

ಬೆಂಗಳೂರು: ಕರ್ನಾಟಕ ಬಜೆಟ್ಗೆ (Karnataka Budget 2023) ಕ್ಷಣಗಣನೆ ಆರಂಭವಾಗಿದ್ದು, ಬೆಳಿಗ್ಗೆ 10.15ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavarj Bommai) ಬಜೆಟ್ ಮಂಡನೆ ಮಾಡಲಿದ್ದಾರೆ. ಇದು ಈ ಸರ್ಕಾರದ ಕೊನೆಯ ಬಜೆಟ್ ಆಗಿದ್ದು, ಬೊಮ್ಮಾಯಿ ಅವರು ಮಂಡನೆ ಮಾಡುತ್ತಿರುವ ಎರಡನೇ ಬಜೆಟ್ ಆಗಿದೆ. ಹಿಗಾಗಿ ನಿರೀಕ್ಷೆಗಳು ಹೆಚ್ಚಾಗಿವೆ. ಕೆಲ ಮಹತ್ವದ ಯೋಜನೆಗಳ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಜನಪ್ರಿಯ ಬಜೆಟ್ ಮಂಡಿಸಲು ಬೊಮ್ಮಾಯಿ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ. ಬಜೆಟ್ ಮಂಡನೆಗೂ ಮುನ್ನ ಮುಖ್ಯಮಂತ್ರಿಗಳು ಬೆಂಗಳೂರಿನ ಆರ್.ಟಿ. ನಗರದಲ್ಲಿರುವ ಶ್ರೀಕಂಠೇಶ್ವರ ಆಂಜನೇಯ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆಯಲಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ವಿಧಾನಸೌಧದಲ್ಲಿ ಬೆಳಗ್ಗೆ 9.45ಕ್ಕೆ ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಬಜೆಟ್ಗೆ ಅನುಮೋದನೆ ಪಡೆಯಲಿದ್ದಾರೆ. ಬಜೆಟ್ ಮಂಡನೆ ಬಳಿಕ ಮಧ್ಯಾಹ್ನ 2 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿರುವ ಮುಖ್ಯಮಂತ್ರಿಗಳು ಹೆಚ್ಚಿನ ವಿವರ ನೀಡಲಿದ್ದಾರೆ.

ಬೆಂಗಳೂರು ಮೂಲಸೌಕರ್ಯ ಅಭಿವೃದ್ಧಿಗಾಗಿ ಬಜೆಟ್ನಲ್ಲಿ ಬಂಪರ್ ಕೊಡುಗೆ ನೀಡುವ ಸಾಧ್ಯತೆ ಇದೆ. ಖಾದಿ ಮತ್ತು ಗ್ರಾಮೋದ್ಯೋಗಕ್ಕೆ ವಿಶೇಷವಾದ ಒತ್ತು, ಅನುದಾನ ಹಾಗೂ ನೇಕಾರರಿಗೆ ಇನ್ನಷ್ಟು ಬೆಂಬಲ ನೀಡಲು ಹೆಚ್ಚಿನ ಆದ್ಯತೆ ನೀಡುವ ನಿರೀಕ್ಷೆ ಇದೆ. ಕಚ್ಚಾ ವಸ್ತುವಿನಿಂದ ಹಿಡಿದು, ತಂತ್ರಜ್ಞಾನ ಅಭಿವೃದ್ಧಿ ವರೆಗೆ ಹೆಚ್ಚಿನ ನೆರವು ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಬಜೆಟ್ ನಿರೀಕ್ಷೆಗಳೇನೇನು?
ಬಡವರು, ರೈತರು, ದೀನ ದಲಿತರು, ಮಧ್ಯಮ ವರ್ಗ, ದುಡಿಯುವ ವರ್ಗಕ್ಕೆ ಹೆಚ್ಚು ನಿರೀಕ್ಷೆ
ಸಾಂಪ್ರದಾಯಿಕ ವೃತ್ತಿ ಮಾಡಲು ಇಚ್ಛಿಸುವವರಿಗೆ 50 ರೂ. ಸಾವಿರ ಪ್ರೋತ್ಸಾಹ ಧನ
ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ
ರೈತರ ಬೆಳೆಗೆ ಬಿತ್ತನೆ ಸಂದರ್ಭದಲ್ಲೇ ಖರ್ಚು ವೆಚ್ಚದ ಆಧಾರದ ಮೇಲೆ ಲಾಭದಾಯಕ ದರ ಫಿಕ್ಸ್ ಮಾಡುವುದು
ಗಾಣಿಗ, ಮಡಿವಾಳ, ಮೇದಾರ, ನೇಕಾರ, ಕುಂಬಾರ, ಅಕ್ಕಸಾಲಿಗ ಸಮುದಾಯಗಳಿಗೆ ಪ್ರತ್ಯೇಕ ನಿಗಮ ಸಾಧ್ಯತೆ
ಸರ್ಕಾರಿ ನೌಕರರ ಮನಗೆಲ್ಲೋಕೆ 7 ನೇ ವೇತನ ಆಯೋಗದ ಶಿಫಾರಸು ಜಾರಿ ಬಗ್ಗೆ ಘೋಷಣೆ ಮಾಡಲು ಚಿಂತನೆ
ಆರೋಗ್ಯ ಕ್ಷೇತ್ರದಲ್ಲಿ ನಮ್ಮ ಕ್ಲಿನಿಕ್ಗಳನ್ನು ರಾಜ್ಯದ ಎಲ್ಲಾ ಹೋಬಳಿಗಳಲ್ಲಿ ಸ್ಥಾಪಿಸುವ ಬಗ್ಗೆ ಘೋಷಣೆ
ಬೆಂಗಳೂರು ನಗರದಲ್ಲಿ ಸಮಗ್ರವಾಗಿ ರಾಜಕಾಲುವೆ ಪುನರ್ನಿಮಾಣ ಮಾಡಲು ಐಐಎಸ್ ಸಿ ಸೇರಿದಂತೆ ಇತರೆ ವರದಿಗಳನ್ನು ಆಧರಿಸಿ ಬೆಂಗಳೂರಿನ ಒಳಚರಂಡಿ ವ್ಯವಸ್ಥೆಯನ್ನು ಸುಧಾರಣೆಗಾಗಿ ವಿಶೇಷವಾದ ಮಾಸ್ಟರ್ ಪ್ಲಾನ್ಗ್ರಾ
ವಿದ್ಯುತ್ ವಾಹನ ಖರೀದಿದಾರರಿಗೆ ತೆರಿಗೆ ವಿನಾಯಿತಿ, ಸಾರಿಗೆ ಇಲಾಖೆಗೆ ವಿದ್ಯುತ್ ಚಾಲಿತ ಬಸ್ ಗಳ ಖರೀದಿಗೆ ಅನುದಾನ

