Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಅಮಾನತು ಮಾಡುವಂತಹ ದೊಡ್ಡ ತಪ್ಪು ಮಾಡಿಲ್ಲ’: ಗದಗ ಶಾಲಾ ಪ್ರಕರಣದ ಕುರಿತು ಶಿಕ್ಷಣ ತಜ್ಞ ಡಾ.ವಿ.ಪಿ. ನಿರಂಜನಾರಾಧ್ಯ

editor tv by editor tv
September 29, 2022
in ರಾಜ್ಯ, ಸುದ್ದಿ
0
ಅಮಾನತು ಮಾಡುವಂತಹ ದೊಡ್ಡ ತಪ್ಪು ಮಾಡಿಲ್ಲ’: ಗದಗ ಶಾಲಾ ಪ್ರಕರಣದ ಕುರಿತು ಶಿಕ್ಷಣ ತಜ್ಞ ಡಾ.ವಿ.ಪಿ. ನಿರಂಜನಾರಾಧ್ಯ
1.9k
VIEWS
Share on FacebookShare on TwitterShare on Whatsapp

ಕೃಪೆ :ನಾನು ಗೌರಿ

ಹೀಗೆ ಮಾಡುವುದಾದರೆ ಹೊರಗಿನ ಎಲ್ಲಾ ಸಂಸ್ಥೆಗಳನ್ನು ಸರ್ಕಾರಿ ಶಾಲೆಗಳಲ್ಲಿ ನಿಷೇಧ ಮಾಡಬೇಕಾಗುತ್ತದೆ ಎಂದು ಅವರು ಹೇಳಿದರು

ಪ್ರವಾದಿ ಮುಹಮ್ಮದ್ (ಸ. ಅ )ರವರ ಬಗ್ಗೆ ಪ್ರಬಂಧ ಸ್ಪರ್ಧೆ ಆಯೋಜಿಸಿದ್ಧ ಗದಗದ ನಾಗಾವಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರನ್ನು ಅಮಾನತು ಮಾಡಿರುವ ಶಿಕ್ಷಣ ಇಲಾಖೆಯ ನಿರ್ಧಾರವನ್ನು ಶಿಕ್ಷಣ ತಜ್ಞ ಡಾ.ವಿ.ಪಿ. ನಿರಂಜನಾರಾಧ್ಯ ಅವರು ವಿರೋಧಿಸಿದ್ದು, “ಅಮಾನತು ರೀತಿಯ ಕಠಿಣ ಶಿಕ್ಷೆ ನೀಡುವ ಅಗತ್ಯವಿರಲಿಲ್ಲ. ಶಿಕ್ಷಕರನ್ನು ಅಮಾನತ್ತಿನಲ್ಲಿ ಇಡುವಂತಹ ದೊಡ್ಡ ತಪ್ಪು ಅವರೇನು ಮಾಡಿಲ್ಲ” ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಶಿಕ್ಷಣ ತಜ್ಞ ಡಾ.ವಿ.ಪಿ. ನಿರಂಜನಾರಾಧ್ಯ,“ಸರ್ವ ಧರ್ಮ ಸಮನ್ವಯತೆ ಎಂಬಂತೆ ಮಕ್ಕಳು ಎಲ್ಲರ ಬಗ್ಗೆಯೂ ತಿಳಿದುಕೊಳ್ಳುವುದರಲ್ಲಿ ತಪ್ಪೇನಿಲ್ಲ. ಆದರೆ ಈಗ ಅದನ್ನು ವ್ಯಾಖ್ಯಾನಿಸುವ ರೀತಿಯಲ್ಲಿ ತಪ್ಪುಗಳಾಗುತ್ತಿವೆ. ಎಲ್ಲವನ್ನೂ ತಮ್ಮದೆ ದೃಷ್ಟಿಕೋನದಿಂದ ನೋಡುತ್ತಿರುವುದರಿಂದ ಎಲ್ಲವೂ ತಪ್ಪಾಗಿ ಕಾಣುತ್ತದೆ. ಶಿಕ್ಷಣದ ಎಲ್ಲವನ್ನೂ ಕೋಮುವಾದೀಕರಣ ಮಾಡಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಧರ್ಮವನ್ನು ಪ್ರಚಾರ ಮಾಡುವ ಯಾವುದೆ ಆಲೋಚನೆ ನನಗೆ ಇಲ್ಲ ಎಂದು ಮುಖ್ಯೋಪಾಧ್ಯಾಯರು ಈಗಾಗಲೆ ಸ್ಪಷ್ಟವಾಗಿ ಹೇಳಿದ್ದಾರೆ. ಒಂದು ಪುಸ್ತಕ ಕೊಟ್ಟ ಕೂಡಲೇ ಇಸ್ಲಾಂ ಪ್ರಚಾರ ಆಗುತ್ತದೆಯೆ?” ಎಂದು ಅವರು ಕೇಳಿದರು.

ಮುಂದಕ್ಕೆ ಶಾಲೆಯಲ್ಲಿ ಭಗವದ್ಗೀತೆ ಕೊಟ್ಟರೆ ಅದರ ಅರ್ಥ ಹಿಂದೂ ಧರ್ಮಕ್ಕೆ ಮಕ್ಕಳನ್ನು ಮತಾಂತರ ಮಾಡುತ್ತಿದ್ದೇವೆ ಎಂದೇ? ಲಕ್ಷಾಂತರ ವಿದ್ಯಾರ್ಥಿಗಳು ಕ್ರಿಶ್ಚಿಯನ್ ಕಾನ್ವೆಂಟ್‌ಗಳಲ್ಲಿ ಕಲಿಯುತ್ತಾ ಇದ್ದಾರೆ. ಅವರೆಲ್ಲರೂ ಮತಾಂತರವಾದರೆ?” ಎಂದು ಅವರು ಪ್ರಶ್ನಿಸಿದರು.

“ಇದು ಬಹಳ ವ್ಯವಸ್ಥಿತವಾಗಿ ಒಂದು ಧರ್ಮದ ಶಿಕ್ಷಕರನ್ನು ಗುರಿ ಮಾಡುತ್ತಿರುವ ತಂತ್ರ. ಅಲ್ಲದೆ ಈ ಪೊಲೀಸ್‌ಗಿರಿ ಬಹಳ ಅಪಾಯಕಾರಿಯಾಗಿದ್ದು, ಭಯದ ವಾತಾವರಣ ನಿರ್ಮಾಣ ಮಾಡುವ ಸ್ಥಿತಿ ಇದು. ಇದರ ಪರಿಣಾಮ ನಮ್ಮ ಮಕ್ಕಳು ಅನುಭವಿಸಬೇಕಾಗುತ್ತದೆ. ಶಿಕ್ಷಣದ ವಿಚಾರಗಳಲ್ಲಿ ಸರಿ ತಪ್ಪುಗಳನ್ನು ಶಾಲೆಗೆ ಬಿಟ್ಟು ಬಿಡಬೇಕು” ಎಂದು ಅವರು ಹೇಳಿದರು.

“ಅಕಸ್ಮಾತ್ ಶಿಕ್ಷಕ ಮಾಡಿದ್ದು ತಪ್ಪು ಎಂದಾದರೂ, ಅವರನ್ನು ಅಮಾನತು ರೀತಿ ಕಠಿಣ ಶಿಕ್ಷೆ ನೀಡುವ ಅಗತ್ಯವಿರಲಿಲ್ಲ. ಶಿಕ್ಷಕರನ್ನು ಅಮಾನತ್ತಿನಲ್ಲಿ ಇಡುವಂತಹ ದೊಡ್ಡ ತಪ್ಪು ಅವರೇನು ಮಾಡಿಲ್ಲ” ಎಂದು ನಿರಂಜನಾರಾಧ್ಯ ಅವರು ತಿಳಿದರು.

ಇಸ್ಲಾಂನ ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಗದಗ ಜಿಲ್ಲೆಯ ನಾಗಾವಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ, ಬಲಪಂಥೀಯ ಸಂಘಟನೆಯಾದ ಶ್ರೀರಾಮಸೇನೆಯ ಕಾರ್ಯಕರ್ತರು 172 ವಿದ್ಯಾರ್ಥಿಗಳಿರುವ ಶಾಲೆಗೆ ಅಕ್ರಮವಾಗಿ ನುಗ್ಗಿ ಮುಖ್ಯೋಪಾಧ್ಯಾಯ ಅಬ್ದುಲ್ ಮುನಾಫರ್ ಅವರನ್ನು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದರ ನಂತರ ಸಾರ್ವಜನಿಕ ಶಿಕ್ಷಣ ಇಲಾಖೆಯು ಮುಖ್ಯೋಪಾಧ್ಯರನ್ನು ಅಮಾನತುಗೊಳಿಸಿ ಆದೇಶಿಸಿದೆ ಎಂದು ವರದಿಯಾಗಿದೆ.

ಶಿಕ್ಷಕ ವೃತ್ತಿಯಲ್ಲಿ 28 ವರ್ಷಗಳ ಅನುಭವ ಹೊಂದಿರುವ ನಾನು ಕಳೆದ ಮೂರು ವರ್ಷಗಳಿಂದ ಈ ಶಾಲೆಯಲ್ಲಿ ಕಾರ್ಯನಿರ್ವಹಿಸಿದ್ದೇನೆ. ಹಿಂದೂ ವ್ಯಕ್ತಿಗಳು ಮತ್ತು ಇತರರಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಎಲ್ಲ ದಾಖಲೆಗಳನ್ನು ನಾನು ನಿರ್ವಹಿಸಿದ್ದೇನೆ. ನನ್ನೊಂದಿಗೆ ಕೆಲಸ ಮಾಡುವ ಏಳು ಶಿಕ್ಷಕರಿದ್ದು, ಅದೃಷ್ಟವಶಾತ್ ಅವರು ನನ್ನ ರಕ್ಷಣೆಗೆ ಬಂದರು” ಎಂದು ದಾಳಿಗೆ ಒಳಗಾಗಿರುವ ಅಬ್ದುಲ್ ಮುನಾಫರ್ ಪ್ರತಿಕ್ರಿಯಿಸಿದ್ದಾರೆ.

Previous Post

PFI Ban ವಿರುದ್ಧ ಸುಪ್ರೀಂ ಕೋರ್ಟ್‌ಗೆ: ಸಿಎಫ್‌ಐ, ತಮಿಳುನಾಡು ಪಿಎಫ್‌ಐ ಮುಖ್ಯಸ್ಥರ ಘೋಷಣೆ

Next Post

ಶತಮಾನಗಳ ಕಾಲ ಹಿಂದೂಸ್ತಾನವನ್ನು ಅಳಿದ ಮೊಘಲರಿಂದಲೇ ಇಸ್ಲಾಮಿಕ್ ರಾಷ್ಟ್ರ ಮಾಡುವುದು ಸಾಧ್ಯವಾಗಲಿಲ್ಲ: ಕುಮಾರಸ್ವಾಮಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.