

ನವದೆಹಲಿ: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಗೆ ಅವಕಾಶ ನೀಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ವಕ್ಫ್ ಬೋರ್ಡ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಪ್ರಕರಣದ ತುರ್ತು ವಿಚಾರಣೆ ನಡೆಸಿ, ಹೈಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ಮನವಿ ಮಾಡಲಾಗಿದೆ.

ಇಂದು ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ಪೀಠದ ಮುಂದೆ ಅರ್ಜಿ ಸಲ್ಲಿಸಿರುವ ಬಗ್ಗೆ ಹಿರಿಯ ವಕೀಲ ಕಪಿಲ್ ಸಿಬಲ್ ಪ್ರಸ್ತಾಪಿಸಿದರು. ಈ ವೇಳೆ ನ್ಯಾಯಮೂರ್ತಿ ಯು.ಯು ಲಲಿತ್ ನಾಳೆ ಬದಲಿ ಪೀಠದಲ್ಲಿ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ರಾಜ್ಯ ಸರ್ಕಾರಕ್ಕೆ ಶುಕ್ರವಾರ ಹೈಕೋರ್ಟ್ ಅನುಮತಿ ನೀಡಿತ್ತು. ಆಗಸ್ಟ್ 31ರಿಂದ ಒಂದು ದಿನದ ಅವಧಿಗೆ ಅನುಮತಿ ನೀಡಿ ವಿಭಾಗೀಯ ಪೀಠ ತೀರ್ಪು ನೀಡಿತ್ತು. ಈ ಆದೇಶವನ್ನು ಪ್ರಶ್ನೆ ಮಾಡಿ ಈಗ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ