

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆ ಪೊಲೀಸ್ ಇಲಾಖೆಯಲ್ಲಿ ಶ್ಲಾಘನೀಯ ಸೇವೆ ಸಲ್ಲಿಸಿದ ಕರ್ನಾಟಕದ 18 ಮಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿ ರಾಷ್ಟ್ರಪತಿ ಪದಕ ಗೌರವಕ್ಕೆ ಭಾಜನರಾಗಿದ್ದಾರೆ.

ಸ್ವಾತಂತ್ರ್ಯೋತ್ಸವ ದಿನಾಚರಣೆಯಂದು ದೇಶದ ಒಟ್ಟು 347 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ಶೌರ್ಯ ಪ್ರಶಸ್ತಿ, 87 ಮಂದಿಗೆ ರಾಷ್ಟ್ರಪತಿ ಪದಕ ಹಾಗೂ ಒಟ್ಟು 648 ಮಂದಿಯ ಸೇವೆಗೆ ಪ್ರಶಂಸನೀಯ ಪ್ರಶಸ್ತಿ ನೀಡಲಾಗುತ್ತಿದೆ.
ರಾಷ್ಟ್ರಪತಿ ಪದಕ ಪುರಸ್ಕಾರಕ್ಕೆ ಆಯ್ಕೆಯಾದ 87ಮಂದಿ ಪೈಕಿ 18 ಮಂದಿ ಕರ್ನಾಟಕದವರಾಗಿದ್ದು, ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ಪ್ರತಾಪ್ ಸಿಂಗ್ ತುಕಾರಾಮ್ ಅವರಿಗೆ ರಾಷ್ಟ್ರಪತಿ ಪದಕ ಗೌರವ ದೊರೆತಿದೆ.

