

ಬೆಂಗಳೂರು (ಜ.9): ಸಿದ್ದರಾಮಯ್ಯ ಅವರ ಕುರಿತಾಗಿ ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆ ಮಾಡಲು ಪ್ರಯತ್ನಿಸಿದ್ದ ಬಿಜೆಪಿಗೆ ಹಿನ್ನಡೆಯಾಗಿದೆ. ಈ ಕುರಿತಾಗಿ ಸಿಟಿ ಸಿವಿಲ್ ಕೋರ್ಟ್‌ಗೆ ಯತೀಂದ್ರ ಸಿದ್ದರಾಮಯ್ಯ ಅರ್ಜಿ ಸಲ್ಲಿಸಿದ್ದರು. ಸೋಮವಾರ ಇದರ ವಿಚಾರಣೆ ನಡೆಸಿದ ಕೋರ್ಟ್ ಪುಸ್ತಕ ಬಿಡುಗಡೆ ಹಾಗೂ ಮಾರಾಟಕ್ಕೆ ತಡೆಯಾಜ್ಞೆ ನೀಡಿದೆ.ಪುಸ್ತಕ ಬಿಡುಗಡೆಗೆ ತಡೆ ಕೋರಿ ರಾಜ್ಯ ಕಾಂಗ್ರೆಸ್ ಕೋರ್ಟ್ ಮೆಟ್ಟಿಲೇರಿತ್ತು. ಇದರ ವಿಚಾರಣ ನಡೆಸಿದ ಕೋರ್ಟ್, ಪುಸ್ತಕ ಮಾರಾಟ, ಬಿಡುಗಡೆ, ಮಾಧ್ಯಮಗಳ ಪ್ರಸಾರಕ್ಕೂ ತಡೆ ನೀಡಿದೆ. ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಈ ಕುರಿತಾಗಿ ಅರ್ಜಿ ಸಲ್ಲಿಸಿದ್ದರು. ಪುಸ್ತಕ ಬಿಡುಗಡೆಯಾದರೆ ಸಿದ್ದರಾಮಯ್ಯ ವರ್ಚಸ್ಸಿಗೆ ಧಕ್ಕೆಯಾಗಲಿದೆ. ಸಿದ್ದರಾಮಯ್ಯ ಬೆಂಬಲಿಗರ ಭಾವನೆಗಳಿಗೂ ಧಕ್ಕೆಯಾಗಲಿದೆ. ನಮ್ಮನ್ನು ಸಂಪರ್ಕಿಸದೇ ಈ ರೀತಿಯ ಪುಸ್ತಕ ಬಿಡುಗಡೆಗೆ ಸಿದ್ಧತೆ ನಡೆಸಿದ್ದಾರೆ ಎಂದು ಅರ್ಜಿಯಲ್ಲಿ ವಾದಿಸಿದ್ದ ಶಾಸಕ ಯತೀಂದ್ರ ಸಿದ್ದರಾಮಯ್ಯ ವಾದ ಮಾಡಿದ್ದರು.