

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ (Moral Policing) ಪ್ರಕರಣಗಳು ಹೆಚ್ಚಾಗುತ್ತಿದೆ. ಕಳೆದ ಕೆಲ ವಾರಗಳಲ್ಲಿ ಈ ರೀತಿ ಆರುಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಈಗ ಅಂತಹದೇ ಒಂದು ಘಟನೆ ಬೆಳಕಿಗೆ ಬಂದಿದೆ. ಹುಡುಗಿಯೊಂದಿಗೆ ತಿರುಗಾಡುತ್ತಿದ್ದ ಮುಸ್ಲಿಂ ಯುವಕನಿಗೆ ಥಳಿಸಿ ನೈತಿಕ ಪೊಲೀಸ್ ಗಿರಿ ಮೇರೆದಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕ ಕಲ್ಲುಗುಂಡಿಯ ಅಫೀದ್ ಎಂದು ತಿಳಿದು ಬಂದಿದ್ದು, ಸದ್ಯ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವಿದ್ಯಾರ್ಥಿನಿಯೊಂದಿಗೆ ತಿರುಗಾಡುತ್ತಿದ್ದ ಬಗ್ಗೆ ಮಾಹಿತಿಯಿದ್ದು, ಕುಕ್ಕೆ ಸುಬ್ರಹ್ಮಣ್ಯ ಬಸ್ಸ್ಟ್ಯಾಂಡ್ನಲ್ಲಿ ಈ ಜೋಡಿ ಕಂಡು ಬಂದಿದೆ. ಬಳಿಕ ಕುಮಾರಧಾರ ಬಳಿ ಬಂದಾಗ ಗುಂಪೊಂದು ಯುವಕನಿಗೆ ಥಳಿಸಿದ್ದಾರೆ. ಯುವಕನ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವಿದ್ಯಾರ್ಥಿನಿ ಅಪ್ರಾಪ್ತೆಯಾಗಿದ್ದು, ಆಕೆಯ ತಂದೆಯಿಂದಲೂ ಪೊಲೀಸ್ ದೂರು ನೀಡಲಾಗಿದ್ದು, ಯುವಕನ ವಿರುದ್ದ ಸುಬ್ರಹ್ಮಣ್ಯ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಿಂದೂ ಯುವತಿಯನ್ನು ಭೇಟಿಯಾಗಿದ್ದಾನೆ ಎಂದು ಆರೋಪಿಸಿ ಸಂಘಪರಿವಾರದ ಕಾರ್ಯಕರ್ತರು ಯುವಕನ ಮೇಲೆ ಕ್ರೂರವಾಗಿ ಥಳಿಸಿ, ಮೃಗೀಯವಾಗಿ ವರ್ತಿಸಿ ಹಲ್ಲೆ ನಡೆಸಿದ್ದಾರೆ.
ಹಲ್ಲೆಗೊಳಗಾದ ಯುವಕನನ್ನು ಕಲ್ಲುಗುಂಡಿ ನಿವಾಸಿ ಅಫೀದ್ (20) ಹಲ್ಲೆಗೊಳಗಾದ ಯುವಕ. ಈತನನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಅಫೀದ್ ಸುಬ್ರಹ್ಮಣ್ಯ ಬಸ್ ಸ್ಟಾಂಡ್’ನಲ್ಲಿ ನಿಂತಿದ್ದಾಗ ಅಲ್ಲಿಗೆ ಬಂದ ಗುಂಪೊಂದು ಏಕಾಏಕಿ ಆತನ ಮೇಲೆ ದೊಣ್ಣೆ, ಕಬ್ಬಿಣದ ರಾಡ್’ನಿಂದ ಕ್ರೂರವಾಗಿ ಥಳಿಸಿದೆ ಎಂದು ತಿಳಿದು ಬಂದಿದೆ.
ಪರಿಣಾಮ ಯುವಕನ ತಲೆ, ಬೆನ್ನು, ಕೈ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹಲ್ಲೆ ನಡೆಸಿದ ಗುಂಪು ಯುವಕನ ಮೊಬೈಲ್ ತೆಗೆದುಕೊಂಡು ಅದರಲ್ಲಿ “ನನ್ನನ್ನು ಕ್ಷಮಿಸಿ, ನಾನು ಇನ್ನು ಮುಂದೆ ಲವ್ ಜಿಹಾದ್ ವಿಷಯಕ್ಕೆ ಬರುವುದಿಲ್ಲ” ಎಂದು ಸ್ಟೇಟಸ್ ಹಾಕಿದ್ದಾರೆ ಎನ್ನಲಾಗಿದೆ
