯುವತಿಯ ಶವ ಇತ್ತು. ಆಕೆ ಸ್ಥಳೀಯ ಕಾಲೇಜಿನಲ್ಲಿ ಓದುತ್ತಿದ್ದ ಯುವತಿ. . ಆ ಶವವನ್ನು ನಾನೇ ಹೂತು ಹಾಕಿದೆ ಎಂದು ಚಿನ್ನಯ್ಯ ಹೇಳುತ್ತಿರುವುದು 2ನೇ ವಿಡಿಯೋದಲ್ಲಿದೆ. ಇದೇ ವಿಡಿಯೋದಲ್ಲಿ ಅನಾಥ ಶವಗಳ ಬಗ್ಗೆ ಕಾಡಿನಲ್ಲಿ ಗುರುತಿಸಿದ ಸ್ಪಾಟ್ ನಂ.13ರ ಬಗ್ಗೆಯೂ ಉಲ್ಲೇಖಿಸಲಾಗಿದೆ.
ಧರ್ಮಸ್ಥಳ ಗ್ರಾಮದ ತಿರುವೊಂದರಲ್ಲಿ ಬರೋಬ್ಬರಿ 70ಕ್ಕೂ ಅಧಿಕ ಶವ ಹೂತು ಹಾಕಿದ್ದೇನೆ. ಕೇರಳ ಮೂಲದ ಹೆಂಗಸಿನ ಶವವನ್ನೂ ಹೂತಿದ್ದೇನೆ. ಅದು ಸ್ಮಶಾನ ಅಲ್ಲ, ನೇತ್ರಾವತಿ ತೀರದಲ್ಲಿ ಹೆಣ ಹೂತುಹಾಕಿದ್ದಕ್ಕೆ ಲೆಕ್ಕವೇ ಇಲ್ಲ. ಪೊಲೀಸರ ಬಂದೂಕು ಭದ್ರತೆ ನೀಡಿದರೆ ಹೂತಿಟ್ಟ ಜಾಗ ತೋರಿಸುತ್ತೇನೆ ಎಂದು ಚಿನ್ನಯ್ಯ ಹೇಳಿದ್ದಾನೆ. ಅದಕ್ಕೆ ತಿಮರೋಡಿ, ಕೋರ್ಟ್‌ನಿಂದ ನಿಮ್ಮ ಇಡೀ ಕುಟುಂಬಕ್ಕೆ ಭದ್ರತೆ ಕೊಡಿಸುತ್ತೇನೆ ಎಂದಿದ್ದಾರೆ. ಪಾಯಿಂಟ್ ನಂ.17 ಸ್ಟೋರಿಯನ್ನೂ ಚಿನ್ನಯ್ಯ ಹೇಳಿದ್ದು, ನೇತ್ರಾವತಿ ಸ್ನಾನಘಟ್ಟದ ಹೋಟೆಲ್ ಬಳಿ 12 ರಿಂದ 14 ವರ್ಷ ವಯಸ್ಸಿನ ಹುಡುಗಿಯ ಶವ, ಬಂಗ್ಲೆಗುಡ್ಡದ ಬುಡದಲ್ಲಿ (ಪಾಯಿಂಟ್ ನಂ.8) 8 ರಿಂದ 9 ಶವ ಹೂತು ಹಾಕಿದ್ದಾಗಿ ಚಿನ್ನಯ್ಯ ಹೇಳಿರುವುದು ವಿಡಿಯೋದಲ್ಲಿದೆ.