Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

editor tv by editor tv
September 21, 2025
in ರಾಷ್ಟ್ರೀಯ
0
PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ
1.9k
VIEWS
Share on FacebookShare on TwitterShare on Whatsapp

PM Narendra Modi Speech highlights: ಆದಾಯ ತೆರಿಗೆಯನ್ನು ಕಡಿಮೆ ಮಾಡಲಾಗಿದೆ. ಜಿಎಸ್​ಟಿಯಿಂದ ಸಾಕಷ್ಟು ತೆರಿಗೆ ಕಡಿಮೆ ಆಗಿದೆ. ಇದರಿಂದ ಜನರಿಗೆ ಸಾಕಷ್ಟು ಹಣ ಉಳಿತಾಯವಾಗಲಿದೆ. ನಾಳೆಯಿಂದ (ಸೆ. 22) ದೇಶದ ಜನರಿಗೆ ಉಳಿತಾಯದ ಉತ್ಸವವಾಗಲಿದೆ ಎಂದು ಪ್ರಧಾನಿಗಳು ಅಭಿಪ್ರಾಯಪಟ್ಟಿದ್ದಾರೆ. ನರೇಂದ್ರ ಮೋದಿ ಅವರು ಭಾನುವಾರ ದೇಶ ಜನರನ್ನುದ್ದೇಶಿಸಿ 20 ನಿಮಿಷ ಕಾಲ ಭಾಷಣ ಮಾಡಿದರು.

ನವದೆಹಲಿ, ಸೆಪ್ಟೆಂಬರ್ 21: ಪ್ರಧಾನಮಂತ್ರಿ (Narendra Modi) ಭಾಷಣ ಶುರು ಮಾಡಿದ ಮೊದಲಿಗೆ ದೇಶದ ಜನರಿಗೆ ದೇಶದ ಜನರಿಗೆ ನವರಾತ್ರಿ ಹಬ್ಬದ ಶುಭಾಶಯಗಳು ತಿಳಿಸಿದರು. ನಾಳೆ ನವರಾತ್ರಿ ಹಬ್ಬದ ಮೊದಲ ದಿನ ಆರಂಭವಾಗಲಿದ್ದು, ನವರಾತ್ರಿ ಮೊದಲ ದಿನದಿಂದ ಜಿಎಸ್​ಟಿ ಉತ್ಸವ (GST) ಆರಂಭವಾಗಲಿದೆ. ಜಿಎಸ್​ಟಿಯಿಂದ ನಿಮ್ಮೆಲ್ಲರ ಉಳಿತಾಯ ಶುರುವಾಗಲಿದೆ. ಎಲ್ಲ ವರ್ಗದ ಜನರಿಗೂ ಉಳಿತಾಯದ ಉತ್ಸವ ಪ್ರಾರಂಭವಾಗಲಿದೆ ಎಂದರು.

GST ಸುಧಾರಣೆಯಿಂದ ದೇಶದ ಅಭಿವೃದ್ಧಿಗೆ ಮತ್ತಷ್ಟು ಶಕ್ತಿ ತುಂಬಲಿದೆ. 2017ರಲ್ಲಿ ಭಾರತದಲ್ಲಿ ಜಿಎಸ್​ಟಿ ಸುಧಾರಣೆ ಆರಂಭಿಸಲಾಗಿತ್ತು. ದಶಕಗಳಿಂದ ಜನ ಬೇರೆ ಬೇರೆ ರೀತಿಯ ತೆರಿಗೆಯಿಂದ ಬಳಲುತ್ತಿದ್ದರು. ಪ್ರತಿಯೊಂದು ಜಾಗದಲ್ಲಿ ವಿವಿಧ ರೀತಿಯ ತೆರಿಗೆ ಜಾರಿಯಲ್ಲಿತ್ತು. ಇದರಿಂದ ಬೆಂಗಳೂರು-ಹೈದರಾಬಾದ್​ಗೆ ಉತ್ಪನ್ನ ಕಳಿಸಲು ಕಷ್ಟವಾಗುತ್ತಿತ್ತು. ತೆರಿಗೆ ಮತ್ತು ಟೋಲ್​ನಿಂದ ಜನರಿಗೆ ಬಹಳ ತೊಂದರೆ ಆಗಿತ್ತು. ದೇಶದ ಜನರು ವಿವಿಧ ರೀತಿಯ ತೆರಿಗೆ ಜಾಲದಲ್ಲಿ ಸಿಲುಕಿದ್ದರು. ನಾಳೆಯಿಂದ ಪ್ರತಿ ಮನೆಯಲ್ಲೂ ಖುಷಿ ಹೆಚ್ಚುತ್ತದೆ ಎಂದರು.

ಒನ್​ ನೇಷನ್, ಒನ್​ ಟ್ಯಾಕ್ಸ್​’ ಕನಸು ಈಡೇರಿದೆ. ಸಮಯ ಬದಲಾದಂತೆ ದೇಶದ ಅಗತ್ಯತೆ ಸಹ ಬದಲಾಗುತ್ತದೆ. ದೇಶದ ಭವಿಷ್ಯದ ದೃಷ್ಟಿಯಿಂದ ಜಿಎಸ್​ಟಿಯಲ್ಲಿ ಸುಧಾರಣೆ ಮಾಡಲಾಗಿದ್ದು, ಇದು ಹೊಸ ಪೀಳಿಗೆಗೆ ಸಹಕಾರಿಯಾಗಲಿದೆ. ಮಧ್ಯಮ ವರ್ಗದವರಿಗೆ ಸಹಕಾರ ಆಗಲಿದೆ. ರಾಜ್ಯದ ಅಭಿವೃದ್ಧಿಗೆ ಸಹಕಾರವಾಗಲಿದೆ. ಜಿಎಸ್​ಟಿ ಯಿಂದ ಹೊಸ ಇತಿಹಾಸ ಸೃಷ್ಟಿಯಾಗಿದೆ. ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಗಳನ್ನು ನಾಳೆಯಿಂದ ಜಾರಿಗೆ ತರಲಾಗುವುದು. ಇದರಿಂದ ಮುಂದಿನ ಪೀಳಿಗೆಯ ಜಿಎಸ್ಟಿ ಸುಧಾರಣೆಗಳು ಭಾರತದ ಬೆಳವಣಿಗೆಯ ವೇಗಗೊಳಿಸುತ್ತವೆ’ ಎಂದು ಜಿಎಸ್‌ಟಿ ಸುಧಾರಣೆಯನ್ನ ಪ್ರಧಾನಿ ಮೋದಿ ಶ್ಲಾಘಸಿದರು.

ಜಿಎಸ್‌ಟಿ ಸುಧಾರಣೆ ಬಡವರು, ಮಧ್ಯಮ ವರ್ಗ ಸೇರಿದಂತೆ ಎಲ್ಲಾ ಭಾರತೀಯರಿಗೆ ವ್ಯವಹಾರವನ್ನ ಸುಲಭಗೊಳಿಸುತ್ತದೆ. ಹೂಡಿಕೆಗಳನ್ನು ಆಕರ್ಷಕವಾಗಿಸಲಿದೆ. ಕಳೆದ 11 ವರ್ಷಗಳಲ್ಲಿ ತಮ್ಮ ಸರ್ಕಾರದ ಅಡಿಯಲ್ಲಿ ಸುಮಾರು 25 ಕೋಟಿ ಜನರನ್ನು ಬಡತನದಿಂದ ಹೊರತರಲಾಗಿದೆ ಎಂದರು.

ದೇಶದ ಜನರಿಗೆ ಉಳಿತಾಯ ಹಬ್ಬ: ಮೋದಿ

ಸೆಪ್ಟೆಂಬರ್ 22ರಿಂದ ಜಾರಿಗೆ ಬರಲಿರುವ ಹೊಸ ಜಿಎಸ್​ಟಿ ತೆರಿಗೆ ವ್ಯವಸ್ಥೆಯು ದೇಶದ ಜನರಿಗೆ ಸಂತೋಷ ತರಲಿದೆ. ಒಂದು ರಾಷ್ಟ್ರ ಒಂದು ತೆರಿಗೆ ಆಶಯವು ಜಿಎಸ್​ಟಿಯಿಂದ ಸಾಕಾರಗೊಂಡಿದೆ. ಪ್ರತೀ ಕುಟುಂಬಕ್ಕೂ ಜಿಎಸ್​ಟಿ ಸುಧಾರಣೆ ಒಳಿತು ಮಾಡಲಿದೆ. ಭಾರತದ ಪ್ರಗತಿಯನ್ನು ಹೆಚ್ಚಿಸಲಿದೆ ಎಂದು ನರೇಂದ್ರ ಮೋದಿ ಹೇಳಿದರು.

ಆದಾಯ ತೆರಿಗೆಯನ್ನು ಕಡಿಮೆ ಮಾಡಲಾಗಿದೆ. ಜಿಎಸ್​ಟಿಯಿಂದ ಸಾಕಷ್ಟು ತೆರಿಗೆ ಕಡಿಮೆ ಆಗಿದೆ. ಇದರಿಂದ ಜನರಿಗೆ ಸಾಕಷ್ಟು ಹಣ ಉಳಿತಾಯವಾಗಲಿದೆ. ನಾಳೆಯಿಂದ (ಸೆ. 22) ದೇಶದ ಜನರಿಗೆ ಉಳಿತಾಯದ ಉತ್ಸವವಾಗಲಿದೆ. ದೇಶದ ಜನರಿಗೆ ಜಿಎಸ್​ಟಿ ಮತ್ತು ಆದಾಯ ತೆರಿಗೆ ಇಳಿಕೆಯಿಂದ ಒಂದು ವರ್ಷದಲ್ಲಿ 2.5 ಲಕ್ಷ ಕೋಟಿ ರೂ ಉಳಿತಾಯವಾಗಲಿದೆ ಎಂದು ಪ್ರಧಾನಿಗಳು ಅಭಿಪ್ರಾಯಪಟ್ಟರು.

Previous Post

Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

Next Post

ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

Next Post
ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.