


ಕೊಲಂಬೊ : ನನ್ನ ಆರೋಗ್ಯದಲ್ಲಿ ಏರುಪೇರಾಗಿದೆ ನನಗೆ ತುರ್ತು ವೈದ್ಯಕೀಯ ನೆರವಿನ ಅವಶ್ಯಕತೆ ಇದೆ ಹೀಗೆಂದು ಸ್ವಯಂ ಘೋಷಿತ ದೇವಮಾನವ ಹಾಗೂ ಅತ್ಯಾಚಾರ ಆರೋಪ ಹೊತ್ತಿರುವ ನಿತ್ಯಾನಂದ ಶ್ರೀಲಂಕಾ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.
ದೇಶವನ್ನೇ ತೊರೆದು ಈಕ್ವೆಡಾರ್ ದ್ವೀಪದಲ್ಲಿ ನೆಲೆಸಿರುವ ಬಿಡದಿ ಧ್ಯಾನಪೀಠದ ಸ್ವಾಮಿ ನಿತ್ಯಾನಂದನ ಆರೋಗ್ಯ ಕ್ಷೀಣಿಸುತ್ತಿದೆಯಂತೆ ಅಲ್ಲದೆ ಆ ದ್ವೀಪ ರಾಷ್ಟ್ರದಲ್ಲಿ ವೈದ್ಯಕೀಯ ಸೌಲಭ್ಯಗಳ ಕೊರತೆಯು ಇದೆಯಂತೆ ಹಾಗಾಗಿ ನನ್ನ ಜೀವಕ್ಕೆ ಅಪಾಯವಿದೆ, ತುರ್ತು ಚಿಕಿತ್ಸೆಗಾಗಿ ಕೂಡಲೇ ವೈದ್ಯಕೀಯ ಅಗತ್ಯತೆಗಳನ್ನು ಪೂರೈಸುವಂತೆ ಲಂಕಾ ಅಧ್ಯಕ್ಷ ರನಿಲ್ ವಿಕ್ರಮ ಸಿಂಘೆ ಅವರಿಗೆ ಪತ್ರ ಬರೆದಿದ್ದಾರೆ.
ವೈದ್ಯಕೀಯ ಸೌಲಭ್ಯಗಳ ಕೊರತೆಯ ಕುರಿತು ಕಳೆದ ಆಗಸ್ಟ್ 7ರಂದೇ ನಿತ್ಯಾನಂದ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ ಅಲ್ಲದೆ ಸದ್ಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಲಂಕಾ ಮೊರೆ ಹೋಗಿದ್ದಾರೆ.