

ದೀಪಾವಳಿ ಹಬ್ಬದ ನೆಪದಲ್ಲಿ, ಮುಂದಿನ ಚುನಾವಣೆಯ ಪರಿಣಾಮಗಳನ್ನು ಊಹಿಸಿ ಬಿಜೆಪಿ ಸರ್ಕಾರ ರಾಜ್ಯದ ಕೆಲವು ಪತ್ರಕರ್ತರಿಗೆ ಎರಡೂವರೆ ಲಕ್ಷ ರೂ.ಗಳಷ್ಟು ಲಂಚವನ್ನು ನೀಡಿರುವ ಎಂಬ ಆರೋಪ ಬಂದಿದ್ದು, ಈ ಕುರಿತು ಪ್ರತಿಪಕ್ಷ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ.
ದೀಪಾವಳಿಯ ಸಂದರ್ಭದಲ್ಲಿ ಕರ್ನಾಟಕದ ಆಯ್ದ ಪತ್ರಕರ್ತರಿಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಸಿಹಿತಿಂಡಿಗಳ ಜೊತೆಗೆ ತಲಾ 2.5 ಲಕ್ಷ ರೂಗಳನ್ನು ಗಿಫ್ಟ್ ರೂಪದಲ್ಲಿ ಲಂಚ ನೀಡಿರುವ ಆರೋಪದ ಆಘಾತಕಾರಿ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ದೀಪಾವಳಿಯ ಸಂದರ್ಭದಲ್ಲಿ, ಕರ್ನಾಟಕದ ಬಹುತೇಕ ಎಲ್ಲಾ ಪತ್ರಕರ್ತರು ಮುಖ್ಯಮಂತ್ರಿಗಳ ಕಚೇರಿಯಿಂದ ಸಿಹಿತಿಂಡಿಗಳು ಮತ್ತು ತಲಾ 2.5 ಲಕ್ಷ ನಗದು ಉಡುಗೊರೆಯಾಗಿ ನೀಡಿದ್ದಾರೆ. ದಯವಿಟ್ಟು ಚುನಾವಣೆಯವರೆಗೂ ಮಾಧ್ಯಮಗಳಿಂದ ಸರ್ಕಾರದ ವಿರೋಧಿ ಸುದ್ದಿಗಳನ್ನು ನಿರೀಕ್ಷಿಸಬೇಡಿ” ಎಂಬ ವೈರಲ್ ವಾಟ್ಸಾಪ್ ಸಂದೇಶದ ಜಾಡು ಹಿಡಿದು ಹೊರಟಾಗ ಸರ್ಕಾರದ ಬೃಹತ್ ಭ್ರಷ್ಟಾಚಾರ ಬಯಲಿಗೆ ಬಂದಿದೆ.