
ನವದೆಹಲಿ: ಬಜೆಟ್‌ನಲ್ಲಿ ಕರ್ನಾಟಕಕ್ಕೆ ಭರ್ಜರಿ ಗಿಫ್ಟ್ ಸಿಕ್ಕಿದ್ದು ಭದ್ರಾ ಮೇಲ್ದಂಡೆ ಯೋಜನೆಯನ್ನು (Upper Bhadra Project) ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಲಾಗಿದೆ. ಈ ಮೂಲಕ ಭದ್ರಾ ಮೇಲ್ದಂಡೆ ಯೋಜನೆ ರಾಜ್ಯದ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆಯಾಗಿ ಹೊರಹೊಮ್ಮಿದೆ.
ಬಜೆಟ್ ಭಾಷಣದಲ್ಲಿ (Union Budget 2023) ನಿರ್ಮಲಾ ಸೀತಾರಾಮನ್ (Nirmala Sitaraman) ಈ ಯೋಜನೆಗೆ 5,300 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ ಎಂದು ಪ್ರಕಟಿಸಿದರು.
ಈ ಹಿಂದೆ ರಾಜ್ಯದ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿ, ‘‘ಯೋಜನೆಗೆ 23,000 ಕೋಟಿ ರೂ. ವೆಚ್ಚವಾಗಲಿದ್ದು, ಸದ್ಯ 16,000 ಕೋಟಿ ರೂ. ವೆಚ್ಚದ ಕೆಲಸ ಬಾಕಿ ಇದೆ. ರಾಷ್ಟ್ರೀಯ ಯೋಜನೆ ಘೋಷಣೆ ನಂತರ ಯೋಜನೆಯಡಿ ಬಾಕಿಯಿರುವ ಮೊತ್ತದಲ್ಲಿಶೇ. 60ರಷ್ಟನ್ನು ಕೇಂದ್ರ ಭರಿಸಲಿದೆ. ಅದರಂತೆ ಕೇಂದ್ರದಿಂದ ಯೋಜನೆಗೆ 5,300 ಕೋಟಿ ರೂ. ಸಿಗುವ ನಿರೀಕ್ಷೆ ಇದೆ,’’ ಎಂದು ತಿಳಿಸಿದ್ದರು.