

ಏಷ್ಯಾಕಪ್ನಲ್ಲಿ ಭಾರತ ತಂಡದ ಪ್ರಶಸ್ತಿ ನಿರೀಕ್ಷೆ ಕೊನೆಯ ಪಂದ್ಯಕ್ಕೂ ಮುನ್ನವೇ ಕೊನೆಗೊಂಡಿತ್ತು. ಅತಿ ಹೆಚ್ಚು 7 ಬಾರಿ ಏಷ್ಯಾಕಪ್ ಪ್ರಶಸ್ತಿ ಗೆದ್ದು ಹಾಲಿ ಚಾಂಪಿಯನ್ ಆಗಿರುವ ಭಾರತ ತಂಡ ಸೂಪರ್ ಫೋರ್ ಹಂತದಲ್ಲಿ ಸತತ ಎರಡು ಸೋಲುಗಳ ಭಾರವನ್ನು ಹೊರಬೇಕಾಗಿದೆ. ಟೀಂ ಇಂಡಿಯಾ ಟೂರ್ನಿಯ ಫೈನಲ್ ತಲುಪುವ ಅವಕಾಶ ಕಳೆದುಕೊಂಡು ಪ್ರಶಸ್ತಿ ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ. ಪಂದ್ಯದಲ್ಲಿ ಉಳಿಯಲು ಟೀಮ್ ಇಂಡಿಯಾಗೆ ಅಫ್ಘಾನಿಸ್ತಾನದ ಗೆಲುವು ಅಗತ್ಯವಾಗಿತ್ತು ಆದರೆ ಪಾಕಿಸ್ತಾನ ಇದಕ್ಕೆ ಅವಕಾಶ ನೀಡಲಿಲ್ಲ.
