

ಪುಲ್ವಾಮಾದಲ್ಲಿ ಉಗ್ರರು ಕಾಶ್ಮೀರಿ ಪಂಡಿತರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟಿದ್ದಾರೆ.
ಪುಲ್ವಾಮಾದಲ್ಲಿ ಉಗ್ರರು ಕಾಶ್ಮೀರಿ ಪಂಡಿತರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟಿದ್ದಾರೆ. ಸಂಜಯ್ ಶರ್ಮಾ(40) ಮೃತರು, ಸ್ಥಳೀಯ ಮಾರುಕಟ್ಟೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸಂಜಯ್ರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸಂಜಯ್ ಶರ್ಮಾ ಜಮ್ಮು ಕಾಶ್ಮೀರದ ಬ್ಯಾಂಕ್ ಒಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು.

