Karnataka Budget 2023


ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಶುಕ್ರವಾರ 20203-24ನೇ ಸಾಲಿನ ಬಜೆಟ್ (Karnataka Budget 2023) ಮಂಡನೆ ಮಾಡುತ್ತಿದ್ದು, ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ 9,698 ಕೋಟಿ ರೂ. ಗಳ ಅನುದಾನ ಘೋಷಿಸಿದರು.
ಬೆಂಗಳೂರು ಮಹಾನಗರದ ಮಾರುಕಟ್ಟೆಗಳು, ಬೃಹತ್ ವಾಣಿಜ್ಯ ಮಳಿಗೆಗಳು ಮತ್ತಿತರ ಜನನಿಬಿಡ ಪ್ರದೇಶಗಳಲ್ಲಿ ಮಹಿಳೆಯರ ಅನುಕೂಲಕ್ಕಾಗಿ 250 ಸುಸಜ್ಜಿತ ‘ She Toilet’ ಗಳನ್ನು ನಿರ್ಮಿಸಲಾಗುವುದು ಎಂದು ಸಿಎಂ ಹೇಳಿದರು.

ಈ ಸಂಕೀರ್ಣದಲ್ಲಿ ಶೌಚಾಲಯಗಳು, ಫೀಡಿಂಗ್ ರೂಂಗಳು, ಮೊಬೈಲ್ ಚಾರ್ಜಿಂಗ್, ತುರ್ತು ಎಸ್‍ಓಎಸ್ ಸೌಲಭ್ಯಗಳು ಇತ್ಯಾದಿಯನ್ನು ಒಳಗೊಂಡಂತೆ, ಆಧುನಿಕ ವಿನ್ಯಾಸದೊಂದಿಗೆ 50 ಕೋಟಿ ರೂ. ಗಳಲ್ಲಿ ನಿರ್ಮಿಸಲಾಗುವುದು.

ಒಟ್ಟಿನಲ್ಲಿ ಬೆಂಗಳೂರು ಸಮಗ್ರ ಅಭಿವೃದ್ಧಿ ವಲಯಕ್ಕೆ 20203-24ನೇ ಸಾಲಿಗೆ 9,698 ಕೋಟಿ ರೂ. ಗಳ ಅನುದಾನ ಒದಗಿಸಲಾಗುವುದು ಎಂದು ಹೇಳಿದರು.