
ಪ್ರಶ್ನೆಗೆ ಉತ್ತರಿಸದ ಸಿಎಂ: ಬೆಳ್ಳಾರೆಯಲ್ಲಿ ನಿನ್ನೆ ಕೊಲೆಯಾದ ಪ್ರವೀಣ್ ನೆಟ್ಟಾರು ಮನೆಗೆ ಹೋಗುತ್ತಿರುವ ಮುಖ್ಯಮಂತ್ರಿಗಳಿಗೆ ಅದೇ ಜಾಗದಲ್ಲಿ ಇತ್ತೀಚಿಗೆ ಹತ್ಯೆಯಾದ ಮಸೂದ್ ಮನೆಗೆ ಭೇಟಿ ನೀಡುವಿರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸದೇ ತೆರಳಿದರು. ಪ್ರವೀಣ್ ನೆಟ್ಟಾರು ಹತ್ಯೆಗೆ ಕೆಲ ದಿನಗಳ ಮುಂಚೆ ಅದೇ ಪರಿಸರದಲ್ಲಿ ಮಸೂದ್ ಎಂಬ ಯುವಕನ ಹತ್ಯೆಯಾಗಿದ್ದು, ಎಂಟು ಮಂದಿಯನ್ನು ಬಂಧಿಸಲಾಗಿತ್ತು.
ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಮಾತನಾಡಿದ ಅವರು, ಹತ್ಯೆಯ ಘಟನೆಯ ಬಳಿಕ ಜಿಲ್ಲೆಯ ಅಧಿಕಾರಿಗಳ ಜೊತೆಗೆ ಸಂಪರ್ಕದಲ್ಲಿದ್ದೇನೆ. ರಾಜ್ಯದ ಡಿಜಿ ಮುಖಾಂತರ ಕೇರಳ ಡಿಜಿ ಜೊತೆಗೆ ಸಂಪರ್ಕದಲ್ಲಿದ್ದಾರೆ.ಎಂದರು
