
ಯಾದಗಿರಿ: ಟ್ಯಾಂಕರ್ ಹಾಗೂ ಕಾರು ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, 6 ಜನ ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಗುರುಮಠಕಲ್ ಬಳಿ ನಡೆದಿದೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದ ಒಂದೇ ಕುಟುಂಬದ 1 ವರ್ಷದ ಹೆಣ್ಣುಮಗು ಸೇರಿ ಒಟ್ಟು 6 ಜನ ಮೃತಪಟ್ಟಿದ್ದಾರೆ. ಒಂದೇ ಕಾರ್ನಲ್ಲಿ ಒಟ್ಟು ಏಳು ಜನ ಪ್ರಯಾಣಿಸುತ್ತಿದ್ದು, ಮೂರು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಸ್ಪತ್ರೆಗೆ ಸಾಗಿಸೊ ಮಾರ್ಗ ಮಧ್ಯೆ ನಾಲ್ವರು ಮೃತಪಟ್ಟಿದ್ದಾರೆ. ಮೃತರ ಪೈಕಿ ಬಾಲಕಿ ಸೇರಿ ಮೂವರು ಮಹಿಳೆಯರು, ಮೂವರು ಪುರುಷರು ಸಾವನ್ನಪ್ಪಿದ್ದಾರೆ. ತೆಲಂಗಾಣದ ಕೊಡಂಗಲ್ಗೆ ಜವಳ ಕಾರ್ಯಕ್ಕೆ ಹೋಗಿದ್ದು, ಹಟ್ಟಿಗೆ ವಾಪಸಾಗುವಾಗ ಭೀಕರ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಗುರುಮಠಕಲ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಮೃತ ಪಟ್ಟವರ ವಿವರ
ಮಹ್ಮದ್ ವಾಜೀದ್ ಹುಸೇನ್ (39),
ಮಹ್ಮದ್ ಮಜರ್ ಹುಸೇನ್ (79),
ನೂರ್ ಜಹಾನ್ ಬೇಗಂ (70),
ಹೀನಾ ಬೇಗಂ (30),
ಇಮ್ರಾನ್ (22),
ಮಗು ಉಮೇಜಾ (ಆರು ತಿಂಗಳು),
ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಮಹ್ಮದ್ ಫಾಜೀಲ್ ಹುಸೇನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
