

ಜಾರ್ಖಂಡ್ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಮಾಡಿದ್ದಾರೆ. ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೂ ಮುನ್ನ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಹೇಮಂತ್ ಸೊರೇನ್, ಬಿಜೆಪಿಯು ದೇಶದಲ್ಲಿ ಅಂತರ್ಯುದ್ಧದ ವಾತಾವರಣ ನಿರ್ಮಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಅಷ್ಟೇ ಅಲ್ಲ, ಚುನಾವಣೆಗಳನ್ನು ಗೆಲ್ಲಲು ಬಿಜೆಪಿ ದಂಗೆ ಎಬ್ಬಿಸುತ್ತಿದೆ ಎಂದು ಆಪಾದಿಸಿದ್ದಾರೆ.
ನಮ್ಮ ಸರ್ಕಾರಕ್ಕೆ ಬಿಜೆಪಿ ಹಲವು ಅಡ್ಡಿ ಆತಂಕಗಳನ್ನು ತಂದೊಡ್ಡುತ್ತಿದೆ ಎಂದು ಆರೋಪ ಮಾಡಿರುವ ಹೇಮಂತ್ ಸೊರೇನ್, ನಮ್ಮ ಮೂವರು ಶಾಸಕರು ಪಶ್ಚಿಮ ಬಂಗಾಳದಲ್ಲಿ ಇದ್ಧಾರೆ. ಅವರನ್ನು ಅಕ್ರಮವಾಗಿ ಬಂಧಿಸಿ ಇಡಲಾಗಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವ ಸರ್ಮ ಅವರು ನಮ್ಮ ಶಾಸಕರ ಕುದುರೆ ವ್ಯಾಪಾರ ಮಾಡುವ ಹೊಣೆ ಹೊತ್ತಿದ್ದಾರೆ. ಪೊಲೀಸರಿಗೂ ಅವರು ಸಹಕಾರ ನೀಡಲಿಲ್ಲ. ನಾವು ಈ ಅಕ್ರಮ ಬಂಧನ ಪ್ರಕರಣದ ತನಿಖೆಯನ್ನೂ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಹೇಮಂತ್ ಸೊರೇನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.