

ಕೇಂದ್ರ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ದಿನಾಂಕವನ್ನು ಡಿಸೆಂಬರ್ 24 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ವೋಟರ್ ಐಡಿ ಪರಿಕ್ಷರಣೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ ಮಧ್ಯವ್ರವೇಶಿಸಿದೆ. ಮತದಾರರ ಪಟ್ಟಿ ಪರಿಷ್ಕರಣೆ ದಿನಾಂಕವನ್ನು ಡಿಸೆಂಬರ್ 24 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ ಇಲೆಕ್ಷನ್ ಕಮಿಷನ್ ಆಫ್ ಇಂಡಿಯಾ ಶಿವಾಜಿನಗರ, ಚಿಕ್ಕಪೇಟೆ, ಮಹದೇವಪುರ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆಯ ಸಮಯಾವಕಾಶವನ್ನು ಹೆಚ್ಚಿಸಿದೆ.