
ಬಿಲ್ಕಿಸ್ ಬಾನೊ ಅತ್ಯಾಚಾರ ಪ್ರಕರಣದಲ್ಲಿ ಗುಜರಾತ್ ಸರ್ಕಾರದ ಕ್ಷಮಾದಾನ ನೀತಿಯಡಿ ಜೈಲಿನಿಂದ ಬಿಡುಗಡೆಗೊಂಡ 11 ಅಪರಾಧಿಗಳನ್ನು ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆಯಾದ ವಿಎಚ್‌ಪಿ ಕಚೇರಿಯಲ್ಲಿ ಹೂಮಾಲೆ ಹಾಕಿ ಸ್ವಾಗತಿಸಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.
2002 ರ ಗೋಧ್ರಾ ನಂತರದ ನಡೆದ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾದ ಎಲ್ಲಾ 11 ಅಪರಾಧಿಗಳು ಗುಜರಾತ್ ಸರ್ಕಾರವು ತನ್ನ ಕ್ಷಮಾದಾನ ನೀತಿಯ ಅಡಿಯಲ್ಲಿ ಬಿಡುಗಡೆಗೆ ಅವಕಾಶ ನೀಡಿದ ನಂತರ, ಅಪರಾಧಿಗಳು ಗೋಧ್ರಾ ಉಪ ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ.

11 ಆರೋಪಿಗಳಾದ ರಾಧೇಶ್ಯಾಮ್ ಶಾ, ಜಸ್ವಂತ್ ಚತುರ್ಭಾಯಿ ನಾಯ್, ಕೇಶುಭಾಯಿ ವಡಾನಿಯಾ, ಬಕಾಭಾಯಿ ವಡಾನಿಯಾ, ರಾಜಿಭಾಯಿ ಸೋನಿ, ರಮೇಶ್‌ಭಾಯ್ ಚೌಹಾಣ್, ಶೈಲೇಶ್‌ಭಾಯ್ ಭಟ್, ಬಿಪಿನ್ ಚಂದ್ರ ಜೋಶಿ, ಗೋವಿಂದಭಾಯ್ ನಾಯ್, ಮಿತೇಶ್ ಭಟ್, ಪ್ರದೀಪ್ ಮೋಧಿಯಾ ಸೋಮವಾರ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.
ಜನವರಿ 21, 2008 ರಂದು ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು ಬಿಲ್ಕಿಸ್ ಬಾನೊ ಅವರ ಸಾಮೂಹಿಕ ಅತ್ಯಾಚಾರ ಮತ್ತು ಅವರ ಕುಟುಂಬದ ಏಳು ಸದಸ್ಯರ ಹತ್ಯೆಯ ಆರೋಪದ ಮೇಲೆ ಹನ್ನೊಂದು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿಯಿತು
