

ದಾವಣಗೆರೆ: ಬಿಜೆಪಿಗೆ (BJP) ರೌಡಿಗಳು ಸೇರ್ಪಡೆಯಾಗುತ್ತಿದ್ದಾರೆ, ಬಿಜೆಪಿ ರೌಡಿಗಳ ಪಕ್ಷ ಎಂದು ಕಾಂಗ್ರೆಸ್ (Congress) ಆರೋಪ ಮಾಡುತ್ತಿದೆ. ಆದರೆ ಕಾಂಗ್ರೆಸ್ ರಾಜ್ಯಾಧ್ಯಕ್ಷನೇ ಒಬ್ಬ ರೌಡಿಶೀಟರ್. ಕೊತ್ವಾಲ ರಾಮಚಂದ್ರನ ಶಿಷ್ಯ ಡಿ.ಕೆ ಶಿವಕುಮಾರ್ (DK Shivakumar) ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ (MP Renukacharya) ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ.
ಹೊನ್ನಾಳಿಯಲ್ಲಿ ಮಾತನಾಡಿದ ರೇಣುಕಾಚಾರ್ಯ, ಕಾಂಗ್ರೆಸ್ ಗೂಂಡಾಗಳನ್ನು, ರೌಡಿಗಳನ್ನು ಪೋಷಿಸುವ ಸಂಸ್ಕೃತಿ ಹೊಂದಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದೇ ಮ್ಯಾನ್‌ಪವರ್ ಮತ್ತು ಮನಿ ಪವರ್‌ನಿಂದ. ಅಲ್ಲದೆ ರೌಡಿಗಳ ಪಕ್ಷ ಎಂದರೆ ಕಾಂಗ್ರೆಸ್, ರೌಡಿ ಭಾಗ್ಯ ಕೊಟ್ಟಿದ್ದೇ ಕಾಂಗ್ರೆಸ್. ಎಲ್ಲಾ ರೌಡಿಗಳೂ ಕಾಂಗ್ರೆಸ್‌ನಲ್ಲೇ ಇರೋದು ಎಂದರು.