

ಮಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ (Cooker Blast) ಪ್ರಕರಣದ ತನಿಖೆಯನ್ನು ಎನ್ಐಎ ಚುರುಕುಗೊಳಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಇಂದು(ಜನವರಿ 05) ಮಂಗಳೂರಿನ ಪಿ.ಎ.ಇಂಜಿನಿಯರಿಂಗ್ ಕಾಲೇಜ್ (Mangaluru PA Engineering College)ಮೇಲೆ ದಾಳಿ ಮಾಡಿದ್ದಾರೆ. ಬೆಂಗಳೂರಿನಿಂದ ಬಂದಿರುವ 7 NIA ಅಧಿಕಾರಿಗಳು ಕಾಲೇಜಿನಲ್ಲಿ ಪರಿಶೀಲನೆ ನಡೆಸಿದ್ದಾರೆ.
ಬಂಧಿತ ಶಂಕಿತ ಮಾಜ್ರ್ ಮುನೀರ್ ಪಿ. ಎ.ಎಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ ಪಡೆದಿದ್ದಾನೆ . ಹಾಗೂ ಶಂಕಿತ ಶಾರಿಕ್ ವಿಚಾರಣೆ ನಡೆಸಿದ ಬಳಿಕ ಆತನಿಂದ ಕೆಲ ಮಾಹಿತಿಗಳ ಆಧಾರದ ಮೇಲೆ NIA ಅಧಿಕಾರಿಗಳು ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಟ್ರಾಯಲ್ ಬ್ಲಾಸ್ಟ್ ನಲ್ಲಿ ಶಿವಮೊಗ್ಗ ಪೊಲೀಸರು ಮಾಝ್ ಮುನೀರ್ ಬಂಧಿಸಿದ್ದರು. ಸದ್ಯ ಈ ಪ್ರಕರಣದ ತನಿಖೆಯನ್ನು ಎನ್.ಐ.ಎ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟಕ್ಕೂ ನಂಟು ಸಾಧ್ಯತೆ ಇದ್ಯಾ ಎನ್ನುವ ಬಗ್ಗೆ ತನಿಖೆ ನಡೆಸಿದ್ದಾರೆ.