

ಮುಂಬೈ: ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಭಾನುವಾರ ಸುಮಾರು 5.38 ಕೋಟಿ ಮೌಲ್ಯದ 12 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಸುಡಾನ್ ಪ್ರಯಾಣಿಕರೊಬ್ಬರು ಧರಿಸಿದ್ದ ವಿಶೇಷ ವಿನ್ಯಾಸದ ಬೆಲ್ಟ್ನಿಂದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಕಸ್ಟಮ್ಸ್ ಅಧಿಕಾರಿಗಳ ಪ್ರಕಾರ, ಆರೋಪಿಗಳು ತಪ್ಪಿಸಿಕೊಳ್ಳಲು ವಿಮಾನ ನಿಲ್ದಾಣದಲ್ಲಿ ಕೆಲವು ಪ್ರಯಾಣಿಕರಿಂದ ಗಲಾಟೆಯನ್ನು ಸೃಷ್ಟಿಸಿದರು. ಈ ವೇಳೆ ಅಧಿಕಾರಿಗಳು ಗುಂಪನ್ನು ಚದುರಿಸಿ ಒಟ್ಟು 6 ಪ್ರಯಾಣಿಕರನ್ನು ವಶಕ್ಕೆ ಪಡೆದಿದ್ದಾರೆ. ಹಾಗೂ ಈ 6 ಮಂದಿಯನ್ನು ಗಡಿಪಾರು ಮಾಡಲಾಗುತ್ತಿದೆ ಎಂದು ಕಸ್ಟಮ್ಸ್ ಅಧಿಕಾರಿ ತಿಳಿಸಿದ್ದಾರೆ.

ಇನ್ನು ಇದಕ್ಕೂ ಮುನ್ನ ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 13 ಕೋಟಿ ಮೌಲ್ಯದ 1.3 ಕೆಜಿ ಕೊಕೇನ್ ವಶಪಡಿಸಿಕೊಂಡಿದ್ದರು. ಪೊಲೀಸ್ ಅಧಿಕಾರಿಗಳು ಘಾನಾದಿಂದ ಪ್ರಯಾಣಿಕನನ್ನು ಬಂಧಿಸಿದ್ದಾರೆ. ಆಗಸ್ಟ್ 28 ರಂದು ಆತನನ್ನು ಬಂಧಿಸಲಾಗಿತ್ತು.
ಮೂಲಗಳ ಪ್ರಕಾರ, ಆರೋಪಿಯು ತನ್ನ ಹೊಟ್ಟೆಯಲ್ಲಿ ಕೊಕೇನ್ ಡ್ರಗ್ಸ್ ಅನ್ನು ಬಚ್ಚಿಟ್ಟಿಕೊಂಡಿದ್ದ. ಮಾಹಿತಿ ತಿಳಿದ ಬಳಿಕ ಅಧಿಕಾರಿಗಳು ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿ ಆತನ ಹೊಟ್ಟೆಯಲ್ಲಿದ್ದ 87 ಕ್ಯಾಪ್ಸೂಲ್ಗಳನ್ನು ವಶಪಡಿಸಿಕೊಂಡಿದ್ದರು. ಮುಂಬೈ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.