

ವಿಟ್ಲ: ಕಾರಿನಲ್ಲಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ವಿಟ್ಲದ ಪುಣಚ ಗ್ರಾಮದ ಕೊಲ್ಲಪದವು ಎಂಬಲ್ಲಿ ಶನಿವಾರ ನಡೆದಿದೆ.
ನಾರಾಯಣ ನಾಯ್ಕ ಮತ್ತು ಸಂತೋಷ ಕುಮಾರ್ ಬಂಧಿತ ಆರೋಪಿಗಳು. ಬಂಧಿತರಿಂದ ಓಮ್ನಿ ಕಾರು ಮತ್ತು ಜಾನುವಾರುಗಳನ್ನು ಸೇರಿ ಅಂದಾಜು ಒಂದುವರೆ ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೊಲ್ಲಪದವಿನ ಸಾರ್ವಜನಿಕ ಬಸ್ ನಿಲ್ದಾಣದ ಬಳಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಈ ಕೃತ್ಯ ಬೆಳಕಿಗೆ ಬಂದಿದೆ.