

ನವದೆಹಲಿ: ಬಿಜೆಪಿಯಿಂದ (BJP) ಟಿಪ್ಪು ಪರಂಪರೆಯನ್ನು ಅಳಿಸಲು ಸಾಧ್ಯವೇ ಇಲ್ಲ ಎಂದು ಹೈದರಾಬಾದ್ ಸಂಸದ ಹಾಗೂ ಎಐಎಂಐಎಂ (AIMIM) ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi) ಎಚ್ಚರಿಸಿದ್ದಾರೆ.
ಬೆಂಗಳೂರು – ಮೈಸೂರು ಸಂಪರ್ಕ ಕಲ್ಪಿಸುವ ರೈಲಿಗೆ ಟಿಪ್ಪು ಎಕ್ಸ್‌ಪ್ರೆಸ್ (Tippu Express) ಹೆಸರಿಗೆ ಬದಲಾಗಿ ಒಡೆಯರ್ ಎಕ್ಸ್‌ಪ್ರೆಸ್ (Wodeyar Express) ಎಂದು ಮರುನಾಮಕರಣ ಮಾಡಿರುವ ವಿಚಾರಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
BJP govt renamed Tippu Express to Wodeyar Express. Tipu irks BJP because he waged 3 wars against its British masters. Another train could have been named after Wodeyars. BJP will never be able to erase Tipu’s legacy. He scared British while alive & scares British slaves even now pic.twitter.com/vsFJi5fR1D — Asaduddin Owaisi (@asadowaisi) October 9, 2022
ಈ ಕುರಿತು ಟ್ವೀಟ್ ಮಾಡಿರುವ ಓವೈಸಿ, ಬ್ರಿಟಿಷರ ವಿರುದ್ಧ ಟಿಪ್ಪು ಮಾಡಿದ್ದ ಮೂರು ಯುದ್ಧಗಳು (War) ಬಿಜೆಪಿಯನ್ನು ಕೆರಳಿಸಿದೆ. ಅವರು ಬೇಕಿದ್ದರೆ ಇನ್ನೊಂದು ರೈಲಿಗೆ ಒಡೆಯರ್ ಹೆಸರಿಡಬಹುದಿತ್ತು. ಏನೇ ಮಾಡಿದರೂ ಟಿಪ್ಪು ಪರಂಪರೆಯನ್ನು (Tippu Legancy) ಅಳಿಸಲು ಬಿಜೆಪಿಯಿಂದ ಸಾಧ್ಯವಿಲ್ಲ. ಟಿಪ್ಪು ಬದುಕಿದ್ದಾಗ ಬ್ರಿಟಿಷರನ್ನು ಹೆದರಿಸಿದ್ದರು. ಈಗ ಬ್ರಿಟಿಷ್ ಗುಲಾಮರನ್ನು ಎದುರಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
BJP doesn’t want to erase the legacy of Tipu. On the contrary, we want his true legacy to be known to the people. Tipu was a barbarian, who inflicted untold miseries on the Kodavas in Coorg, the Syrian Christians in Mangalore, the Catholics, the Konkanis, the Nairs of Malabar… https://t.co/TjSMFrkh4A — Amit Malviya (@amitmalviya) October 9, 2022