Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

DOLO-650ಯನ್ನು ವೈದ್ಯರು ರೋಗಿಗಳಿಗೆ ಶಿಫಾರಸು ಮಾಡುವುದಕ್ಕಾಗಿ ₹1,000 ಕೋಟಿ ವ್ಯಯಿಸಿದ ಡೊಲೊ ಕಂಪನಿ:ಮೆಡಿಕಲ್ ರೆಪ್ರೆಸೆಂಟೇಟಿವ್ಸ್ ಸಂಸ್ಥೆ ಗುರುವಾರ ಸುಪ್ರೀಂಕೋರ್ಟ್‌ಗೆ (Supreme Court) ತಿಳಿಸಿದೆ.

editor tv by editor tv
August 18, 2022
in ರಾಷ್ಟ್ರೀಯ, ಸುದ್ದಿ
0
DOLO-650ಯನ್ನು ವೈದ್ಯರು ರೋಗಿಗಳಿಗೆ ಶಿಫಾರಸು ಮಾಡುವುದಕ್ಕಾಗಿ ₹1,000 ಕೋಟಿ ವ್ಯಯಿಸಿದ ಡೊಲೊ ಕಂಪನಿ:ಮೆಡಿಕಲ್ ರೆಪ್ರೆಸೆಂಟೇಟಿವ್ಸ್ ಸಂಸ್ಥೆ ಗುರುವಾರ ಸುಪ್ರೀಂಕೋರ್ಟ್‌ಗೆ (Supreme Court) ತಿಳಿಸಿದೆ.
1.9k
VIEWS
Share on FacebookShare on TwitterShare on Whatsapp

ದೆಹಲಿ: ಡೊಲೊ-650 (DOLO-650) ಟ್ಯಾಬ್ಲೆಟ್ ತಯಾರಕರು ಟ್ಯಾಬ್ಲೆಟ್ ಅನ್ನು ಶಿಫಾರಸು ಮಾಡಲು ವೈದ್ಯರಿಗೆ ₹ 1,000 ಕೋಟಿ ಮೌಲ್ಯದ 50 ಉಚಿತ ಕೊಡುಗೆ ವಿತರಿಸಿದ್ದಾರೆ ಎಂದು ನೇರ ತೆರಿಗೆಗಳ ಕೇಂದ್ರ ಮಂಡಳಿಯು ಆರೋಪಿಸಿರುವುದಾಗಿ ಮೆಡಿಕಲ್ ರೆಪ್ರೆಸೆಂಟೇಟಿವ್ಸ್ ಸಂಸ್ಥೆ ಗುರುವಾರ ಸುಪ್ರೀಂಕೋರ್ಟ್‌ಗೆ (Supreme Court) ತಿಳಿಸಿದೆ. ಫೆಡರೇಶನ್ ಆಫ್ ಮೆಡಿಕಲ್ ಮತ್ತು ಸೇಲ್ಸ್ ರೆಪ್ರೆಸೆಂಟೇಟಿವ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಸಂಜಯ್ ಪಾರಿಖ್, ರೋಗಿಗಳಿಗೆ ಜ್ವರ ನಿವಾರಕ ಔಷಧವಾಗಿ ಈ ಟ್ಯಾಬ್ಲೆಟ್  ಶಿಫಾರಸು ಮಾಡಲು DOLO ತಯಾರಕರು 1,000 ಕೋಟಿ ಮೌಲ್ಯದ ಉಚಿತ ಕೊಡುಗೆಗಳನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ. ವನ್ಯಾಯಮೂರ್ತಿ ಎಎಸ್ ಬೋಪಣ್ಣ ಜತೆ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ಕೊವಿಡ್ ಸಮಯದಲ್ಲಿ ನನಗೂ ಡೊಲೊ ಬಳಸುವಂತೆ ನಿರ್ದೇಶಿಸಲಾಗಿತ್ತು. ಇದು ತುಂಬಾ ಗಂಭೀರ ವಿಷಯ ಎಂದಿದ್ದಾರೆ. ಇದೇನೂ ಹಿತಕರವಾದ ಸಂಗತಿಯಲ್ಲ. ನನಗೆ ಕೊವಿಡ್ ಬಂದಾಗ ಇದನ್ನೇ ನೀಡಲಾಗಿತ್ತು. ಇದು ಗಂಭೀರ ಪ್ರಕರಣ ಮತ್ತು ಸಂಗತಿ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ. ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆಎಂ ನಟರಾಜ್ ಅವರಲ್ಲಿ 10 ದಿನಗಳೊಳಗ ಪ್ರತಿಕ್ರಿಯಿಸುವಂತೆ ನ್ಯಾಯಾಲಯ ಹೇಳಿದೆ.

ವೈದ್ಯರು ತಮ್ಮ ಔಷಧಿಗಳನ್ನು ಶಿಫಾರಸು ಮಾಡಲು ಉಚಿತ ಕೊಡುಗೆ ನೀಡುತ್ತಿರುವ ಔಷಧೀಯ ಕಂಪನಿಗಳನ್ನು ಹೊಣೆಗಾರರನ್ನಾಗಿ ಮಾಡಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. ಫೆಡರೇಷನ್ ಆಫ್ ಮೆಡಿಕಲ್ ಆಂಡ್ ಸೇಲ್ಸ್ ರೆಪ್ರಸೆಂಟೇಟಿವ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಸಲ್ಲಿಸಿದ ಮನವಿಯಲ್ಲಿ ಯೂನಿಫಾರ್ಮ್ ಕೋಡ್ ಆಫ್ ಫಾರ್ಮಾಸ್ಯುಟಿಕಲ್ ಮಾರ್ಕೆಟಿಂಗ್ ಪ್ರಾಕ್ಟೀಸಸ್ (UCPMP) ಗೆ ಶಾಸನಬದ್ಧ ಬೆಂಬಲವನ್ನು ನೀಡಲು ನಿರ್ದೇಶನವನ್ನು ಕೋರಲಾಗಿದೆ.

ಕೊವಿಡ್ ಸಾಂಕ್ರಾಮಿಕದ ಸಮಯದಲ್ಲಿ ರೆಮ್ಡಿಸಿವಿರ್ ಔಷಧಿಯ ಅತಿಯಾದ ಮಾರಾಟ ಮತ್ತು ವೈದ್ಯರು ಶಿಫಾರಸು ಮಾಡಿದ್ದನ್ನು ಉದಾಹರಣೆಯಾಗಿ ಅರ್ಜಿದಾರರು ಸೂಚಿಸಿದ್ದಾರೆ. ನ್ಯಾಯವಾದಿ ಅಪರ್ಣಾ ಭಟ್ ಮೂಲಕ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ, ಆರೋಗ್ಯದ ಹಕ್ಕು ಜೀವನದ ಹಕ್ಕಿನ ಒಂದು ಭಾಗವಾಗಿದೆ. ನೈತಿಕ ಮಾರ್ಕೆಟಿಂಗ್ ವಿಧಾನ ಅನುಸರಿಸುವ ಔಷಧೀಯ ಕಂಪನಿಗಳು ಅದಕ್ಕೆ ಅತ್ಯಗತ್ಯ ಎಂದು ಹೇಳಿದ್ದಾರೆ.

ಯುಸಿಪಿಎಂಪಿಗೆ ಯಾವುದೇ ಶಾಸನಬದ್ಧ ಆಧಾರದ ಅನುಪಸ್ಥಿತಿಯಲ್ಲಿ ಅಂತಹ  ವಿಧಾನಗಳನ್ನು  ನಿಷೇಧಿಸುವ ಯಾವುದೇ ಕಾನೂನು ಅಥವಾ ನಿಯಂತ್ರಣವು ಪ್ರಸ್ತುತ ಇಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಭ್ರಷ್ಟಾಚಾರದ ವಿರುದ್ಧದ ಯುಎನ್ ಕನ್ವೆನ್ಷನ್‌ಗೆ ಸಹಿ ಹಾಕಿದ್ದರೂ ಭಾರತದಲ್ಲಿ ಔಷಧೀಯ ಮಾರುಕಟ್ಟೆ ಅಭ್ಯಾಸಗಳಲ್ಲಿನ ಭ್ರಷ್ಟಾಚಾರವನ್ನು ಅನಿಯಂತ್ರಿತವಾಗಿದೆ ಎಂದು ಅರ್ಜಿದಾರರು ಹೇಳಿದ್ದಾರೆ.

ಉಡುಗೊರೆಗಳು, ಮನರಂಜನೆ, ಆತಿಥ್ಯ ಮತ್ತು ಇತರ ಅನುಕೂಲಗಳಿಗೆ ಬದಲಾಗಿ ವೈದ್ಯರು ಹೆಚ್ಚು ಶಿಫಾರಸು ಮಾಡಿದ  ಬ್ರಾಂಡೆಡ್ ಔಷಧಿಗಳಿಗೆ ಗ್ರಾಹಕರು ಹೆಚ್ಚಿನ ಹಣವನ್ನು ಪಾವತಿಸುವ ಪರಿಸ್ಥಿತಿಗೆ ಇದು ಕಾರಣವಾಗುತ್ತದೆ. ಇಂಥಾ ಔಷಧಗಳು ಮತ್ತು ವಿಷ ಪದಾರ್ಥಗಳು ಜನರ ಜೀವ ಮತ್ತು ಆರೋಗ್ಯಕ್ಕೆ ಅಪಾಯವನ್ನುಂಟುಮಾಡುತ್ತದೆ. ಆದರೆ ಆರೋಪ ಮುಕ್ತವಾಗಿ ಹೊರನಡೆಯುವ ಫಾರ್ಮಾಸ್ಯುಟಿಕಲ್ ಕಂಪನಿಗಳ ದುರ್ವರ್ತನೆಗಾಗಿ ವೈದ್ಯರಿಗೆ ಕೂಡಾ ದಂಡ ವಿಧಿಸಬಹುದು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಅರ್ಜಿದಾರರು ಯುಸಿಪಿಎಂಪಿ ಶಾಸನಬದ್ಧ ಆಧಾರವನ್ನು ನೀಡಲು ಸರ್ಕಾರಕ್ಕೆ ನಿರ್ದೇಶನಗಳನ್ನು ಕೋರಿದ್ದಾರೆ. ಅದೇ ವೇಳೆ ಸುಪ್ರೀಂಕೋರ್ಟ್ ಅಂತಹ ಮಾರ್ಗಸೂಚಿಗಳನ್ನು ನೀಡುವಂತೆ ಅಥವಾ ಯುಸಿಪಿಎಂಪಿ ಬದ್ಧತೆಯನ್ನು ತನಗೆ ಸರಿಹೊಂದುವಂತೆ ಮಾಡುವಂತೆ ಕೋರಲಾಗಿದೆ. ಕೊನೆಯ ವಿಚಾರಣೆಯ ನಂತರ ಸರ್ಕಾರ UCPMP ಕರಡು ಬಿಡುಗಡೆ ಮಾಡಿದ್ದು ಪ್ರತಿಕ್ರಿಯೆಗಳನ್ನು ಆಹ್ವಾನಿಸಿದೆ.

Previous Post

ಶಾಲೆಗಳಲ್ಲಿ ಗಣೇಶ ಹಬ್ಬ Vs ನಮಾಜ್ ಜಟಾಪಟಿ – ಶಿಕ್ಷಣ ಇಲಾಖೆ ಆದೇಶಕ್ಕೆ ವಕ್ಫ್ ಬೋರ್ಡ್ ಆಕ್ಷೇಪ – ಗಣೇಶೋತ್ಸವ ರೀತಿ ಮುಸ್ಲಿಂರ ಹಬ್ಬಕ್ಕೂ ಅವಕಾಶ ಕೊಡಿ

Next Post

ನಮ್ಗೆ ಮೊಟ್ಟೆ ಎಸೆಯೋಕೆ ಬರಲ್ವಾ, ನಾವು ಶುರು ಮಾಡಿದ್ರೆ ಸಿಎಂ ಎಲ್ಲೂ ಓಡಾಡೋಕೆ ಆಗಲ್ಲ: ಸಿದ್ದರಾಮಯ್ಯ

Next Post
ನಮ್ಗೆ ಮೊಟ್ಟೆ ಎಸೆಯೋಕೆ ಬರಲ್ವಾ, ನಾವು ಶುರು ಮಾಡಿದ್ರೆ ಸಿಎಂ ಎಲ್ಲೂ ಓಡಾಡೋಕೆ ಆಗಲ್ಲ: ಸಿದ್ದರಾಮಯ್ಯ

ನಮ್ಗೆ ಮೊಟ್ಟೆ ಎಸೆಯೋಕೆ ಬರಲ್ವಾ, ನಾವು ಶುರು ಮಾಡಿದ್ರೆ ಸಿಎಂ ಎಲ್ಲೂ ಓಡಾಡೋಕೆ ಆಗಲ್ಲ: ಸಿದ್ದರಾಮಯ್ಯ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.