

ಶಿವಮೊಗ್ಗ: ನಗರದಲ್ಲಿ ನಡೆದ ಹಿಂದೂ ಮಹಾಗಣಪತಿ ಶೋಭಾಯಾತ್ರೆಯ ವೇಳೆ ರಾಷ್ಟ್ರೀಯ ಲಾಂಛನಕ್ಕೆ (National Emblem) ಅಪಮಾನ ನಡೆದಿದೆ.
ರಾಷ್ಟ್ರೀಯ ಲಾಂಚನದ ಮೇಲೆ ಹಿಂದೂ ಸಂಘಟನೆಗಳು ಕೇಸರಿ ಧ್ವಜ (Saffron Flag) ಹಾರಿಸಿವೆ. ನಗರದ ಅಶೋಕ ರಸ್ತೆಯಲ್ಲಿರುವ ಅಶೋಕ ಸ್ಥಂಭವನ್ನೇ ಕೇಸರಿಮಯ ಮಾಡಲಾಗಿದೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಕೇಸರಿ ಧ್ವಜ ತೆರವು ಮಾಡಿದ್ದಾರೆ. ಈ ಮಧ್ಯೆ, ಬಿಗಿಭದ್ರತೆ ನಡುವೆ ಶೋಭಾ ಯಾತ್ರೆ ನಡೆಯಿತು.

ಸಾವಿರಾರು ಮಂದಿ ಶೂಭಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಮಧ್ಯರಾತ್ರಿ 12 ಗಂಟೆಗೆ ತುಂಗಾ ನದಿಯಲ್ಲಿ ಗಣೇಶ ವಿಸರ್ಜನೆ ನಡೆಯಲಿದೆ. ಅತ್ತ ರಾಯಚೂರಿನ ದಡೇಸುಗೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಘರ್ಷಣೆ ನಡೆದಿದೆ. ಮದ್ಯದ ನಶೆಯಲ್ಲಿ ಜಗಳ ಆಗಿ, ಯುವಕರು ಕೈಕೈ ಮಿಲಾಯಿಸಿಕೊಂಡಿದ್ದಾರೆ. ಘಟನೆಯಲ್ಲಿ ಮೂರ್ನಾಲ್ಕು ಜನ ಗಾಯಗೊಂಡಿದ್ದಾರೆ.