

ಕೊಪ್ಪಳ: ಇಂದಿನ ಸಾಮಾಜಿಕ ಜಾಲತಾಣ ಜಮಾನಾಗೆ ತಕ್ಕಂತೆ ಇನ್ಸ್ಟಾಗ್ರಾಂ (Love Marriage) ಮೂಲಕ ನಡೆಯಿತಾ ಲವ್ . . ಇನ್ಸ್ಟಾಗ್ರಾಂನಲ್ಲಿ ಹಿಂದೂ (Hindu) ಯುವತಿ ಮುಸ್ಲಿಂ (Muslim) ಯುವಕ ನಡುವೆ ಪ್ರೀತಿ ಮೊಳಕೆಯೊಡೆದಿದೆ (Love Marriage). ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಈ ಇನ್ಸ್ಟೆಂಟ್ ಇನ್ಸ್ಟಾಗ್ರಾಂ ಲವ್ ಪ್ರಕರಣ ವರದಿಯಾಗಿದೆ. ಹೈದ್ರಾಬಾದ್ ಮೂಲದ ಯುವಕ ಶೇಕ್ ವಹಿದ್ ಹಾಗೂ ಕೊಪ್ಪಳ ಜಿಲ್ಲೆಯ ಕುಷ್ಟಗಿ (Kushtagi) ಪಟ್ಟಣದ ಇಂದಿರಾನಗರದ ಯುವತಿ ಮದುವೆಯಾದ ಜೋಡಿ ಎಂದು ತಿಳಿದುಬಂದಿದೆ.
ಕಳೆದ ನಾಲ್ಕು ವರ್ಷಗಳ ಹಿಂದೆ ಇನ್ಸ್ಟಾಗ್ರಾಂ ನಲ್ಲಿ ಈ ಜೋಡಿ ಪರಿಚಯವಾಗಿದೆ. ಮೊದಲು ಸ್ನೇಹ ಬೆಳೆದು, ಬಳಿಕ ಪ್ರೀತಿಗೆ ತಿರುಗಿದೆ ಆ ಸ್ನೇಹ. ಸದ್ಯ ಪ್ರೇಮ ವಿವಾಹವಾಗಿರುವ ಜೋಡಿ. ಮುಸ್ಲಿಂ ಸಾಂಪ್ರದಾಯದಂತೆ ಯುವತಿ ಮದುವೆಯಾಗಿದ್ದಾರೆ. ಯವತಿ, ಮನೆ ಬಿಟ್ಟು ಹೋಗಿ ಮದುವೆಯಾಗಿದ್ದಾರೆ. ಕುಷ್ಟಗಿ ಪಟ್ಟಣದಲ್ಲಿ ಲವ್ ಜಿಹಾದ್ ಪ್ರಕರಣ (Love Jihad) ನಡೆದಿದೆ ಎನ್ನೋ ಆರೋಪ ಎದುರಾಗುತ್ತಿದ್ದಂತೆ ಇಬ್ಬರೂ ಪ್ರೇಮಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಲವಂತದ ಮತಾಂತರದ ಕುರಿತು ಸಹ ಪೊಲೀಸರು ತನಿಖೆ ನಡೆಸಿದ್ದಾರೆ. ಮನಪೂರ್ವಕವಾಗಿ ಇಸ್ಲಾಂ ಧರ್ಮವನ್ನು ಸ್ವೀಕರಿಸಿ, ವಿವಾಹ ಆಗಿರುವುದಾಗಿ ಪೊಲೀಸರ ಎದುರು ಯುವತಿ ಹೇಳಿಕೆ ನೀಡಿದ್ದಾರೆ.