
ತುರ್ತು ಪರಿಸ್ಥಿತಿಗಳಲ್ಲಿ ಪ್ರಧಾನ ಮಂತ್ರಿಗಳ ನಾಗರಿಕ ನೆರವು ಮತ್ತು ಪರಿಹಾರ (ಪಿಎಂ ಕೇರ್ಸ್) ನಿಧಿಯನ್ನು ಸಾರ್ವಜನಿಕ ಚಾರಿಟಬಲ್ ಟ್ರಸ್ಟ್ ಆಗಿ ಸ್ಥಾಪಿಸಲಾಗಿದೆ. ಇದನ್ನು ಸಂವಿಧಾನ ಅಥವಾ ಸಂಸದೀಯ ಕಾನೂನಿನ ಅಡಿಯಲ್ಲಿ ರಚಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರವು ದೆಹಲಿ ಹೈಕೋರ್ಟ್‌ಗೆ ಅಫಡವಿಟ್ ಸಲ್ಲಿಸಿದೆ.
ಕೊರೊನಾ ವೈರಸ್ ಸಾಂಕ್ರಾಮಿಕದ ನಂತರ, “ಯಾವುದೇ ರೀತಿಯ ತುರ್ತು ಅಥವಾ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಲು ಮೀಸಲಾದ ರಾಷ್ಟ್ರೀಯ ನಿಧಿ” ಎಂದು ಪಿಎಂ ಕೇರ್ಸ್ ಫಂಡ್ ಅನ್ನು ಮಾರ್ಚ್ 2020ರಲ್ಲಿ ಸ್ಥಾಪಿಸಲಾಯಿತು.
ಪಿಎಂ ಕೇರ್ಸ್ ನಿಧಿಯ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸಂವಿಧಾನದ 12 ನೇ ವಿಧಿಯ ಅಡಿಯಲ್ಲಿ ಅದನ್ನು ‘ಸರ್ಕಾರ’ ಎಂದು ಘೋಷಿಸಲು ಕೋರಿದ ಮನವಿಗೆ ಪ್ರತಿಕ್ರಿಯೆಯಾಗಿ ಕೇಂದ್ರವು ಅಫಿಡವಿಟ್ ಸಲ್ಲಿಸಿದೆ.
ಯಾವುದೇ ರೀತಿಯಲ್ಲಿ ಟ್ರಸ್ಟ್‌ನ ಕಾರ್ಯನಿರ್ವಹಣೆಯ ಮೇಲೆ ಕೇಂದ್ರ ಸರ್ಕಾರ ಅಥವಾ ಯಾವುದೇ ರಾಜ್ಯ ಸರ್ಕಾರ/ಗಳ ನೇರ ಅಥವಾ ಪರೋಕ್ಷವಾದ ಯಾವುದೇ ನಿಯಂತ್ರಣವಿಲ್ಲ” ಎಂದು ಅಫಿಡವಿಟ್ ಹೇಳಿದೆ.
ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ಮಾಹಿತಿ ನೀಡಲು ಫಿಎಂ ಕೇರ್ಸ್ ಫಂಡ್ ಸಾರ್ವಜನಿಕ ಸಂಸ್ಥೆಯಲ್ಲ” ಎಂದು ಸರ್ಕಾರ ಪುನರುಚ್ಚರಿಸಿದೆ, “ಆದ್ದರಿಂದ ಅದನ್ನು ಪರಿಶೀಲನೆಗೆ ತೆಗೆದುಕೊಳ್ಳಬಾರದು” ಎಂದು ಸರ್ಕಾರ ವಾದಿಸಿದೆ.
“ವ್ಯಕ್ತಿಗಳು ಮತ್ತು ಸಂಸ್ಥೆಗಳಿಂದ ಸ್ವಯಂಪ್ರೇರಿತ ದೇಣಿಗೆಗಳನ್ನು ಮಾತ್ರ ನಿಧಿ ಸ್ವೀಕರಿಸುತ್ತದೆ” ಎಂದು ಸರ್ಕಾರ ಹೇಳಿದೆ. ಆದರೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಶ್ಯಾಮ್ ದಿವಾನ್, “ಉಪರಾಷ್ಟ್ರಪತಿಗಳಂತಹ ಸರ್ಕಾರದ ಭಾಗವಾಗಿರುವವರು ದೇಣಿಗೆ ನೀಡುವಂತೆ ರಾಜ್ಯಸಭಾ ಸದಸ್ಯರಲ್ಲಿ ಮನವಿ ಮಾಡಿದ್ದರು” ಎಂದು ಉಲ್ಲೇಖಿಸಿದ್ದಾರೆ.
“ಸರ್ಕಾರ ಭಾಗವಲ್ಲದಿದ್ದರೆ ಸರ್ಕಾರಿ ಚಿಹ್ನೆಗಳು ಅಥವಾ ಸರ್ಕಾರಿ ವೆಬ್‌ಸೈಟ್ ಹೊಂದಲು ಸಾಧ್ಯವಿಲ್ಲ. ಇದರಿಂದಾಗಿ ಸಾರ್ವಜನಿಕರು ನಿಮ್ಮನ್ನು ‘ಸರ್ಕಾರ’ ಎಂದು ಭಾವಿಸುತ್ತಾರೆ” ಎಂದು ತಿಳಿಸಿದ್ದಾರೆ.
ಮೊದಲಿನಿಂದಲೂ ಇರುವ ಪಿಎಂ ರಿಲೀಫ್ ಫಂಡ್‌ಗೆ ಪಿಎಂ ಕೇರ್ಸ್ ಹಣ ಕೊಡುತ್ತದೆಯಂತೆ! ಈ ಡಬ್ಬಲ್ ಎಂಜಿನ್ ಯಾಕೆ ಬೇಕಿತ್ತು? ಒಂದು ಅಧಿಕೃತ ಇರುವಾಗ ಇನ್ನೊಂದು ಅನಧಿಕೃತ ಯಾಕೆ ಬೇಕಿತ್ತು? ಪಿಎಂ ರಿಲೀಫ್ ಫಂಡ್ ಮೂಲಕ ಮಾಡಲಾಗದ ಯಾವ ಘನಂದಾರಿ ಕೆಲಸವನ್ನು ಪಿಎಂ ಕೇರ್ಸ್ ಮಾಡುತ್ತದೆ? ನರೇಂದ್ರ ಮೋದಿ ಸರ್ಕಾರ ಬಿದ್ದು ಹೋಗಿ, ಹೊಸ ಸರ್ಕಾರ ಬಂತು ಎಂದಿಟ್ಟುಕೊಳ್ಳಿ. ಆಗ ಟ್ರಸ್ಟ್ ಹಣೆ ಬರೆಹವೇನು? ಹೊಸ ಪ್ರಧಾನಿಗೆ ಅಲ್ಲಿ ಪಾತ್ರವೇ ಇರುವುದಿಲ್ಲ. ಪ್ರಧಾನಿ ಬದಲಾದರೂ ಮೋದಿಯೇ ಪಿಎಂ ಕೇರ್ಸ್ ನಿರ್ವಹಿಸುತ್ತಾರೆಯೇ? ಆಗ ಪ್ರಧಾನಿಯಲ್ಲದ ವ್ಯಕ್ತಿ ಪ್ರಧಾನಿ ಹೆಸರಲ್ಲಿ ಹೇಗೆ ಟ್ರಸ್ಟ್ ನಡೆಸುತ್ತಾರೆ? ಇದೆಲ್ಲ ಗಮನಿಸಿದರೆ ಪಿಎಂ ಕೇರ್ಸ್ ಕೂಡ ಒಂದು ದೊಡ್ಡ ಫ್ರಾಡ್ ಎಂದು ಅನಿಸುವುದಿಲ್ಲವೇ? ದೇಶವನ್ನು ಮುನ್ನಡೆಸಬೇಕಾದವರೇ ಇಂಥ ದಂಧೆಗೆ ಇಳಿದರೆ ದೇಶ ಉಳಿಯಲು ಸಾಧ್ಯವೇ?” ಎಂದು ದಿನೇಶ್‌ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ.